ಬೆಂಗಳೂರು : ನಟ ವಿನೋದ್ ಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕ ಗೋವರ್ಧನ್ ಮೂರ್ತಿ ಅವರಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ವಿನೋದ್ ಕುಮಾರ್ ಅವರನ್ನು 2008ರಲ್ಲಿ ಬೆಂಗಳೂರಿನ ಹೊರವಲಯದ ಬಾಗಲೂರಿನಲ್ಲಿ ಕೊಲೆ ಮಾಡಲಾಗಿತ್ತು. ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ಗೋವರ್ಧನ್ ಮೂರ್ತಿ ಸೇರಿದಂತೆ ಒಟ್ಟು ಏಳು ಜನರನ್ನು ಖುಲಾಸೆಗೊಳಿಸಿ 2012ರ ಡಿಸೆಂಬರ್ನಲ್ಲಿ ಆದೇಶಿಸಿತ್ತು. ರಾಜ್ಯ ಸರಕಾರವು ಸೆಷನ್ಸ್ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.








