Sharath B
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಶರತ್ ಬಿ ಅವರು ಇತ್ತೀಚೆಗಷ್ಟೇ ವರ್ಗಾವಣೆಗೊಂಡಿದ್ದರು. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ನಗರದಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ರಕ್ತದೊತ್ತಡದಲ್ಲಿ ಏರುಪೇರುಂಟಾಗಿದ್ದು ಅವರು ಕುವೆಂಪು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿ ತಿಂಗಳು ಕಳೆಯುವಷ್ಟರಲ್ಲಿಯೇ ಸರ್ಕಾರ ಏಕಾಏಕಿ ಬಿ.ಶರತ್ ಅವರನ್ನು ವರ್ಗಾವಣೆ ಮಾಡಿತ್ತು.
ಇದಾದ ಬಳಿಕ ಅವರಿಂದ ತೆರವಾದ ಜಿಲ್ಲಾಧಿಕಾರಿ ಸ್ಥಾನಕ್ಕೆ ರೋಹಿಣಿ ಸಿಂಧೂರಿ ಅವರನ್ನ ನೇಮಕ ಮಾಡಿತ್ತು. ಇದನ್ನು ಪ್ರಶ್ನಿಸಿ ಬಿ. ಶರತ್ ಸಿಎಟಿ ಮೊರೆ ಹೋಗಿದ್ದರು. ಸಿಎಟಿ ವಿಚಾರಣೆ ಮೂರು ಬಾರಿ ಮುಂದೂಡಿತ್ತು. ಸಿಎಟಿ ವಿಚಾರಣೆ ಅ. 23ರಂದು ನಡೆಯಲಿದೆ.
ತೀವ್ರ ಅನಾರೋಗ್ಯದಿಂದ ಮೈಸೂರು ಆಸ್ಪತ್ರೆಗೆ ದಾಖಲಾದ ಶಾಸಕ ರಾಮದಾಸ್
ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಅವರು ಅಸ್ವಸ್ಥರಾಗಿದ್ದು, ಖಿನ್ನತೆಗೆ ಒಳಗಾಗಿದ್ದ ಪರಿಣಾಮ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎನ್ನಲಾಗುತ್ತಿದೆ
Sharath B
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








