ಬೆಂಗಳೂರು : ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ ಧಮ್ ನಿಮಗಿದೆಯೇ ಕಟೀಲ್ ಅವರೇ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಪ್ರಶ್ನಿಸಿದ್ದಾರೆ.
ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಅವರು, ಕೊರೊನಾ ಲಸಿಕೆಯನ್ನು ಬಿಹಾರಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿದ್ದಾರೆ.
ಇದನ್ನೂ ಓದಿ : ಏಳೇಳು ಜನ್ಮದಲ್ಲೂ ಡಿಕೆಶಿಯವ್ರಿಗೆ ನಾನು ಸರಿಸಾಟಿ ಅಲ್ಲ : ಮುನಿರತ್ನ
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವುರಾ ನಳಿನ್ ಕುಮಾರ್ ಕಟೀಲ್ ಅವರೇ?
ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರ ಮನವೊಲಿಸಿ ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಕೊರೊನಾದಿಂದ ಭೀತಿಗೊಳಗಾಗಿರುವವರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ ಧಮ್ ನಿಮಗಿದೆಯೇ ಕಟೀಲ್ ಅವರೇ? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : ಸಿದ್ದರಾಮಯ್ಯ ನಿಮ್ಮ ಮಾತಿನ ಮೇಲೆ ಹಿಡಿತ ಇರಲಿ : ಹೆಚ್.ವಿಶ್ವನಾಥ್ ಗರಂ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel