ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಅಕ್ಟೋಬರ್ 19 ರಂದು ಮತ್ತೆ ವಾಯುಭಾರ ಕುಸಿತವಾಗಲಿದೆ. ಇದರ ಪರಿಣಾಮ ರಾಜ್ಯದಲ್ಲಿ ಮುಂದಿನ ವಾರ ಎರಡು ದಿನ ಮಳೆ ಆಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.
ಬೆಳಗಾವಿ, ಕಲ್ಬುರ್ಗಿ, ಯಾದಗಿರಿ, ಬೀದರ್, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳದಲ್ಲಿ, ಜಿಲ್ಲೆಗಳಲ್ಲಿ ಅ 20, 21 ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇದ್ದು ಎಲ್ಲೋ ಅಲರ್ಟ್ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಅ.20, 21 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನಲ್ಲಿಯೂ ಈ ಎರಡು ದಿನ ಬಹುತೇಕ ಎಲ್ಲಾ ಕಡೆ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಅ.16,17 ರಂದು ಕೆಲವು ಕಡೆ ಹಗುರ ಮಳೆಯಾಗಲಿದೆ ಎಂದು ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.