ಬೆಂಗಳೂರು : ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿಯಲಿದ್ದು, ಮುಂದಿನ ಮೂರು ದಿನ ಮಳೆರಾಯ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 72 ಗಂಟೆ ಕಾಲ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ.
ಹಾಗೇ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ,ರಾಮನಗರ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮುಂದಿನ 48 ಗಂಟೆ ಕಾಲ ಭಾರಿ ಮಳೆ ಆಗಲಿದೆ. ಹಾಗಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ : ದಸರಾಹಬ್ಬದ ಖುಷಿಗೆ ಬೆಲೆ ಏರಿಕೆಯ ಶಾಕ್; ದುಬಾರಿಯಾದ್ರೂ ಕುಗ್ಗದ ಉತ್ಸಾಹ..!
ಇನ್ನು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು ಮತ್ತು ಹಾಸನದಲ್ಲಿ ಅ.25ರಂದು ಯೆಲ್ಲೋ ಅಲರ್ಟ್ ಇರಲಿದೆ.
ಜೊತೆಗೆ ಅ.28ರಿಂದ ಹಿಂಗಾರು ಮಳೆ ಶುರುವಾಗಲಿದ್ದು, ಡಿ.31ರವರೆಗೆ ಮುಂದುವರಿಯಲಿದೆ ಎಂದಿದೆ ಇಲಾಖೆ ತಿಳಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










