ಸಚಿವ ವಿ.ಸೋಮಣ್ಣ ಮತ್ತು ಸಂಸದ ಪ್ರತಾಪ ಸಿಂಹ ಅವರನ್ನು ಹುಡುಕಿಕೊಡಿ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಕೆ.ಎಂ.ಬಿ.ಗಣೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇಕರ್ ಅವರಿಗೆ ದೂರು ನೀಡಿದ್ದಾರೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹಾಗೂ ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ಅವರು ಜಿಲ್ಲೆಯಲ್ಲಿ ಕಾಣಿಸಿಕೊಳ್ಳದೆ ಎಷ್ಟೋ ದಿನಗಳು ಆಗಿವೆ. ಅವರನ್ನು ಅಪಹರಣ ಮಾಡಿರುವ ಸಾಧ್ಯತೆಯಿದೆ. ಹಾಗಾಗಿ ಅವರನ್ನು ಹುಡುಕಿಕೊಡಿ ಎಂದು ಜೆಡಿಎಸ್ ಮುಖಂಡರು ಕೇಳಿಕೊಂಡಿದ್ದಾರೆ. ವಿಶ್ವದಾದ್ಯಂತ ಕೊರೊನಾ ಭೀತಿ ಹೆಚ್ಚಾಗಿದೆ. ಕೊಡಗಿನ ಜನರಲ್ಲೂ ಆತಂಕ ಸೃಷ್ಠಿಯಾಗಿದೆ. ಆದರೆ ಕೊಡುಗು ಜಿಲ್ಲೆಯ ಉಸ್ತುವಾರಿ ಸಚಿವ ವಿ.ಸೋಮಣ್ಣ ಹಾಗೂ ಮೈಸೂರು –ಕೊಡಗು ಸಂಸದ ಪ್ರತಾಪ ಸಿಂಹ ಅವರು ಜಿಲ್ಲೆಗೆ ಭೇಟಿ ಕೊಟ್ಟಿಲ್ಲ. ಅಲ್ಲದೆ ಜಾಗೃತಿ ಕಾರ್ಯಕ್ರಮಗಳನ್ನೂ ನಡೆಸಿಲ್ಲ. ಹಾಗಾಗಿ ಇಬ್ಬರೂ ನಾಪತ್ತೆ ಆಗಿದ್ದಾರೆಯೋ ಅಥವಾ ಯಾರಾದರೂ ಅಪಹರಣ ಮಾಡಿದ್ದಾರೆಯೋ ಎಂಬುದೂ ತಿಳಿದಿಲ್ಲ. ಆದ್ದರಿಂದ ಇವರನ್ನು ಹತ್ತು ದಿನದ ಒಳಗೆ ಹುಡುಕಿಕೊಡಿ ಎಂದು ಜೆಡಿಎಸ್ ಜಿಲ್ಲಾ ನಾಯಕರು ದೂರು ನೀಡಿದ್ದಾರೆ. ‘ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿಕೊಂಡು ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು. ಇಬ್ಬರು ಜಿಲ್ಲೆಗೆ ಶೀಘ್ರವೇ ಭೇಟಿ ನೀಡದಿದ್ದರೆ ಹೈಕೋರ್ಟ್‌ನಲ್ಲೂ ಅರ್ಜಿ ಸಲ್ಲಿಸುತ್ತೇವೆ’ ಎಂದು ಅವರು ಎಚ್ಚರಿಕೆ ನೀಡಿದರು.
ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.
ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...








