ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವೈಷಮ್ಯ ಮರೆತು ಒಂದಾದ್ರಾ ರಮೇಶ್ ಸಾಹುಕಾರ್, ಡಿಸಿಎಂ ಸವದಿ..!

Kariyappa N by Kariyappa N
October 31, 2020
in Newsbeat, Politics, Samagra karnataka, ರಾಜ್ಯ
ramesh savadi
Share on FacebookShare on TwitterShare on WhatsappShare on Telegram

ಬೆಂಗಳೂರು: ಕಳೆದ ಕೆಲ ವರ್ಷಗಳಿಂದ ರಾಜಕೀಯವಾಗಿ ಉತ್ತರ-ದಕ್ಷಿಣ ದ್ರುವದಂತಿದ್ದ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಮೂಲಕ ಮತ್ತೆ ಒಂದಾಗಿದ್ದಾರೆ.
ಹಲವು ವರ್ಷಗಳ ನಂತರ ಒಟ್ಟಾಗಿ ಕಾಣಿಸಿಕೊಡ ರಮೇಶ್ ಜಾರಕಿಹೊಳಿ, ಲಕ್ಷ್ಮಣ ಸವದಿ ಡಿಸಿಸಿ ಬ್ಯಾಂಕ್‍ನಲ್ಲಿ ಮುಖಾಮುಖಿಯಾಗುವ ಮೂಲಕ ಒಗ್ಗಟ್ಟಿನ ಮಂತ್ರ ಜಪಿಸಿದರು. ಇಬ್ಬರೂ ಒಂದೇ ಸೋಫಾದಲ್ಲಿ ಕುಳಿತುಕೊಂಡು ಕೆಲಕಾಲ ಮಾತುಕತೆ ನಡೆಸಿದ್ದು ಗಮನಸೆಳೆಯಿತು.

dcc
ಈ ಇಬ್ಬರೂ ನಾಯಕರು ಒಂದೇ ವೇದಿಕೆಗೆ ಬರಬೇಕು ಮತ್ತು ವೈಮನಸ್ಸು ಮರೆತು ಒಂದಾಗುವ ಮೂಲಕ ಡಿಸಿಸಿ ಬ್ಯಾಂಕ್‍ನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳುವಂತೆ ವರಿಷ್ಠರು ಸೂಚಿಸಿದ್ದರು. ಅದರಂತೆ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡು ಪರಸ್ಪರ ಮಾತುಕತೆ ನಡೆಸಿದ್ದಾರೆ.
ಎರಡು ವರ್ಷಗಳ ಹಿಂದೆ ನಡೆದ ರಾಜ್ಯದ ಅತಿದೊಡ್ಡ ಸಹಕಾರ ಬ್ಯಾಂಕ್ ಎಂಬ ಖ್ಯಾತಿ ಹೊಂದಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ಲಕ್ಷ್ಮಿ ಹೆಬ್ಬಾಳಕರ್, ಅಂದು ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಚುನಾವಣಾ ಅಖಾಡಕ್ಕೆ ಡಿ.ಕೆ ಶಿವಕುಮಾರ್ ಎಂಟ್ರಿಕೊಟ್ಟ ಪರಿಣಾಮ ಲಕ್ಷ್ಮಿ ಹೆಬ್ಬಾಳಕರ್ ಕೈಮೇಲಾಗಿತ್ತು. ಹೀಗಾಗಿ ರಮೇಶ್ ಜಾರಕಿಹೊಳಿ ಸೇಡಿನಿಂದ ಕುದಿಯುತ್ತಿದ್ದರು. ಈ ಅಸಮಾಧಾನವೇ ಕೊನೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಪರೋಕ್ಷೆ ಕಾರಣ ಆಗಿತ್ತು ಎಂಬುದನ್ನು ತಳ್ಳಿ ಹಾಕುವಂತಿಲ್ಲ.

Related posts

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

March 23, 2026
ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

March 23, 2026

dcc bank

ರಮೇಶ್-ಸವದಿ ದೂರವಾಗಿದ್ದೇಕೆ..?
ಸಚಿವ ರಮೇಶ್ ಜಾರಕಿಹೊಳಿ ಕಾಂಗ್ರೆಸ್‍ನಲ್ಲಿದ್ದಾಗ ಅಥಣಿ ಕ್ಷೇತ್ರದಿಂದ ಮಹೇಶ ಕುಮಠಳ್ಳಿ ಅವರನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಂಡು ಬಂದಿದ್ದರು. ಅಥಣಿ ಚುನಾವಣೆ ವಿಚಾರವಾಗಿ ಹಲವು ವರ್ಷಗಳಿಂದ ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮಣ ಸವದಿ ಮುನಿಸಿಕೊಂಡಿದ್ದರು. ಕಳೆದ ವಷರ್ಷ ಬಿಜೆಪಿ ಸರ್ಕಾರ ಬರಲು ಕಾರಣರಾದ ರಮೇಶ್ ಜಾರಕಿಹೊಳಿ ಬಿಜೆಪಿಗೆ ಸೇರಿದ್ದರೂ ಒಂದೇ ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಈಗ, ಹಳೆ ವೈಷಮ್ಯ ಮರೆತಿರುವ ಸಂದೇಶ ರವಾನಿಸಿದ್ದಾರೆ. ನಾವಿಬ್ಬರೂ ಹಿಂದಿನಿಂದಲೂ ಒಂದೇ ಆಗಿದ್ದೆವು. ಎಂದು ಹೇಳಿಕೊಂಡಿದ್ದಾರೆ.
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅವಿರೋಧ ಆಯ್ಕೆಗೆ ಶ್ರಮಿಸಬೇಕು ಎಂದು ಪಕ್ಷದ ವರಿಷ್ಠರು ಜಿಲ್ಲೆಯ ಬಿಜೆಪಿ ನಾಯಕರಿಗೆ ಸೂಚಿಸಿದ್ದರು. ಆದರೆ, 16 ನಿರ್ದೇಶಕ ಸ್ಥಾನಗಳಲ್ಲಿ 13 ಸ್ಥಾನಗಳಿಗೆ ಮಾತ್ರ ಅವಿರೋಧ ಆಯ್ಕೆ ಆಗುವಂತೆ ನೋಡಿಕೊಳ್ಳುವಲ್ಲಿ ಮುಖಂಡರು ಯಶಸ್ವಿಯಾಗಿದ್ದಾರೆ. ಉಳಿದ ಮೂರು ಸ್ಥಾನಗಳಿಗೆ ನ. 6ರಂದು ಚುನಾವಣೆ ನಡೆಯಲಿದೆ.

laksman-ramesh

ಜಿಲ್ಲೆಯಲ್ಲಿ ಹೊಸ ರಾಜಕೀಯ ಪರ್ವ ಆರಂಭ-ಸವದಿ

ರಮೇಶ್ ಜಾರಕಿಹೊಳಿ ಭೇಟಿ ಮಾಡಿದ ಬಳಿಕ ಬೆಳಗಾವಿಯಲ್ಲಿ ಮಾತನಾಡಿರುವ ಡಿಸಿಎಂ ಲಕ್ಷ್ಮಣ ಸವದಿ, ಕಳೆದ ಒಂದು ವಾರದಿಂದ ಬ್ಯಾಂಕ್ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಮಾಡಲು ಕಸರತ್ತು ಮಾಡಿದ್ದೇವೆ. ನಮ್ಮಿಬ್ಬರ ವೈಮನಸ್ಸು ತಪ್ಪಿಸಲು ಅವಿರೋಧ ಆಯ್ಕೆ ಒತ್ತು ನೀಡಿದ್ದೇವೆ. ಪಕ್ಷದ ಮುಖಂಡರು ಇದೇ ಸೂಚನೆಯನ್ನು ನೀಡಿದ್ದರು. ಜಾರಕಿಹೊಳಿ, ಸವದಿ ಹಾಗೂ ಕತ್ತಿ ಕುಟುಂಬ ಒಟ್ಟಿಗೆ ಬರಬೇಕು ಎಂಬ ನಿರ್ಧಾರ ಮಾಡಿದ್ದೇವೆ. ಈ ಮೂಲಕ ಜಿಲ್ಲೆಯಲ್ಲಿ ಹೊಸ ರಾಜಕೀಯ ಪರ್ವ ಆರಂಭಿಸಲು ತೀರ್ಮಾನ ಮಾಡಿದ್ದೇವೆ ಎಂದರು.
ಈ ಚುನಾವಣೆಯಲ್ಲಿ ನಾವು ಗೆದ್ದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಗಲಿದೆ. 16 ನಿರ್ದೇಶಕ ಸ್ಥಾನಗಳ ಪೈಕಿ 13 ಅವಿರೋಧ ಆಯ್ಕೆಯಾಗಿದೆ. ಮೂರು ಕ್ಷೇತ್ರದಲ್ಲಿ ಹೆಸರಿಗೆ ಮಾತ್ರ ಚುನಾವಣೆ ಆಗಲಿದೆ. ರಾಮದುರ್ಗ, ಖಾನಾಪುರ ಹಾಗೂ ಕುರಿ ಉಣ್ಣಿ ಸಹಕಾರ ಸಂಘದ ಕ್ಷೇತ್ರಕ್ಕೆ ಚುನಾವಣೆ ನಡೆಯಬೇಕಿದೆ. ಮೂರು ಅಭ್ಯರ್ಥಿಗಳನ್ನು ಗೆಲ್ಲಿಸಲು ಎಲ್ಲರೂ ಸೇರಿ ಪ್ರಯತ್ನ ನಡೆಸಿದ್ದೇವೆ. ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಬಗ್ಗೆ ಒಟ್ಟಿಗೆ ಸೇರಿ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇದರಲ್ಲಿ ಕಾಂಗ್ರೆಸ್, ಬಿಜೆಪಿ ಎನ್ನುವ ಪ್ರಶ್ನೆಯೆ ಇಲ್ಲ ಎಂದು ತಿಳಿಸಿದರು.

ಅಂಜಲಿ ನಿಂಬಾಳ್ಕರ್ ನಾಮಪತ್ರ ಹಿಂಪಡೆಯಬೇಕಿತ್ತು-ರಮೇಶ್
ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ ಸಹಕಾರ ಕ್ಷೇತ್ರದ್ದಾಗಿದ್ದು ಇಲ್ಲಿ ಪಕ್ಷ ಬರುವುದಿಲ್ಲ. 16 ಕ್ಷೇತ್ರಗಳಲ್ಲಿ 13 ಕ್ಷೇತ್ರಗಳ ಅವಿರೋಧ ಆಯ್ಕೆ ಆಗಿದೆ. ಉಳಿದ ಮೂರು ಕ್ಷೇತ್ರಗಳ ಅವಿರೋಧ ಆಯ್ಕೆಗೆ ಪ್ರಯತ್ನ ಮಾಡಿದ್ದೇವೆ. ಆದರೆ ಸಮಯದ ಅಭಾವದ ಕಾರಣ ಆ ಮೂರು ಕ್ಷೇತ್ರಗಳ ಅವಿರೋಧ ಆಯ್ಕೆ ಸಾಧ್ಯವಾಗಲಿಲ್ಲ. ನವೆಂಬರ್ 6 ಕ್ಕೆ ಮೂರು ಕ್ಷೇತ್ರಗಳ ಚುನಾವಣೆ ನಡೆಯಲಿದೆ. ಅಂಜಲಿ ನಿಂಬಾಳ್ಕರ್ ಶಾಸಕಿ ಆಗಿ ನಾಮಪತ್ರ ಹಿಂಪಡೆಯಬೇಕಿತ್ತು. ಚುನಾವಣೆ ನಡೆಯಲಿ, ನಮ್ಮ ಅಭ್ಯರ್ಥಿ ಅರವಿಂದ ಪಾಟೀಲ್,
ಗಜಾನನ ಕೊಳ್ಳಿ, ರಾಮದುರ್ಗದ ಶ್ರೀಕಾಂತ್ ಧವಳ ಗೆಲುವಿಗೆ ಶ್ರಮಿಸುತ್ತೇವೆ ಎನ್ನುವ ಮೂಲಕ ಶಾಸಕಿ ಅಂಜಲಿ ನಿಂಬಾಳ್ಕರ್ ವರ್ತನೆಗೆ ಸಚಿವ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Our Website : https://saakshatv.com/


Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: belguam dcc bankBJPCongressElectionLakshmi Hebbalkarlaksman savadiRamesh jarakiholi
ShareTweetSendShare
Join us on:

Related Posts

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

by Shwetha
March 23, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಹೆಸರುಗಳೆಂದರೆ ಅದು ಈಶ್ವರಿಯ ರವಿಚಂದ್ರನ್ ಮತ್ತು ನಾದಬ್ರಹ್ಮ ಹಂಸಲೇಖ. ಪ್ರೇಮಲೋಕದ ಮೂಲಕ ಕನ್ನಡಿಗರ ಎದೆಯಲ್ಲಿ ಪ್ರೇಮದ ಪರಾಕಾಷ್ಠೆಯನ್ನು ಬಿತ್ತಿದ...

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

by Shwetha
March 23, 2026
0

ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಬೆಂಗಳೂರಿಗರೇ ಎಚ್ಚರ  – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

ಬೆಂಗಳೂರಿಗರೇ ಎಚ್ಚರ – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

by Shwetha
March 23, 2026
0

ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ನಗರದಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕಾವೇರಿ ನೀರಿನ ಲಭ್ಯತೆಯಲ್ಲೂ ಕೊರತೆ ಎದುರಾಗಿದೆ....

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

by Shwetha
March 23, 2026
0

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram