ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಎಲ್ಲಾ ರಾಜ್ಯಗಳ ಸಿ.ಎಂ ಗಳ ಜೊತೆ ವಿಡಿಯೋ ಸಂವಾದ ನಡೆಸಿದ್ದಾರೆ. ಮೊದಲು ಮಹಾರಾಷ್ಟ್ರ ಮುಖ್ಯಮಂತ್ರಿ ಜೊತೆ ಸಂವಾದ ನಡೆಸಿ, ಕೊರೊನಾ ಹರಡದಂತೆ ಯಾವ ರೀತಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿಯನ್ನು ಮೋದಿಯವರ ಪಡೆದಿದ್ದಾರೆ. ಬಳಿಕ ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪನವರ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಮೋದಿ ಅವರ ಜೊತೆ ನಡೆದ ಕಾನ್ಫರೆನ್ಸ್ ನಲ್ಲಿ ಸಿಎಂ ಯಡಿಯೂರಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಿಎಸ್ ವಿಜಯಭಾಸ್ಕರ್, ಕೊರೊನಾ ಟಾಸ್ಕ್ ಫೋರ್ಸ್ ನ ಎಲ್ಲ ಸದಸ್ಯರು ಪಾಲ್ಗೊಂಡಿದ್ದರು. ಈ ವೇಳೆ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಹೇಳಿದ್ದಾರೆ. ಜೊತೆಗೆ ಕೊರೊನಾ ವೈರಸ್ ಬಗ್ಗೆ ಮಾಹಿತಿ ಪಡೆಯಲು ರಚನೆಯಾದ ಟಾಸ್ಕ್ ಫೋರ್ಸ್ ತಂಡದ ಬಗ್ಗೆ ತಿಳಿಸಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಎಷ್ಟು ಜನರಲ್ಲಿ ಕಾಣಿಸಿಕೊಂಡಿದೆ. ಸೋಂಕಿತರು ಗುಣಮುಖರಾಗಿರುವ ವಿಚಾರವನ್ನು ಮೋದಿ ಅವರ ಬಳಿ ಯಡಿಯೂರಪ್ಪನವರು ಹೇಳಿದ್ದಾರೆ.
ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!
ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...








