ಮೈಸೂರು: ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಹೊರತಾಗಿಯೂ ಕೊರೊನಾ ಸೋಂಕು ತನ್ನ ಕಬಂದ ಬಾಹುಗಳನ್ನು ಚಾಚುತ್ತಲೇ ಇದೆ. ಇಂದು ಮೈಸೂರಿನಲ್ಲಿ ಓರ್ವ ವ್ಯಕ್ತಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಈ ವ್ಯಕ್ತಿ ದುಬೈನಿಂದ ಗೋವಾ, ಅಲ್ಲಿಂದ ಮೈಸೂರಿಗೆ ಪ್ರಯಾಣ ಬೆಳೆಸಿದ್ದಾನೆ. ಇಂದು ಒಂದೇ ದಿನ ರಾಜ್ಯದಲ್ಲಿ 5 ಕೊರೊನಾ ಸೋಂಕು ಪ್ರಕರಣಗಳು ಬೆಳಕಿಗೆ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಈ ಕುರಿತು ರಾಜ್ಯ ಆರೋಗ್ಯ ಇಲಾಖೆ ಸಚಿವ ಶ್ರೀ ರಾಮುಲು ಮಾಹಿತಿ ನೀಡಿದ್ದಾರೆ. ಸೋಂಕಿತ ವ್ಯಕ್ತಿಗೆ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕು ಪತ್ತೆಯಾದ ಹಿನ್ನೆಲೆ ಮೈಸೂರು ಜಿಲ್ಲಾಧಿಕಾರಿ ತುರ್ತು ಸುದ್ದಿಗೋಷ್ಠಿ ಕರೆದಿದ್ದು, ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆಯಾಗುವ ಸಾಧ್ಯತೆಗಳಿವೆ.









