ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಜಹಾಂಗೀರ್‌ ಪುರಿಯಲ್ಲಿನ ಸಿಎಎ ಪ್ರತಿಭಟನೆಯ ಅಯೋಜಕರಿಗೆ ಕೊರೊನಾ ಶಂಕೆ

admin by admin
March 20, 2020
in International
Share on FacebookShare on TwitterShare on WhatsappShare on Telegram

ಅತ್ತ ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ರಾಷ್ಟ್ರ ರಾಜಧಾನಿ ದೆಹಲಿಯ ಶಾಹಿನ್ ಬಾಗ್ ಕೊರೋನಾ ಭಯದಿಂದಾಗಿ ಖಾಲಿಯಾಗಿದ್ದರೆ, ಇತ್ತ ದೆಹಲಿಯ ಜಹಾಂಗೀರ್‌ ಪುರಿಯಲ್ಲಿನ ಸಿಎಎ ವಿರೋಧಿ ಪ್ರತಿಭಟನೆಯ ಅಯೋಜಕರಿಗೆ ಕೊರೊನಾ ಸೋಂಕಿನ ಶಂಕೆ ವ್ಯಕ್ತವಾಗಿದೆ.

ದೆಹಲಿಯ ಜಹಾಂಗೀರ್‌ ಪುರಿಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ನಡೆದ ‌ಪ್ರತಿಭಟನೆಯನ್ನು ಆಯೋಜಿಸಿದ್ದ, ಆಯೋಜಕರ ಸಹೋದರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದ್ದು, ಇದೀಗ ಆಯೋಜಕರು ಕೂಡಾ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾರೆ.

Related posts

ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

May 8, 2025
ಟರ್ಕಿ ಹೋಟೆಲ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 76ಕ್ಕೆ ಏರಿಕೆ!

ಟರ್ಕಿ ಹೋಟೆಲ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 76ಕ್ಕೆ ಏರಿಕೆ!

January 22, 2025

ಮಾರ್ಚ್ 11 ರಂದು ಸೌದಿ ಅರೇಬಿಯಾದಿಂದ ಆಯೋಜಕರ ಸೋದರಿ ಭಾರತಕ್ಕೆ ವಾಪಸಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಿದಾಗ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.‌ ಉಮ್ರಾ ಯಾತ್ರೆ ಪ್ರಯುಕ್ತ ಆಯೋಜಕರ ಸಹೋದರಿ ಸೌದಿ ಅರೇಬಿಯಾ ದೇಶಕ್ಕೆ ಭೇಟಿ ನೀಡಿದ್ದರು. 35 ವರ್ಷ ಪ್ರಾಯದ ಆಯೋಜಕರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾನು ಕೊರೊನಾ ಸೋಂಕಿತ ಸಹೋದರಿಯನ್ನು ‌ಅವರು ಭಾರತಕ್ಕೆ ಮರಳಿದ ಎರಡು ದಿನಗಳ ನಂತರ ‌ಭೇಟಿಯಾಗಿದ್ದೆ.‌‌ ನಂತರ ‌ಒಂದೆರಡು ಬಾರಿ ಪ್ರತಿಭಟನೆ ನಡೆಯುತ್ತಿದ್ದ ಜಹಾಂಗೀರ್‌ ಪುರಿಗೆ ಹೋಗಿದ್ದೆ. ಆದರೆ ಆ ಸಮಯದಲ್ಲಿ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬರದ ಹಿನ್ನೆಲೆಯಲ್ಲಿ ಎಂದಿನಂತೆ ‌
ಪ್ರತಿಭಟನೆಗೆ ಹೋಗಿದ್ದೆ ಎಂದು ತಿಳಿಸಿದ್ದಾರೆ.

ನಾನು ಸಹೋದರಿಯನ್ನು ಭೇಟಿಯಾದ ಎರಡು ದಿನಗಳ ನಂತರ ಆಕೆ ಕೊರೊನಾ ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ಆಕೆಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಆಕೆ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಆಯೋಜಕರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಸಹೋದರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ನಾನು ಕೊರೊನಾ ವೈರಸ್ ಸೋಕಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದೇನೆ ಎಂಬ ವಿಚಾರವನ್ನು ವೈದ್ಯರಿಗೆ ತಿಳಿಸುವುದು ಜಾಗೃತ ನಾಗರಿಕನಾಗಿ ನನ್ನ ಜವಾಬ್ದಾರಿ ಎಂದು ನಾನು ಭಾವಿಸಿರುವುದಾಗಿ ತಿಳಿಸಿದ ಅವರು ನನಗೆ ಕೊರೊನಾ ವೈರಸ್‍ನ ಯಾವುದೇ ಲಕ್ಷಣ ಕಂಡು ಬಂದಿಲ್ಲ. ಆದರೆ ಮಾರ್ಚ್ 16 ರಂದು ಕೆಮ್ಮು ಬಂದಿತ್ತು. ಹೀಗಾಗಿ ನಾನು ಕೂಡ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ ಎಂದು ಭಾವಿಸಿದೆ ಎಂದರು.
ಆಯೋಜಕರು ದೆಹಲಿಯ ಲೋಕ ನಾಯಕ್ ಜಯಪ್ರಕಾಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಅವರ ಗಂಟಲಿನ ದ್ರವದ ಪರೀಕ್ಷಾ ವರದಿಗಾಗಿ ಕಾಯುತ್ತಿದ್ದಾರೆ. ಇಲ್ಲಿಯವರೆಗೆ ದೆಹಲಿಯಲ್ಲಿ 11 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಇಬ್ಬರು ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಭಾರತದಲ್ಲಿ ಕೊರೊನಾ ವೈರಸ್‍ಗೆ ಈವರೆಗೆ 169 ಮಂದಿ ತುತ್ತಾಗಿದ್ದು, 14 ಮಂದಿ ಗುಣಮುಖರಾಗಿದ್ದಾರೆ.
ಸೌದಿ ಅರೇಬಿಯಾ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚಾದ ಹಿನ್ನೆಲೆಯಲ್ಲಿ ನಂತರದ ದಿನಗಳಲ್ಲಿ ಯಾತ್ರಾ ಸ್ಥಳಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಿತ್ತು. ‌

Tags: anti-caaDelhijahangirpuriShahin bagh
ShareTweetSendShare
Join us on:

Related Posts

ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

by Shwetha
May 8, 2025
0

ಆಪರೇಷನ್ ಸಿಂಧೂರ... ಈ ರಣಬೇಟೆ..ಪಾಕಿಸ್ತಾನದ ಎದೆಯಲ್ಲಿ ಅವಲಕ್ಕಿ ಕುಟ್ಟಿದಂತೆ ಮಾಡ್ಬಿಟ್ಟಿದೆ.. ತಮ್ಮದು ಕೆಚ್ಚೆದೆ.. ಕೆಚ್ಚೆದೆ ಅಂತಿದ್ದವರ ಗುಂಡಿಗೆ ಗಢಗಢನೇ ಅಲ್ಲಾಡಿ ಹೋಗಿದೆ... ಹೃದಯ ಒಂದ್ಸಾರಿ.. ಬಲಕ್ಕೆ ಓಡಿ...

ಟರ್ಕಿ ಹೋಟೆಲ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 76ಕ್ಕೆ ಏರಿಕೆ!

ಟರ್ಕಿ ಹೋಟೆಲ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 76ಕ್ಕೆ ಏರಿಕೆ!

by Author2
January 22, 2025
0

ಇಸ್ತಾಂಬುಲ್:‌ ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿರುವ (Turkey Ski Resort) ಹೋಟೆಲ್‌ ನಲ್ಲಿ ಸಂಭವಿಸಿದ ಅಗ್ನಿ ದುರಂತರದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಸಂಖ್ಯೆ 76ಕ್ಕೆ ಏರಿಕೆಯಾಗಿದ್ದು, 51 ಜನ...

ಅಧಿಕಾರ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್!

ಅಧಿಕಾರ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್!

by Author2
January 21, 2025
0

ಷಿಂಗ್ಟನ್‌: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ (Donald Trump) ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ವಿದೇಶಗಳಿಗೆ ತೆರಿಗೆ ವಿಧಿಸುವ ಮಹತ್ವದ ಘೋಷಣೆ ಮಾಡಿದ್ದಾರೆ. ಅಲ್ಲದೇ, 80...

ಭಾರತೀಯ ಮೂಲದ ಯುವಕ ಅಮೆರಿಕದಲ್ಲಿ ಹತ್ಯೆ

ಭಾರತೀಯ ಮೂಲದ ಯುವಕ ಅಮೆರಿಕದಲ್ಲಿ ಹತ್ಯೆ

by Author2
January 20, 2025
0

ವಾಷಿಂಗ್ಟನ್: ಭಾರತೀಯ ಮೂಲದ ಯುವಕ ಅಮೆರಿಕದಲ್ಲಿ ಹತ್ಯೆಯಾಗಿರುವ ಘಟನೆ ನಡೆದಿದೆ. ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಭಾರತೀಯ ಮೂಲದ ಯುವಕ ಸಾವನ್ನಪ್ಪಿದ್ದಾನೆ. ಅಮೆರಿಕದ (America) ವಾಷಿಂಗ್ಟನ್ ಡಿಸಿಯ...

ನೈಜೀರಾಯಾದಲ್ಲಿ ಭಾರೀ ಅಗ್ನಿ ಅವಘಡ!

ನೈಜೀರಾಯಾದಲ್ಲಿ ಭಾರೀ ಅಗ್ನಿ ಅವಘಡ!

by Author2
January 19, 2025
0

ನೈಜೀರಿಯಾದಲ್ಲಿ ದೊಡ್ಡ ಅಗ್ನಿ ದುರಂತವೊಂದು ಸಂಭವಿಸಿದೆ. ಗ್ಯಾಸೋಲಿನ್ ಟ್ಯಾಂಕರ್‌ ಏಕಾಏಕಿ ಸ್ಫೋಟಗೊಂಡ ಪರಿಣಾಮ 70ಕ್ಕೂ ಅಧಿಕ ಜನರು ಸಾವನ್ನಪ್ಪಿ, 56ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram