ಆಸ್ಪತ್ರೆಯಿಂದ ಬಿಡುಗಡೆಯಾದ ಸಚಿವ ಸುರೇಶ್‍ಕುಮಾರ್ ಗೆ ಮನೆಯಲ್ಲಿ ಚಿಕಿತ್ಸೆ Homequarantine Suresh Kumar
ಬೆಂಗಳೂರು, ಅಕ್ಟೋಬರ್18: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರ ಆರೋಗ್ಯ ಸುಧಾರಿಸಿದ್ದು, ಹೋಮ್‍ಕ್ವಾರಂಟೈನ್ ನಿಗಾ ವ್ಯವಸ್ಥೆಯಲ್ಲಿದ್ದಾರೆ. Homequarantine Suresh Kumar

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸುರೇಶ್‍ಕುಮಾರ್, ನಿನ್ನೆ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆ ಸೇರಿದ್ದೇನೆ.
ಸೋಮವಾರ, ಅಕ್ಟೋಬರ್ 5 ರಂದು ನನಗೆ ಕೊರೋನಾ ಸೋಂಕು ತಗುಲಿದೆ ಎಂದು ತಿಳಿದ ನಂತರ ಬಿಬಿಎಂಪಿ ವೈದ್ಯರ ತಂಡದ ಸಲಹೆಯಂತೆ ನಾನು ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದೆ. ವೈದ್ಯರು ಸೂಚಿಸಿದ ಔಷಧಗಳನ್ನು ತೆಗೆದುಕೊಳ್ಳುತ್ತಿದ್ದೆ.
ಆದರೆ ಅಕ್ಟೋಬರ್ 10 ರಂದು ನನ್ನ ಮನೆಗೆ ಬಂದ ವೈದ್ಯರೊಬ್ಬರು ನನ್ನ ಉಸಿರಾಟದಲ್ಲಿ ವ್ಯತ್ಯಾಸವನ್ನು ಗಮನಿಸಿ ತಕ್ಷಣ ಪರೀಕ್ಷೆಗೆ ಒಳಗಾಗ ಬೇಕೆಂದು ಆಗ್ರಹಿಸಿದರು.
ಅವರ ಸೂಚನೆ ಮೇರೆಗೆ ನಾನು ಅವರೊಡನೇ ಹೋಗಿ ಶ್ವಾಸಕೋಶದ ಸಿಟಿ ಸ್ಕ್ಯಾನ್ (CT -Scan) ಗೆ ಒಳಗಾದೆ.
ಆಗ ನನ್ನ ಶ್ವಾಸಕೋಶಕ್ಕೆ ಸ್ವಲ್ಪ ಹೆಚ್ಚಿನ ಪ್ರಮಾಣದಲ್ಲಿಯೇ ಸೋಂಕು ಹರಡಿದೆ ಎಂದು ತಿಳಿದುಬಂತು.

ಕಳೆದ ಎಂಟು ದಿನಗಳಿಂದ ನನಗೆ ಎಲ್ಲಾ ರೀತಿಯ ಚಿಕಿತ್ಸೆ ನೀಡಿ, ಶುಶ್ರೂಷೆ ಮಾಡಿ ನನ್ನನ್ನು ಗುಣಮುಖನಾಗುವ ಹಾದಿಗೆ ತಂದ ಡಾ. ಶಶಾಂಕ್, ಡಾ. ಶ್ರೀನಾಥ್, ಡಾ. ಪೂರ್ಣ ಪ್ರಸಾದ್, ಡಾ. ಕೃಪೇಶ್ ಮತ್ತು ಎಲ್ಲಾ ದಾದಿಯರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ತಿಳಿಸುತ್ತಿದ್ದೇನೆ.
ನನಗೆ ಇನ್ನೂ ಎರಡು ವಾರಗಳ ಕಾಲ ಮನೆಯಿಂದ ಹೋಗಬಾರದು ಎಂಬ ಷರತ್ತಿನ ಮೇಲೆ ನನ್ನನ್ನು ಬಿಡುಗಡೆ ಮಾಡಿದ್ದಾರೆ.
ನಾನು ಡಾಕ್ಟರ್ ಪಾಲಿಸುತ್ತೇನೆ ಎಂದು ಮಾತು ಕೊಟ್ಟು ಮನೆ ಸೇರಿದ್ದೇನೆ.
ಮನೆಯಲ್ಲಿ ಕೆಲ ಚಿಕಿತ್ಸೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ








