ಬಾಗಲಕೋಟೆ: ಬಿಜೆಪಿಯಲ್ಲೇ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ನಡೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (siddaramaih) ಹೇಳಿದ್ದಾರೆ. ಯಡಿಯೂರಪ್ಪ ಬಹಳ ದಿನ ಸಿಎಂ ಆಗಿ ಇರೊಲ್ಲ ಎಂಬ ಶಾಸಕ ಬಸನಗೌಡ ಯತ್ನಾಳ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಬಿಜೆಪಿಯವರ ಆಂತರಿಕ ತಿಕ್ಕಾಟದಿಂದ ಸಕಾ9ರ ಬಿದ್ದು ಹೋದರೆ ನಾವು ಚುನಾವಣೆ ಎದುರಿಸಲು ಸಿದ್ಧ ಎಂದರು.
ಯಡಿಯೂರಪ್ಪನವರನ್ನು ಕೆಳಗಿಳಿಸೋ ಬಗ್ಗೆ ಚಚೆ9 ನಡೀತಾ ಇರೋದು ನಿಜ. ಆದರೆ ಯಾವಾಗ ಇಳಿಸ್ತಾರೆ, ಯಾರು ಸಿಎಂ ಆಗ್ತಾರೆ ಅಂತ ನನಗೆ ಗೊತ್ತಿಲ್ಲ, ಚಚೆ9ಯಂತೂ ನಡೀತಾ ಇದೆ ಎಂದು ಹೇಳಿದರು. ಇನ್ನೂ ಉತ್ತರ ಕನಾ9ಟಕ ಭಾಗದವರು ಸಿಎಂ ಆಗಲಿದ್ದಾರೆ ಎಂಬ ಯತ್ನಾಳ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದು ಅವರ ಪಕ್ಷದ ವಿಚಾರ, ನಾನೇಕೆ ಮಾತನಾಡಲಿ, ಯಡಿಯೂರಪ್ಪ ಆ ಬಗ್ಗೆ ಮಾತನಾಡಲಿ.
ಬಸನಗೌಡ ಪಾಟೀಲ ಯತ್ನಾಳ ಅವರ ಕ್ಷೇತ್ರದ ಅನುದಾನ ಕಡಿತಗೊಂಡ ನಂತರ ಅವರಲ್ಲಿ ಸಿಎಂ ಬಗ್ಗೆ ಅಸಮಾಧಾನವಾಗಿದೆ. ಪಾಪ ಅವರಿಗೂ ಈಗ ಬಿಸಿ ಮುಟ್ಟಿದೆ. ಹೀಗಾಗಿಯೇ ಸತ್ಯ ಹೇಳೋಕೆ ಶುರು ಮಾಡಿದ್ದಾರೆ ಎಂದು ಕಟುಕಿದರು. ಶಿರಾ, ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ಈಗಾಗಲೇ ಗೆದ್ದಾಗಿದೆ. ಫಲಿತಾಂಶವೊಂದೇ ಬಾಕಿ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆ ಎರಡೂ ಕ್ಷೇತ್ರಗಳು ಯಡಿಯೂರಪ್ಪ ಅವರ ಜೇಬಿನಲ್ಲಿವೆಯೇ ಇದ್ಯಾ ಎಂದು ಪ್ರಶ್ನಿಸಿದರು.
ಯಡಿಯೂರಪ್ಪ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ : ಯತ್ನಾಳ
(siddaramaih)
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








