ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ. ನಾಳೆ ಜನತಾ ಕರ್ಫ್ಯೂ ಇರುವ ಕಾರಣಕ್ಕೆ ಜನಸಾಮಾನ್ಯರು ಅನಗತ್ಯವಾಗಿ ಹೊರ ಬಂದರೆ ಕೇಸ್ ದಾಖಲು ಮಾಡಲಾಗುವುದು ಎಂದು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದರು. ಇದಕ್ಕೆ ಗರಂ ಆಗಿರುವ ಸಿ.ಎಂ ಯಡಿಯೂರಪ್ಪ ಹಾಗಂತ ಯಾವನ್ ರೀ ಹೇಳಿದ್ದು ಎಂದು ಕಿಡಿಕಾರಿದ್ದಾರೆ.
ನಾಳೆ ನಡೆಯುವ ಜನತಾ ಕರ್ಫ್ಯೂವನ್ನು ಸಾರ್ವಜನಿಕರು ಗಂಭೀರವಾಗಿ ತೆಗೆದುಕೊಳ್ಳುಬೇಕು. ಪ್ರವಾಸ, ವಾಕಿಂಗ್ ಅಂತ ಯಾರು ಕೂಡ ಹೊರ ಬರಬಾರದು ಎಂದು ಭಾಸ್ಕರ್ ರಾವ್ ಎಚ್ಚರಿಸಿದ್ದರು.ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಈ ನಡೆಯಿಂದ ಬಿ.ಎಸ್.ಯಡಿಯೂರಪ್ಪ ಗರಂ ಆಗಿದ್ದಾರೆ.









