ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದಲ್ಲಿ ನವೆಂಬರ್‌ನಿಂದ ಕಾಲೇಜುಗಳನ್ನು ಪುನರಾರಂಭಿಸಲು ಸಿದ್ದತೆ

Shwetha by Shwetha
October 20, 2020
in Newsbeat, Samagra karnataka, ನ್ಯೂಸ್ ಬೀಟ್, ರಾಜ್ಯ
Karnataka reopen colleges
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ನವೆಂಬರ್‌ನಿಂದ ಕಾಲೇಜುಗಳನ್ನು ಪುನರಾರಂಭಿಸಲು ಸಿದ್ದತೆ – Karnataka reopen colleges

ಬೆಂಗಳೂರು, ಅಕ್ಟೋಬರ್20: ಕರ್ನಾಟಕ ಸರ್ಕಾರ ನವೆಂಬರ್‌ನಿಂದ ಕಾಲೇಜುಗಳನ್ನು ಮತ್ತೆ ತೆರೆಯಲು ಸಿದ್ಧತೆ ನಡೆಸುತ್ತಿದೆ. Karnataka reopen colleges
ಕೋವಿಡ್ -19 ಸಾಂಕ್ರಾಮಿಕದ ನಡುವೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಾಲೇಜುಗಳನ್ನು ಪುನರಾರಂಭಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು‌ ಎಂದು ಸರ್ಕಾರ ತಿಳಿಸಿದೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

Karnataka reopen colleges

ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್ ಅವರು ಪದವಿಪೂರ್ವ ಮತ್ತು ಸ್ನಾತಕೋತ್ತರ ತರಗತಿಗಳ ಪುನರಾರಂಭದ ಕುರಿತು ಅಂತಿಮ ತೀರ್ಮಾನವನ್ನು ಶೀಘ್ರದಲ್ಲೇ ಸರ್ಕಾರ ಪ್ರಕಟಿಸಲಿದೆ ಎಂದು ಹೇಳಿದ್ದಾರೆ. ಏತನ್ಮಧ್ಯೆ, ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸಲಾಗುತ್ತಿದೆ.

ಕೋವಿಡ್ -19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಶಾಲೆಗಳು ಮತ್ತು ಕಾಲೇಜುಗಳನ್ನು ಮಾರ್ಚ್‌ನಿಂದ ಮುಚ್ಚಲಾಗಿದೆ. ಎಲ್ಲಾ ವಿದ್ಯಾರ್ಥಿಗಳ ತರಗತಿಗಳನ್ನು ಆನ್‌ಲೈನ್‌ನಲ್ಲಿ ನಡೆಸಲಾಗುತ್ತಿದೆ.

ಸಾಂಕ್ರಾಮಿಕ ಪರಿಸ್ಥಿತಿಯ ಮಧ್ಯೆ ಕರ್ನಾಟಕ ರಾಜ್ಯದಲ್ಲಿ ಆನ್‌ಲೈನ್ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿದೆ ಎಂದು ಅಶ್ವತ್ ನಾರಾಯಣ್ ತಿಳಿಸಿದರು. ಡಿಜಿಟಲ್ ಕಲಿಕೆ ಮತ್ತು ಬೋಧನೆ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ನಡೆಯುತ್ತಿದೆ ಎಂದರು.

ರಾಜ್ಯದಲ್ಲಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ನಾಲ್ಕು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ

ಶಾಲೆಗಳು ಮತ್ತು ಕಾಲೇಜುಗಳು ನಡೆಸುತ್ತಿರುವ ಆನ್‌ಲೈನ್ ತರಗತಿಗಳ ಗರಿಷ್ಠ ಲಾಭವನ್ನು‌ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಅವರು ಸೂಚಿಸಿದರು . ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಕುರಿತ ಪ್ರಶ್ನೆಗೆ, ರಾಜ್ಯ ಸರ್ಕಾರ ಇದನ್ನು ಹಂತಗಳಲ್ಲಿ ಜಾರಿಗೆ ತರಲು ಸಜ್ಜಾಗಿದೆ ಎಂದು ಹೇಳಿದರು.
ಎನ್ಇಪಿ ಅನುಷ್ಠಾನಕ್ಕೆ ಶಿಫಾರಸು ಮಾಡಲು ರಚಿಸಲಾದ ಕಾರ್ಯಪಡೆ ಈಗಾಗಲೇ ತನ್ನ ಮೊದಲ ವರದಿಯನ್ನು ಸಲ್ಲಿಸಿದೆ. ಎಲ್ಲಾ ವ್ಯವಸ್ಥೆಗಳನ್ನು ಮಾಡಿದ ನಂತರ 2021 ರ ವೇಳೆಗೆ ಹೊಸ ಶಿಕ್ಷಣ ನೀತಿಯನ್ನು ಹಂತಹಂತವಾಗಿ ಜಾರಿಗೆ ತರಲಾಗುವುದು ಎಂದು ಅಶ್ವತ್ ನಾರಾಯಣ್ ಹೇಳಿದರು.

ಕಾಲೇಜುಗಳನ್ನು ಮತ್ತೆ ತೆರೆಯಲಾಗುತ್ತಿದೆ

Karnataka reopen colleges

ನಿಯಮಿತ ತರಗತಿಗಳಿಗೆ ಕಾಲೇಜುಗಳು ಮತ್ತು ಸಂಸ್ಥೆಗಳ ಪುನರಾರಂಭವನ್ನು ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಅನುಸಾರ ಮಾಡಲಾಗುವುದು ಎಂದು ಸಚಿವರು ಹೇಳಿದರು. ನಾವು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು. ಆದ್ದರಿಂದ, ನಾವು ಹೆಚ್ಚು ಚರ್ಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು.

ಕಾಲೇಜುಗಳಲ್ಲಿ ತಮ್ಮ ತರಗತಿಗಳಿಗೆ ಹಾಜರಾಗಲಿರುವ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಅವರು ಖಚಿತಪಡಿಸಿದ್ದಾರೆ. ಕಾಲೇಜುಗಳು ಗೃಹ ಸಚಿವಾಲಯ ನಿಗದಿಪಡಿಸಿದ ಎಸ್‌ಒಪಿಗಳನ್ನು ಸಹ ಅನುಸರಿಸಬೇಕಾಗುತ್ತದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Tweets by SaakshaTv

Tags: College reopenCOVID-19KARNATAKA GOVERNMENTuniversity
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram