yediyurappa to make aerial survey of rain affected on nov 21
ಬೆಂಗಳೂರು : ಬಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಇದೇ ತಿಂಗಳ 21 ರಂದು ಸಿಎಂ ಬಿ.ಎಸ್.ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
yediyurappa to make aerial survey of rain affected on nov 21
ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ 21ರಂದು ವೈಮಾನಿಕ ಸಮೀಕ್ಷೆ ನಡೆಸುವುದಾಗಿ ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.
ಸಿಎಂ ಪತ್ರಿಕಾ ಪ್ರಕಟನೆಯಲ್ಲಿ ವಾಯುಭಾರ ಕುಸಿತ ಹಾಗೂ ಉತ್ತರ ಕರ್ನಾಟಕದಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿದೆ.
ಇದನ್ನೂ ಓದಿ : ನಾನು ಉತ್ತಮರ ಸಹವಾಸ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ : ಹೆಚ್ ಡಿಕೆ
ಮಹಾರಾಷ್ಟ್ರದ ಜಲಾಶಯ ಹೆಚ್ಚುವರಿ ನೀರು ಹರಿದು ಬರುತ್ತಿರುವ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾಗಿದೆ.
ಹೀಗಾಗಿ ಭೀಮಾ ಮತ್ತು ಕೃಷ್ಣಾ ನದಿಗೆ ವ್ಯಾಪಕ ಪ್ರಮಾಣದ ನೀರು ಹರಿಯುತ್ತಿರುವ ಪರಿಣಾಮ ಮನೆ ಮಠ, ಆಸ್ತಿ ಪಾಸ್ತಿ, ಜನ ಜಾನುವಾರುಗಳು , ನಷ್ಟ ಉಂಟಾಗಿದೆ.
ಇದನ್ನೂ ಓದಿ : “ಬೈ ಎಲೆಕ್ಷನ್ ನಲ್ಲಿ `ಕೈ’ಗೆ 3ನೇ ಸ್ಥಾನ” ವಿಜಯೇಂದ್ರ ಹೇಳಿಕೆಗೆ ಡಿಕೆಶಿ ಹೇಳಿದ್ದೇನು?
ಸ್ಥಳೀಯ ಜಿಲ್ಲಾಡಳಿತ ವತಿಯಿಂದ ತಕ್ಷಣವೇ ಅಗತ್ಯ ಪರಿಹಾರ ಕೈಗೊಳ್ಳಲಾಗುತ್ತಿದ್ದು, ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ವಾಸ್ತವಿಕ ಪ್ರಮಾಣವನ್ನು ತಿಳಿಯಲು ವೈಮಾನಿಕ ಸಮೀಕ್ಷೆ ನಡೆಸುವುದಾಗಿ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










