ಮೈಸೂರು : ಕೊರೊನಾ ಲಸಿಕೆ ಉಚಿತ ನೀಡುವ ಚುನಾವಣಾ ಪ್ರಣಾಳಿಕೆ ಕುರಿತು ದೇಶದಲ್ಲಿ ಭಾರಿ ಚರ್ಚೆ ಆಗುತ್ತಿದ್ದು, ಈ ಬಗ್ಗೆ ಸಂಸದೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ನಮ್ಮದೇ ಸರ್ಕಾರ ಇದೆ. ದೇಶದ ಎಲ್ಲರಿಗೂ ಉಚಿತ ಲಸಿಕೆ ನೀಡುವುದು ನಮ್ಮ ಗುರಿ.
ಇದಕ್ಕಾಗಿ ಸರ್ಕಾರ ಹಣ ಖರ್ಚು ಮಾಡುತ್ತಿದೆ. ಹೀಗಾಗಿಯೇ ಉಚಿತವಾಗಿ ಕೊಡುತ್ತೇವೆ ಎನ್ನುವುದರಲ್ಲಿ ತಪ್ಪಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಇದನ್ನೂ ಓದಿ : `ಸಿದ್ದರಾಮಯ್ಯ ಧಮ್’ ಗೆ ಸವಾಲ್ ಹಾಕಿದ ಕಟೀಲ್
ಇದೇ ವೇಳೆ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ ಶೋಭಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರದ್ದು ಯಾವಾಗಲೂ ಗೂಂಡಾ ರಾಜಕಾರಣ. ಆರ್.ಆರ್ ನಗರ ಚುನಾವಣೆಯಲ್ಲೂ ಗೂಂಡಾಗಿರಿ ಮೂಲಕ ಗೆಲ್ಲುವ ಪ್ರಯತ್ನ ನಡೆಸಿದ್ದಾರೆ.
ಆರ್.ಆರ್ ನಗರದಲ್ಲಿ ಡಿಕೆಶಿ ಸಹೋದರ ಡಿಕೆ ಸುರೇಶ್ ಅವರೇ ಸಂಸದರು. ಎಲ್ಲ ಗೂಂಡಾಗಳನ್ನು ಬಳಸಿಕೊಂಡು ಕಾನೂನು ಸುವ್ಯವಸ್ಥೆ ಹದಗೆಡಿಸುವ ಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ. ಚುನಾವಣೆ ಪಾರದರ್ಶಕವಾಗಿ ನಡೆಯಬೇಕು. ಯಾವುದೇ ಅಕ್ರಮಕ್ಕೆ ಅವಕಾಶ ಕೊಡಬಾರದು. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ : ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸೋ ಧಮ್ ನಿಮಗಿದೆಯೇ ಕಟೀಲ್ ಅವರೇ : ಸಿದ್ದರಾಮಯ್ಯ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel