ಪಂಜಾಬ್: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೆ ಇದೀಗ ಕೊರೊನಾ ಸೋಂಕಿಗೆ ನಾಲ್ಕನೇ ಬಲಿಯಾಗಿದೆ. ಪಂಜಾಬ್ ರಾಜ್ಯದ 70 ವರ್ಷದ ವೃದ್ಧ ಸಾವಿಗೀಡಾಗಿದ್ದು, ಈ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದಾಗಿ ಸಾವಿಗೀಡಾದ ಮೊದಲ ಪ್ರಕರಣ ದಾಖಲಾದಂತಾಗಿದೆ. ಈ ವ್ಯಕ್ತಿ ಜರ್ಮನಿಯಿಂದ ಪಂಜಾಬ್ ಗೆ ಬಂದಿದ್ದ ಎನ್ನಲಾಗಿದೆ.
ಈ ಹಿಂದೆ ಕರ್ನಾಟಕದಲ್ಲಿ 1, ದೆಹಲಿಯಲ್ಲಿ 1, ಹಾಗೂ ಮಹಾರಾಷ್ಟ್ರದಲ್ಲಿ 1 ಸಾವು ಸಂಭವಿಸಿತ್ತು. ಸದ್ಯ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 170ಕ್ಕೆ ಏರಿಕೆಯಾಗಿದೆ.








