R Ashok
ಬೆಳಗಾವಿ: ಉತ್ತರಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆಯಾಗ್ತಿದ್ದು, ಭಾರೀ ಮಳೆಗೆ ಜನರು ಹೈರಾಣಾಗಿದ್ದಾರೆ. ಅನೇಕ ಮನೆಗಳು , ಜಮೀನುಗಳು, ಆಸ್ತಿ ಪಾಸ್ತಿಗಳು ನಾಶವಾಗಿದ್ದು, ಜನರ ಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ನೆರೆಗೆ ಈವರೆಗೆ ಸುಮಾರು 3 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟವಾಗಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಪ್ರವಾಹಕ್ಕೆ ಈವರೆಗೆ ಸುಮಾರು 3 ಸಾವಿರ ಕೋಟಿ ರೂ.ಗೆ ಅಧಿಕ ಆಸ್ತಿ-ಪಾಸ್ತಿ, ಬೆಳೆ ನಷ್ಟವಾಗಿದ್ದು, 10 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಸುಮಾರು 500 ಕ್ಕೂ ಹೆಚ್ಚು ಜಾನವಾರುಗಳು ಸಾವನ್ನಪ್ಪಿವೆ ಎಂದು ತಿಳಿಸಿದ್ದಾರೆ.

ಸುಮಾರು 8 ಸಾವಿರಕ್ಕೂ ಹೆಚ್ಚು ಜನರನ್ನು ಕಾಳಜಿ ಕೇಂದ್ರದಲ್ಲಿ ವಸತಿ ಕಲ್ಪಿಸಲಾಗಿದೆ. ಕಾಳಜಿ ಕೇಂದ್ರಗಳಲ್ಲೂ ಮಾಸ್ಕ್, ಸ್ಯಾನೀಟಸರ್ ವ್ಯವಸ್ಥೆ ಮಾಡಲಾಗಿದೆ. ಕೊರನಾ ಮತ್ತು ಪ್ರವಾಹವನ್ನು ಮೆಟ್ಟಿನಿಂತು ಎರಡು ಸಂಕಷ್ಟದಿಂದ ಹೊರಬರುವ ಕೆಲಸ ರಾಜ್ಯ ಸರ್ಕಾರ ಮಾಡಲಿದೆ ಎಂದಿದ್ದಾರೆ.
ಕರ್ನಾಟಕ ವಿದ್ಯುತ್ ವಿತರಣಾ ಕಂಪನಿ ಖಾಸಗೀಕರಣದ ಕೇಂದ್ರದ ಪ್ರಸ್ತಾಪವನ್ನು ತಿರಸ್ಕರಿಸಿದ ರಾಜ್ಯ ಸರ್ಕಾರ
R Ashok
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








