ಬೆಂಗಳೂರು: ರಾಜರಾಜೇಶ್ವರಿ ಕ್ಷೇತ್ರದ ಚುನಾವಣೆಗೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಾಯಕರ ಅಬ್ಬರದ ಪ್ರಚಾರ ಮುಂದುವರೆದಿದೆ.
ಚುನಾವಣೆ ಘೋಷಣೆ ಬಳಿಕವೂ ಆರ್.ಆರ್ ನಗರದಲ್ಲಿ ಪ್ರಚಾರದಿಂದ ದೂರವೇ ಉಳಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ನಾಲ್ಕು ದಿನ ಬಿರುಸಿನ ಪ್ರಚಾರ ನಡೆಸಲಿದ್ದು, ಇಂದು ಜೆ.ಪಿ ಪಾರ್ಕ್ ವಾರ್ಡ್ನಲ್ಲಿ ರೋಡ್ ಶೋ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಮತಯಾನೆ ಮಾಡಿದರು.
ರೋಡ್ ಶೋ ಮೂಲಕ ಪ್ರಚಾರಕ್ಕೆ ಸಿದ್ದರಾಮಯ್ಯ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು. ಸಿದ್ದರಾಮಯ್ಯ ನಡೆಸಿದ ರೋಡ್ಶೋ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ್, ನಸೀರ್ ಅಹಮದ್, ನಾರಾಯಣಸ್ವಾಮಿ, ಬೈರತಿ ಸುರೇಶ್, ರಿಜ್ವಾನ್ ಅರ್ಷದ್ ಮತ್ತಿತರರು ಜೊತೆಗಿದ್ದರು.
ಹಣ ಹಂಚಿ ಗೆಲ್ಲಲು ಬಿಜೆಪಿ ಯತ್ನ: ಸಿದ್ದು
ಕಳೆದ ವರ್ಷ ಕೆ.ಆರ್ ಪೇಟೆ ಉಪಚುನಾವಣೆಯಲ್ಲಿ ಹಣ ಹಂಚಿ ಗೆದ್ದಂತೆ ಶಿರಾ ಮತ್ತು ಆರ್.ಆರ್ ನಗರದಲ್ಲೂ ಹಣ ಹಂಚಿ ಸುಲಭದಲ್ಲಿ ಗೆಲ್ಲಬಹುದು ಎಂಬುದು ಬಿಜೆಪಿಯವರ ಲೆಕ್ಕಾಚಾರವಾಗಿದೆ. ಆದರೆ ಇಲ್ಲಿನ ಜನ ಹಣದ ಆಮಿಷಕ್ಕೆ ಒಳಗಾಗದೆ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಆರ್.ಆರ್ ನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸುತ್ತಿರುವ ಸಿದ್ದರಾಮಯ್ಯ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುನಿರತ್ನ ತನಗೆ ಅನುದಾನ ನೀಡಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷ ತೊರೆದದ್ದು ಎಂದು ಸುಳ್ಳು ಹೇಳುತ್ತಿದ್ದಾರೆ. ನನ್ನ ಅಧಿಕಾರಾವಧಿಯಲ್ಲಿ ಆರ್.ಆರ್ ನಗರ ಕ್ಷೇತ್ರಕ್ಕೆ 2,000 ಕೋಟಿಗೂ ಅಧಿಕ ಅನುದಾನ ನೀಡಿದ್ದೆ. ಇಂದು ಕ್ಷೇತ್ರದಲ್ಲಿ ಏನಾದರೂ ಅಭಿವೃದ್ಧಿ ಕಾರ್ಯಗಳಾಗಿದ್ದರೆ ಅದಕ್ಕೆ ನಮ್ಮ ಸರ್ಕಾರ ಕಾರಣ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ಮಾರುತಿ ಮಾನ್ಪಡೆ ಅವರ ಸಾವಿಗೆ ನಾನು ಮತ್ತು ಡಿ.ಕೆ.ಶಿವಕುಮಾರ್ ಕಾರಣ ಎಂಬ ಬಾಲಿಷ ಹೇಳಿಕೆಯನ್ನು ಕೇಂದ್ರ ಸಚಿವ ಸದಾನಂದಗೌಡ ನೀಡಿದ್ದಾರೆ. ಹಾಗಿದ್ದರೆ ದೇಶದಲ್ಲಿ ಒಂದು ಕಾಲು ಲಕ್ಷ ಜನ ಕೊರೊನಾಕ್ಕೆ ಬಲಿಯಾಗಿದ್ದಾರಲ್ಲಾ, ಅದಕ್ಕೆ ಯಾರು ಹೊಣೆ ಎಂದು ಹೇಳುವಿರಾ ಸದಾನಂದ ಗೌಡರೇ? ಎಂದು ಪ್ರಶ್ನಿಸಿದ್ದಾರೆ.
ಕೊರೊನಾ ವಿರುದ್ಧ ಹೋರಾಡಬೇಕಾಗಿದ್ದ ಕೇಂದ್ರ ಸರ್ಕಾರ, ಅವಕಾಶವನ್ನು ದುರ್ಬಳಕೆ ಮಾಡಿಕೊಂಡು ಜನವಿರೋಧಿ ಕಾನೂನುಗಳನ್ನು ಜಾರಿಗೆ ತಂದದ್ದೇ ಮಾನ್ಪಡೆಯವರೂ ಸೇರಿದಂತೆ ಅನೇಕ ಹೋರಾಟಗಾರರ ಸಾವಿಗೆ ಕಾರಣ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸಿದ್ದು ಪ್ರಚಾರ ವೇಳೆ ಮೋದಿ ಪರ ಘೋಷಣೆ..!
ಆರ್.ಆರ್ ನಗರ ಕ್ಷೇತ್ರದ ಜೆ.ಪಿ ವಾರ್ಡ್ನಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಚಾರ ನಡೆಸುತ್ತಿರುವ ವೇಳೆ ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗಿದ ಘಟನೆ ನಡೆದಿದೆ. ಆದರೆ, ಸಿದ್ದರಾಮಯ್ಯ ಮಾತ್ರ ಇದಕ್ಕೆ ತಲೆಕೆಡಿಸಿಕೊಳ್ಳದೆ ರೋಡ್ ಶೋ ಮುಂದುವರೆಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel