ಶಿರಾ : ಸುಮಾರು 70 ವರ್ಷಗಳ ನಂತರ ಶಿರಾದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ. ಈ ಉಪಚುನಾವಣೆಯಲ್ಲಿ ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ( Ashwath Narayana ) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವಥ್ ನಾರಾಯಣ್, ಶಿರಾ ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ. ರಾಜೇಶ್ ಅವರು ಈ ಬಾರಿ ಗೆಲುವು ಸಾಧಿಸಲಿದ್ದಾರೆ.
ಇದನ್ನೂ ಓದಿ : ಆರು ತಿಂಗಳ ಬಳಿಕ ಸಿಎಂ ಶಿಕಾರಿಪುರ ಪ್ರವಾಸ
ಈ ಹಿಂದೆ ಕಾಂಗ್ರೆಸ್, ಜೆಡಿಎಸ್ ದುರಾಡಳಿತದಿಂದ ಶಿರಾ ಜನರು ಬೇಸತ್ತಿದ್ದಾರೆ. ಕ್ಷೇತ್ರದ ಜನರು ಈ ಬಾರಿ ಕಮಲ ಅರಳಿಸಲಿದ್ದಾರೆ.
ಈಗಾಗಲೇ 9 ಭಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವವರಿಂದ ಏನು ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯ ಎಂದು ಪರೋಕ್ಷಗಾಗಿ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಕಿಡಿಕಾರಿದ ಅವರು, ಶಿರಾದಲ್ಲಿ ಬಿಜೆಪಿ ಅಭ್ಯರ್ಥಿಸಲು ಗೆಲ್ಲಿಸಲು ಜನರು ನಿಶ್ಚಯ ಮಾಡಿದ್ದಾರೆ ಎಂದರು.
ಇದನ್ನೂ ಓದಿ : ನಿತೀಶ್ ಕುಮಾರ್ ಅವರೇ ಬಿಹಾರದ ಮುಂದಿನ ಸಿಎಂ : ಅಮಿತ್ ಶಾ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










