ಕೊರೊನಾ ವೈರಸ್ ಹರಡುವ ಭೀತಿಯಿಂದ ಆದಿಚುಂಚನಗಿರಿಯ ಶ್ರೀ ಕಾಲಭೈರವೇಶ್ವರನ ಭಕ್ತಾಧಿಗಳಿಗೆ ಶಾಕ್ ಉಂಟಾಗಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಶನಿವಾರ ಮತ್ತು ಭಾನುವಾರ ಕಾಲಭೈರವನ ದರ್ಶನ ಪಡೆಯಲು, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಆಗಮಿಸುತ್ತಾರೆ. ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಕಾರಣಕ್ಕಾಗಿ ಮುಂದಿನ 2 ವಾರಗಳ ಕಾಲ ದೇವರ ದರ್ಶನಕ್ಕೆ ಆಗಮಿಸದಂತೆ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಭಕ್ತಾದಿಗಳಲ್ಲಿ ಮನವಿ ಮಾಡಿದ್ದಾರೆ.. ಭಕ್ತರು ಸಹಕರಿಸಿ ಎಂದು ಸ್ವಾಮೀಜಿ ಕೇಳಿಕೊಂಡಿದ್ದಾರೆ.
ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥತಿ ಬಂದಿದೆ. ಕೊರೊನಾ ವೈರಸ್ ನಿಂದ ತಪ್ಪಿಸಿಕೊಳ್ಳಲು ಅನೇಕ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹಾಗಾಗಿ ರಾಜ್ಯ ಸರ್ಕಾರ ಕಳೆದ ವಾರದಿಂದ ಒಂದು ವಾರಗಳ ಕಾಲ ಪಬ್.ನೈಟ್ ಕ್ಲಬ್, ಸಿನಿಮಾ ಥಿಯೇಟರ್, ಮಾಲಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಿತ್ತು. ಕೊರೊನಾ ವೈಸರ್ ಹರಡುವಿಕೆ ಕಡಿಮೆ ಆಗದ ಕಾರಣ ಹಿಂದಿನ ಆದೇಶವನ್ನು ಮುಂದುವರೆಸುವಂತೆ ರಾಜ್ಯ ಸರ್ಕಾರ ಹೇಳಿತ್ತು. ಇದರಿಂದಾಗಿ ಬಂದ್ ಮಾರ್ಚ್ 31ರವರೆಗೆ ಮುಂದುವರೆದಿದೆ. ಈ ಹಿನ್ನೆಲೆ ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲೂ ಕೂಡ ದೇವರ ದರ್ಶನಕ್ಕೆ ಬ್ರೇಕ್ ಹಾಕಿವೆ.








