ಉತ್ತರಪ್ರದೇಶ : ಯೋಗಿನಾಡು ಉತ್ತರಪ್ರದೇಶದಲ್ಲಿ (UP) ಕಾನೂನು ಸುವ್ಯವಸ್ಥೆ ಹಾಳಾಗಿದ್ಯಾ..? ಎಂಬ ಪ್ರಶ್ನೆ ಕಾಡುತ್ತಿದೆ. ಕಾರಣ ಯುಪಿಯಲ್ಲಿ (up) ಕೊಲೆ ಅತ್ಯಾಚಾರ ಪ್ರಕರಣಗಳು ಪ್ರತಿದಿನ ಬೆಳಕಿಗೆ ಬರುತ್ತಲೇ ಇವೆ. ಹತ್ರಾಸ್ ಅತ್ಯಾಚಾರ ಕೊಲೆ ಪ್ರಕರಣ ದೇಶದೆಲ್ಲೆಡೆ ಸದ್ದು ಮಾಡುತ್ತಿದೆ.
ಭಾರತದ ಆರ್ಥಿಕತೆ ವಿಶ್ವದ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಲಿದೆ – ಐಎಂಎಫ್ ಪ್ರತಿಪಾದನೆ
ಅಲ್ಲಿನ ಪೊಲೀಸರ ಕ್ರಮ ಖಂಡಿಸಿ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಅದರಲ್ಲೂ ಸಿಎಂ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಸಮರವೇ ನಡೆಯುತ್ತಿದೆ.
ಇದರ ಮಧ್ಯೆ ಪಡಿತರ ಅಂಗಡಿಗಳ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಗುರುವಾರ ಸ್ಥಳೀಯ ಅಧಿಕಾರಿಗಳ ಎದುರೇ ಬಿಜೆಪಿ (BJP) ಪಕ್ಷದ ಶಾಸಕನ ಆಪ್ತ ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಂದಿದ್ದಾರೆ.

46 ವರ್ಷದ ಜೈಪ್ರಕಾಶ್ ಎಂಬುವವರನ್ನು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರ ಆಪ್ತ ಧೀರೇಂದ್ರ ಸಿಂಗ್, ಅಧಿಕಾರಿಗಳ ಎದುರೇ ಗುಂಡಿಕ್ಕಿ ಕೊಂದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಎಎನ್‍ಐ ವೀಡಿಯೋವೊಂದನ್ನು ಟ್ವೀಟ್ ಮಾಡಿದೆ.
https://twitter.com/i/status/1316714189830852608
ಸಂತ್ರಸ್ತನ ಸಹೋದರ ನೀಡಿದ ದೂರಿನ ಮೇರೆಗೆ 15-20 ಜನರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ : ದೇಶದಲ್ಲಿ ಹವಾನಿಯಂತ್ರಣಗಳ (ಎಸಿ) ಅಮದು ನಿಷೇಧಿಸಿದ ಕೇಂದ್ರ ಸರ್ಕಾರ
ಆದ್ರೆ ಇನ್ನೂ ಯಾರನ್ನೂ ಬಂಧಿಸಿಲ್ಲ. ಘಟನೆಯನ್ನು ಗಂಭೀರವಾಗಿ ಗಮನಿಸಿದ ಮುಖ್ಯಮಂತ್ರಿ ಆದಿತ್ಯನಾಥ್, ಸ್ಥಳದಲ್ಲಿದ್ದ ಎಸ್‍ಡಿಎಂ, ಸಿಒ ಮತ್ತು ಪೊಲೀಸ್ ಸಿಬ್ಬಂದಿಯನ್ನು ತಕ್ಷಣವೇ ಅಮಾನತುಗೊಳಿಸಬೇಕು ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









