ಬೆಂಗಳೂರು : ಮಾತೃಹೃದಯಿ, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಿನ್ನೆಲೆ ನಿರ್ದೇಶಕ ಅಮರ್ ಅವರಿಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
1ವೆಬ್ ಸೀರಿಸ್ ನಲ್ಲಿ ಬರುವ ಸನ್ನಿವೇಶವನ್ನು ಬದಲಿಸಿ ಸುಧಾಮೂರ್ತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ವಿಡಿಯೋದಲ್ಲಿದೆ. ಈ ಹಿನ್ನೆಲೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಜಯರಾಜ್ ನಾಯ್ಡು ದೂರು ದಾಖಲಿಸಿದ್ದಾರೆ.
ಹೀಗಾಗಿ ಓಲ್ಡ್ ಟೌನ್ ಕ್ರಿಮಿನಲ್ಸ್ ವೆಬ್ ಸಿರೀಸ್ ನಿರ್ದೇಶಕ ಅಮರ್ ಹಾಗೂ ನಿರ್ಮಾಪಕರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.