ಮೆಹಬೂಬಾ ಮುಫ್ತಿ ಅವರನ್ನು ಭೇಟಿಯಾದ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ – Abdullah met Mufti
ಹೊಸದಿಲ್ಲಿ, ಅಕ್ಟೋಬರ್15: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತನ್ನ ತಂದೆ ಮತ್ತು ರಾಷ್ಟ್ರೀಯ ಸಮ್ಮೇಳನ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಜತೆ ಪಿಡಿಪಿ ಅಧ್ಯಕ್ಷ ಮೆಹಬೂಬಾ ಮುಫ್ತಿ ಅವರನ್ನು ಭೇಟಿಯಾದರು. Abdullah met Mufti

ಜಮ್ಮು ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮುಖ್ಯಸ್ಥೆ, ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರಿಗೆ ಮಂಗಳವಾರ ಗೃಹಬಂಧನದಿಂದ ಮುಕ್ತಿ ಸಿಕ್ಕಿದೆ.
ಆಗಸ್ಟ್ 5ರಂದು 370ನೇ ವಿಧಿ ರದ್ದುಪಡಿಸಿದ ಬಳಿಕ ಮುಫ್ತಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು.
ಭಾರತದಲ್ಲಿ ಕೋವಿಡ್ -19 ಲಸಿಕೆ ಯಾರಿಗೆ ಮೊದಲು ? – ನಿರ್ಧರಿಸಲು ಸಮಿತಿ ರಚನೆ
ಮುಫ್ತಿ, ಒಮರ್ ಅಬ್ದುಲ್ಲಾ, ಫಾರೂಕ್ ಅಬ್ದುಲ್ಲಾ ಮತ್ತು ಇತರರನ್ನು ಕಳೆದ ವರ್ಷ ಆಗಸ್ಟ್ 5 ರ ಹಿಂದಿನ ರಾತ್ರಿ ಬಂಧನದಲ್ಲಿಡಲಾಗಿತ್ತು. ಕಣಿವೆಗೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧನದಲ್ಲಿರಿಸಲಾಗಿತ್ತು

ಕೇಂದ್ರವು ಸಂಸತ್ತಿನಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವ ಮೊದಲು, ಹಿಂದಿನ ರಾಜ್ಯದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿ, ಅದನ್ನು ಜಮ್ಮು & ಕಾಶ್ಮೀರ ಮತ್ತು ಲಡಾಖ್‌ನ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು.
ಈ ವರ್ಷದ ಆರಂಭದಲ್ಲಿ ಫಾರೂಕ್ ಮತ್ತು ಒಮರ್ ಅಬ್ದುಲ್ಲಾ ಬಿಡುಗಡೆಯಾಗಿದ್ದರೆ, 60 ರ ಹರೆಯದ ಮೆಹಬೂಬಾ ಅವರ ಗೃಹ ಬಂಧನದ ಅವಧಿ ಮುಗಿದ ಬಳಿಕವೂ ಕಠಿಣ ಪಿಎಸ್‌ಎ ಅಡಿಯಲ್ಲಿ ಗೃಹ ಬಂಧನದ ಅವಧಿಯನ್ನು ಮೂರು ತಿಂಗಳಿಗೆ ವಿಸ್ತರಿಸಿತ್ತು,
https://twitter.com/MehboobaMufti/status/1316325132961341440?s=19
ಬಂಧನದಿಂದ ಬಿಡುಗಡೆಯಾದ ನಂತರ ಅವರ ಯೋಗಕ್ಷೇಮವನ್ನು ವಿಚಾರಿಸಲು ನನ್ನ ತಂದೆ ಮತ್ತು ನಾನು ಈ ಮಧ್ಯಾಹ್ನ ಮೆಹಬೂಬಾ ಮುಫ್ತಿ ಸಾಹಿಬಾ ಅವರನ್ನು ಭೇಟಿ ಮಾಡಿದ್ದೆವು ಎಂದು ಒಮರ್ ಅಬ್ದುಲ್ಲಾ ಅವರು ಪಿಡಿಪಿ ಮುಖ್ಯಸ್ಥರ ನಿವಾಸದಲ್ಲಿ ಮೂವರು ನಾಯಕರು ಸಂಭಾಷಣೆ ನಡೆಸುತ್ತಿರುವ ಚಿತ್ರದೊಂದಿಗೆ ಟ್ವೀಟ್ ಮಾಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://twitter.com/SaakshaTv








