ಭಾರತದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿತರ ಸಂಖ್ಯೆ 169ಕ್ಕೇರಿದೆ. ಈ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಪ್ರಧಾನಿ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಇಂದು ರಾತ್ರಿ 8 ಗಂಟೆಗೆ ಮಾತನಾಡಲಿದ್ದಾರೆ.
ಕೊರೋನಾ ವೈರಸ್ ಹರಡುವಿಕೆಯಿಂದಾಗಿ ದೇಶದಲ್ಲಿ ಉಂಟಾಗಿರುವ ಪರಿಸ್ಥಿತಿ, ಅದರ ನಿಯಂತ್ರಣಕ್ಕಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳು ಮತ್ತು ದೇಶದ ಜನರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ದೇಶವಾಸಿಗಳಿಗೆ ಮಾಹಿತಿ ನೀಡಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.
ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ನಡೆಯುತ್ತಿರುವ ಪ್ರಯತ್ನಗಳನ್ನು ಪರಿಶೀಲಿಸಲು ನರೇಂದ್ರ ಮೋದಿ ಬುಧವಾರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತುಕತೆ ನಡೆಸಿದ್ದಾರೆ. ತಜ್ಞರು ಮತ್ತು ವೈದ್ಯಾಧಿಕಾರಿಗಳ ಜೊತೆಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದು, ಸೋಂಕು ಹರಡದಂತೆ ತಡೆಗಟ್ಟುವ ಮಾರ್ಗೋಪಾಯಗಳು, ಹಾಗೂ ಜನರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ. ಮಾತ್ರವಲ್ಲದೆ ಕೊರೊನಾ ವೈರಸ್ ದೇಶದಿಂದ ತೊಲಗಿಸಲು ಹಾಗೂ ವೈರಸ್ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರದ ಜೊತೆಗೆ ವಿವಿಧ ಜನಪರ ಸಮುದಾಯಗಳು ಹಾಗೂ ಸಂಘ ಸಂಸ್ಥೆಗಳು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಮನವಿ ಮಾಡಲಿದ್ದಾರೆ ಎಂದು ವರದಿಗಳು ತಿಳಿಸಿದೆ.
ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ
ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...








