ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ( Siddaramaiah ) ಹೀರೋನೂ ಅಲ್ಲ , ವಿಲನ್ನೂ ಅಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಹೀರೋನೂ ಅಲ್ಲ , ವಿಲನ್ನೂ ಅಲ್ಲ .
ನಮ್ಮ ಮುಖ್ಯಮಂತ್ರಿ ಯಡಿಯೂರಪ್ಪನವರೇ ಹೀರೋ. ನಮಗೆ ಸಿದ್ದರಾಮಯ್ಯ ಏನೆಂಬುದು ಗೊತ್ತಿದೆ. ಐದು ವರ್ಷಗಳ ಕಾಲ ಅವರೊಂದಿಗೆ ಕೆಲಸ ಮಾಡಿದ್ದೇವೆ.
ಅಸೆಂಬ್ಲಿ ಹೊರಗಡೆ, ಒಳಗಡೆ ಅವರು ಹೇಗೆ ಮಾತನಾಡುತ್ತಾರೆ ಎಂಬುದು ನಮಗೆ ಗೊತ್ತಿದೆ. ಅವರ ದಮ್ಮಿನ ಬಗ್ಗೆ ಈಗ ಮಾತನಾಡುವುದು ಬೇಡ ಎಂದು ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.
ಇದೇ ವೇಳೆ ಅಧಿವೇಶನ ಕರೆಯಿರಿ ಎಂಬ ಸಿದ್ದರಾಮಯ್ಯರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಅಧಿವೇಶನ ಕರೆದರೆ ವಿರೋಧ ಪಕ್ಷದವರಾದ ಸಿದ್ದರಾಮಯ್ಯ ಅವರು ಬಂದು ನೆಟ್ಟಗೆ ಮಾತನಾಡುವುದಿಲ್ಲ.
ಕಲಾಪ ಬಹಿಷ್ಕರಿಸಿ ಹೋಗುತ್ತಾರೆ. ಈ ರೀತಿ ಮಾಡಿದರೆ ಅಧಿವೇಶನ ಕರೆದು ಪ್ರಯೋಜನವೇನು. ಹಣ ಏಕೆ ವೆಚ್ಚ ಮಾಡಬೇಕು ಎಂದು ಪ್ರಶ್ನಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









