ಬಳ್ಳಾರಿ : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ (James ) , ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಸಿನಿಮಾ. ಜೇಮ್ಸ್ (James )ಸಿನಿಮಾ ಸೆಟ್ಟೇರಿದಾಗಿನಿಂದಲೂ ಒಂದಲ್ಲಾ ಒಂದು ವಿಚಾರಕ್ಕೆ ಸದ್ದು ಮಾಡುತ್ತಲೇ ಇತ್ತು.
ಕೊರೊನಾದಿಂದ ಸ್ಥಗಿತಗೊಂಡಿದ್ದ ಸಿನಿಮಾ ಶೂಟಿಂಗ್ ಇದೀಗ ಮತ್ತೆ ಆರಂಭವಾಗಿದ್ದು, ಗಣಿ ನಾಡು ಬಳ್ಳಾರಿಯಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಕಮಲಾಪುರದ ಬಳಿ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಅಪ್ಪು ಕೂಡ ಅಭಿಮಾನಿಗಳಿಗೆ ನಿರಾಸೆ ಮಾಡದೇ ಅವರ ಜೊತೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ.

ಇನ್ನು ಜೇಮ್ಸ್ ಚಿತ್ರತಂಡ ಇಲ್ಲಿ ನಾಲ್ಕು ದಿನಗಳ ಕಾಲ ಶೂಟಿಂಗ್ ಮಾಡಲಿದೆ. ಇದಾದ ಬಳಿ ಗಂಗಾವತಿಗೆ ತೆರಳಲಿದೆ.
ಇದನ್ನೂ ಓದಿ : ನಾಳೆಯಿಂದ ಥಿಯೇಟರ್ ಗಳು ಓಪನ್ ಸರ್ಕಾರದಿಂದ ಮಾರ್ಗಸೂಚಿ ರಿಲೀಸ್..!
ಈ ಚಿತ್ರಕ್ಕೆ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳಿದ್ದು, ಕಿಶೋರ್ ಪತ್ತಿಕೊಂಡ ಬಂಡವಾಳ ಹೂಡಿದ್ದಾರೆ. ಚರಣ್ ರಾಜ್ ಸಂಗೀತ ಚಿತ್ರಕ್ಕಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








