ಕೊರೊನಾ ಭೀತಿಯಿಂದ ಇಡಿ ದೇಶವೇ ಆತಂಕದಲ್ಲಿ ಮುಳುಗಿದೆ. ಮಹಾಮಾರಿ ಕೊರೊನಾ ಹರಡದಂತೆ ತಡೆಯಲು ದೇಶದಲ್ಲಿ ಮಾರ್ಚ್ 22 ರಂದು ಜನತಾ ಕರ್ಪ್ಯೂ ಜಾರಿ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಬಾರ್, ವೈನ್ ಶಾಪ್, ಬಾರ್ ಅಂಡ್ ರೆಸ್ಟೋರೆಂಟ್ ಬಂದ್ ಮಾಡಲು ರಾಜ್ಯ ಬಾರ್ ಮಾಲೀಕರ ಸಂಘ ಮುಂದಾಗಿದೆ. ನಿನ್ನೆಯಷ್ಟೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನತಾ ಕರ್ಪ್ಯೂಗೆ ಕರೆ ನೀಡಿದ್ದರು. ಈ ವೇಳೆ ಮಾತನಾಡಿದ ಅವರು, ದೇಶದ ಜನರು ಮನೆಯಿಂದ ಹೊರ ಬರಬಾರದು ಎಂದು ಮನವಿ ಮಾಡಿದ್ದರು. ಹಾಗಾಗಿ ಮಾರ್ಚ್ 22 ರಂದು ನಡೆಯುವ ಜನತಾ ಕರ್ಪ್ಯೂ ಗೆ ರಾಜ್ಯ ಬಾರ್ ಮಾಲೀಕರ ಸಂಘ ಬೆಂಬಲ ಸೂಚಿಸಿದೆ. ಹೀಗಾಗಿ ಮಾರ್ಚ್ 22, 2020ರ ಭಾನುವಾರದಂದು ರಾಜ್ಯಾದ್ಯಂತ ಬಾರ್, ವೈನ್ ಶಾಪ್, ಬಾರ್ ಅಂಡ್ ರೆಸ್ಟೋರೆಂಟ್ ಬಂದ್ ಆಗಲಿದೆ.
ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!
ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...








