ನಿರ್ಭಯಾ ಅತ್ಯಾಚಾರಿಗಳನ್ನು ಇಂದು ಮುಂಜಾನೆ 5.30ಕ್ಕೆ ಗಲ್ಲಿಗೆ ಏರಿಸಲಾಯಿತು. 2012ರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಭಯಾ ಪ್ರಕರಣದ ಆರೋಪಿಗಳಿಗೆ ಇಂದು ಬೆಳಗ್ಗೆ 5.30ಕ್ಕೆ ಗಲ್ಲು ಶಿಕ್ಷೆ ಜಾರಿಯಾಯಿತು.
ಇಂದು ಬೆಳಗಿನ ಜಾವ ಮೂರು ಗಂಟೆವರೆಗೂ ಆರೋಪಿಗಳು ಡೆತ್ ವಾರೆಂಟ್ ಮುಂದೂಡಲು ಪ್ರಯತ್ನಿಸಿ ವಿಫಲರಾದರು. ಪಟಿಯಾಲಾ ಹೌಸ್ ಕೋರ್ಟ್ ನೀಡಿರುವ ಡೆತ್ ವಾರೆಂಟ್ ಗೆ ತಡೆ ನೀಡುವಂತೆ ಗುರುವಾರ ರಾತ್ರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು ನಂತರ ಹೈಕೋರ್ಟ್ ನಲ್ಲಿ ಅರ್ಜಿ ವಜಾಗೊಳ್ಳುತ್ತಿದ್ದಂತೆ ಮಧ್ಯರಾತ್ರಿ ಸುಪ್ರೀಂಕೋರ್ಟ್ ಗೆ ಹೋಗಿ ತುರ್ತು ಅರ್ಜಿ ವಿಚಾರಣೆ ನಡೆಸಬೇಕೆಂದು ಹಂತಕರು ಮನವಿ ಮಾಡಿಕೊಂಡಿದ್ದರು. ಮಧ್ಯರಾತ್ರಿ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಾದ-ಪ್ರತಿವಾದವನ್ನು ಅಲಿಸಿ ಅರ್ಜಿಯನ್ನು ವಜಾಗೊಳಿಸಿತು.
ನನ್ನ ಮಗಳನ್ನು ನನಗೆ ರಕ್ಷಿಸಿಕೊಳ್ಳಲಾಗಲಿಲ್ಲ, ಆದರೆ ಅವಳಿಗಾಗಿ ಹೋರಾಡಿದ್ದೇನೆ. ಈ ದಿನವನ್ನು ದೇಶದ ಹೆಣ್ಣುಮಕ್ಕಳಿಗೆ ಆರ್ಪಿಸುವುದಾಗಿ ನಿರ್ಭಯಾ ತಾಯಿ ಆಶಾ ದೇವಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನಿಡುವ ಪ್ರಕ್ರಿಯೆಯಲ್ಲಿ ವಿಳಂಬವಾದದಕ್ಕೆ ಬೇಸರ ವ್ಯಕ್ತಪಡಿಸಿದ ಆಶಾ ದೇವಿ “ನನ್ನ ಮಗಳಿಗೆ ತಡವಾದರೂ ನ್ಯಾಯ ದೊರೆತಿದೆ. ಮುಂದಿನ ದಿನಗಳಲ್ಲಿ ಸುಪ್ರೀಂಕೋರ್ಟ್ ದೇಶದ ಕಾನೂನಿನ ಬಗ್ಗೆ ಪರಾಮರ್ಶೆ ಮಾಡಲಿದೆ. ಈ ಮೂಲಕ ಈ ವಿಳಂಬವನ್ನು ನಿಲ್ಲಿಸಲಿದೆ ಎಂದು ನಾನು ಭಾವಿಸಿದ್ದೇನೆ,” ಎಂದು ಸುದ್ದಿಗಾರರಿಗೆ ತಿಳಿಸಿದರು.
ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!
ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...








