ಬೆಂಗಳೂರು : ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರನೇ ಸ್ಥಾನ ಪಡೆಯಲಿದೆ ಎಂಬ ಬಿಜೆಪಿ ನಾಯಕ ಬಿ.ವೈ ವಿಜಯೇಂದ್ರ ( B.Y.Vijayendra ) ಅವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಜಯೇಂದ್ರ ಅವರಿಗೆ ಒಳ್ಳೆಯದಾಗಲಿ. ಅವರಿಗೆ ಶುಭ ಕೋರುತ್ತೇನೆ.’
‘ಯಾರು ಯಾರ ಜತೆಯಾದರೂ ನೆಂಟಸ್ಥನ, ಸಂಬಂಧ ಬೆಳೆಸಲಿ. ಯಾವುದೇ ಮೈತ್ರಿ ಬೇಕಾದರೂ ಮಾಡಿಕೊಳ್ಳಲಿ. ನಾವು ಅದರ ಬಗ್ಗೆ ಚಿಂತಿಸುವುದಿಲ್ಲ.
ಇದನ್ನೂ ಓದಿ : ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಬಾದಾಮಿ ಪ್ರವಾಸ
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಸಿದ್ಧಾಂತ, ಅಭ್ಯರ್ಥಿಯನ್ನು ಮುಂದಿಟ್ಟು ಮತ ಕೇಳುತ್ತೇವೆ.
ಬೇರೆ ಪಕ್ಷಗಳು ಏನು ಮಾಡುತ್ತಿವೆ ಎಂಬುದು ನಮಗೆ ಬೇಕಾಗಿಲ್ಲ’ ಎಂದಿದ್ದಾರೆ.
ಮುಂದುವರಿದು ಬಿಜೆಪಿ ವಿರುದ್ಧ ಕಿಡಿಕಾರಿದ ಡಿಕೆಶಿ, ರಾಜ್ಯ ಸರ್ಕಾರ ಕೊರೊನಾ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.
ಬಿಬಿಎಂಪಿ ಆಯುಕ್ತರು, ಇಲಾಖೆಗಳ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಚಿವರನ್ನು ಬದಲಿಸುವ ಮೂಲಕ ಮುಖ್ಯಮಂತ್ರಿಗಳು ತಮ್ಮ ವೈಫಲ್ಯವನ್ನು ಒಪ್ಪಿಕೊಂಡಿದ್ದಾರೆ.
ಇದನ್ನೂ ಓದಿ :ಕರ್ನಾಟಕ ಉಪಚುನಾವಣೆ – 37 ಅಭ್ಯರ್ಥಿಗಳ ನಾಮನಿರ್ದೇಶನ
ಸರ್ಕಾರದ ಅಸಮರ್ಥತೆಯಿಂದ ರಾಜ್ಯದ ಜನ ನರಳುವಂತಾಗಿದೆ ಎಂದು ಕಿಡಿಕಾರಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel