ಕೊರೊನಾ ಭೀತಿಯಿಂದಾಗಿ ಆಕ್ಮೆ ಮೂವೀಸ್ ಇಂಟರ್ ನ್ಯಾಷನಲ್ ಲಾಂಛನದಲ್ಲಿ ತಯಾರಾಗಿರುವ ಇಂಗ್ಲಿಷ್- ಎಂಕ್ಲೆಗ್ ಬರ್ಪುಜಿ ಬ್ರೋ ತುಳು ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಬಗ್ಗೆ ಚಿತ್ರದ ನಿರ್ದೇಶಕ ಕೆ. ಸೂರಜ್ ಶೆಟ್ಟಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಕೊರೊನಾ ವೈರಸ್ ದೇಶವ್ಯಾಪಿ ಹರಡುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಮಾಲ್ ಹಾಗೂ ಚಿತ್ರಮಂದಿರಗಳನ್ನು ತಾತ್ಕಾಲಿಕ ಬಂದ್ ಮಾಡುವಂತೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 20ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಗಲ್ಫ್ ರಾಷ್ಟ್ರಗಳಲ್ಲಿ ಬಿಡುಗಡೆಯಾಗ ಬೇಕಾಗಿದ್ದ “ಇಂಗ್ಲಿಷ್” ತುಳು ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ. ನಮ್ಮ ನಿರ್ಮಾಪರಾದ ಹರೀಶ್ ಶೇರಿಗಾರ್ ಅವರ ಇಚ್ಚೆಯಂತೆ ಚಿತ್ರಮಂದಿರದ ವಿಚಾರದಲ್ಲಿ ಯಾರಿಗೂ ತೊಂದರೆಯಾಗದಂತೆ ನೋಡಿಕೊಂಡು ಚಿತ್ರ ಬಿಡುಗಡೆಯ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ತಿಳಿಸಿದರು.
“ಇಂಗ್ಲಿಷ್” – ಎಂಕ್ಲೆಗ್ ಬರ್ಪುಜಿ ಬ್ರೋ ತುಳು ಸಿನಿಮಾದ ವರ್ಲ್ಡ್ ಪ್ರಿಮಿಯರ್ ಶೋ ಇತ್ತೀಚಿಗೆ ದುಬೈಯಲ್ಲಿ ನಡೆದಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರ ನೋಡಿದ ಪ್ರತಿಯೊಬ್ಬರು ಚಿತ್ರವನ್ನು ಮುಕ್ತಕಂಠದಿಂದ ಹೊಗಳಿದ್ದಾರೆ.








