ಕಳೆದ ಡಿಸೆಂಬರ್ 15ರಿಂದ ಶಾಹಿನ್ ಬಾಗ್ ಎಂಬಲ್ಲಿ ನಡೆಯುತ್ತಿರುವ ಸಿಎಎ ವಿರೋಧಿ ಪ್ರತಿಭಟನೆ, ಕೊರೋನಾ ಭಯದಿಂದಾಗಿ ಇದೀಗ ಬಣಗುಡುತ್ತಿದೆ. 90 ದಿನಗಳಿಗಿಂತಲೂ ಹೆಚ್ಚು ಕಾಲ ಮಕ್ಕಳು, ಮಹಿಳೆಯರೆನ್ನದೇ ಪ್ರತಿಭಟಿಸುತ್ತಿದ್ದ ಪ್ರತಿಭಟನಾಕಾರರು ಕೊರೊನಾ ಭೀತಿಗೆ ಜಾಗ ಖಾಲಿ ಮಾಡಿ, ತಮ್ಮ ಮನೆಯತ್ತ ಮುಖ ಮಾಡಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಧಿಕಾರದಲ್ಲಿರುವ ಆಪ್ ಸರ್ಕಾರ 50ಕ್ಕೂ ಹೆಚ್ಚು ಜನರು ಒಂದೆಡೆ ಸೇರುವಂತಿಲ್ಲ ಎಂದು ಆದೇಶ ಹೊರಡಿಸಿದ್ದು, ಇದು ಕೂಡ ಸಿಎಎ ವಿರೋಧಿ ಹೋರಾಟಗಾರರು ಪ್ರತಿಭಟನಾ ಸ್ಥಳ ಖಾಲಿ ಮಾಡಲು ಕಾರಣವಾಗಿದೆ.
ಶಾಹೀನ್ ಬಾಗ್ ನ ಸಿಎಎ ವಿರೋಧಿ ಪ್ರತಿಭಟನಾಕಾರರು ಸರ್ಕಾರದ ಆದೇಶ ಹಾಗೂ ಕೊರೊನಾ ಭೀತಿಯಿಂದ ಪ್ರತಿಭಟನೆಯನ್ನು ಕೈ ಬಿಟ್ಟಿದ್ದರೂ, ಪ್ರತಿಭಟನೆಯನ್ನು ಹಿಂಪಡೆಯುವ ಕುರಿತು ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ. ಶಾಹೀನ್ ಬಾಗ್ ನಲ್ಲಿ ಪ್ರತಿಭಟಿಸುತ್ತಿದ್ದ ಜನರೇ ಸ್ವ ಇಚ್ಛೆಯಿಂದ ಪ್ರತಿಭಟನಾ ಸ್ಥಳವನ್ನು ಖಾಲಿ ಮಾಡುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಸ್ಥಳೀಯ ನಾಯಕರೊಬ್ಬರು, ಕೊರೊನಾ ಭೀತಿಯಿಂದಾಗಿ ಪ್ರತಿಭಟನೆಯ ಕಾವು ಕಡಿಮೆಯಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಅಲ್ಲದೇ ದೆಹಲಿ ಪೊಲೀಸರು, ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ್ದು, ಕೊರೊನಾ ಕುರಿತು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಸ್ವ ಇಚ್ಛೆಯಿಂದ ಮನೆಗೆ ತೆರಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಖರ್ಗೆ ಮಾತಿಗೂ ಕಿಮ್ಮತ್ತಿಲ್ಲ, ಯತೀಂದ್ರ ಅವರೇ ನಮ್ಮ ಸುಪ್ರೀಂ ಹೈಕಮಾಂಡ್: ಕೈ ಶಾಸಕ ಗಾಣಿಗ ರವಿ ವ್ಯಂಗ್ಯ
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕತ್ವ ಬದಲಾವಣೆ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಖಡಕ್ ಸೂಚನೆಯನ್ನೂ ಲೆಕ್ಕಿಸದೆ ನಾಯಕರು ಹೇಳಿಕೆಗಳನ್ನು ನೀಡುತ್ತಿರುವುದು ಇದೀಗ ಬಣ ರಾಜಕೀಯದ...








