ADVERTISEMENT
Sunday, September 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕ್ರಿಕೆಟಿಗರಿಂದ ಜನತಾ ಕರ್ಫ್ಯೂ ಗೆ ಬೆಂಬಲ

admin by admin
March 22, 2020
in International, Politics, Sports
Share on FacebookShare on TwitterShare on WhatsappShare on Telegram

ಜಗತ್ತಿನಾದ್ಯಂತ ಕೊರೋನಾ ವೈರಸ್ ತೀವ್ರವಾಗಿ ಹರಡುತ್ತಿದ್ದು, ಜಗತ್ತೇ ಸ್ತಬ್ಧವಾಗಿದೆ. ಬಹುತೇಕ ಎಲ್ಲಾ ಚಟುವಟಿಕೆಗಳು ನಿಂತಿದ್ದು, ಸಿನಿಮಾ ತಾರೆಯರು, ಆಟಗಾರರು ತಮ್ಮ ಮನೆಯಲ್ಲಿ ಪ್ರತ್ಯೇಕವಾಗಿ ಇರುವುದರೊಂದಿಗೆ ತಮ್ಮ ಅಭಿಮಾನಿಗಳಿಗೆ ಕೊರೊನಾ ವಿರುದ್ಧ ಹೋರಾಡಲು ಸಿದ್ಧರಾಗಿ ಎಂದು ಸಂದೇಶ ರವಾನಿಸುತ್ತಿದ್ದಾರೆ.

ಇಂಗ್ಲೆಂಡ್ ಮಾಜಿ ಸ್ಫೋಟಕ ಬ್ಯಾಟ್ಸ್ ಮ್ಯಾನ್ ಕೇವಿನ್ ಪೀಟರ್ಸನ್ ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್ ವಿರುದ್ಧ ಹೋರಾಡಲು ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ಅವರ ದೇಶದ ಮೇಲಿನ ಕಾಳಜಿ ನೋಡಿ ಪ್ರಧಾನಿ ಮೋದಿ ರೀಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಕೊರೋನಾ ಸೋಂಕಿನ ವಿರುದ್ಧ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಕೇವಿನ್ ಪೀಟರ್ಸನ್ ಹಿಂದಿಯಲ್ಲಿ  ಟ್ವೀಟ್ ಮಾಡಿದ್ದು, ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ನಮಸ್ಕಾರ ಭಾರತ, ನಾವು ಕೊರೊನಾ ವೈರಸ್ ನ ವಿರುದ್ಧ ಹೋರಾಡಲು ಒಂದಾಗಬೇಕಿದೆ. ನಾವು ನಮ್ಮ ಸರ್ಕಾರ ನೀಡುವ ಆದೇಶದಂತೆ ಸ್ವಲ್ಪ ದಿನಗಳ ಕಾಲ ಮನೆಯಲ್ಲೇ ಇರಬೇಕು. ನಾವೂ ಜಾಗರೂಕತೆಯಿಂದ ಇರಬೇಕಾದ ಸಮಯವಿದು ಎಂದು ಬರೆದುಕೊಂಡಿದ್ದಾರೆ.
ಇಂಗ್ಲೆಂಡ್ ದೇಶದವರಾದ ಕೇವಿನ್ ಪೀಟರ್ಸನ್ ಅವರಿಗೆ ನಮ್ಮ ದೇಶದ ಮೇಲಿರುವ ಕಾಳಜಿ ನೋಡಿ ಮತ್ತು ಹಿಂದಿಯಲ್ಲಿ ಅವರು ಟ್ವೀಟ್ ಮಾಡಿದ್ದನ್ನು ನೋಡಿ ಖುಷಿಯಾದ ಪ್ರಧಾನಿ ಮೋದಿ, ಪೀಟರ್ಸನ್ ಟ್ವೀಟ್ ಗೆ ರೀಟ್ವೀಟ್ ಮಾಡಿದ್ದಾರೆ. ಹಲವು ಬಿಕ್ಕಟ್ಟುಗಳ ಸಮಯದಲ್ಲಿ ತಮ್ಮ ತಂಡವನ್ನು ನೋಡಿದ ಸ್ಫೋಟಕ ಬ್ಯಾಟ್ಸ್ ಮ್ಯಾನ್ ನಮಗಾಗಿ ಏನನ್ನೋ ಹೇಳುತ್ತಿದ್ದಾರೆ ಕೇಳಿ ಎಂದು ಬರೆದು, ನಾವೂ ಕೂಡ ಕೊರೊನಾ ವೈರಸ್ ವಿರುದ್ಧ ಹೋರಾಡಲು ಒಗ್ಗೂಡುತ್ತೇವೆ ಎಂದು ಮೋದಿ ರೀಟ್ವೀಟ್ ಮಾಡಿದ್ದಾರೆ. ಮೋದಿ ಅವರು ಟ್ವೀಟ್‍ಗೆ ಕೇವಿನ್ ಪೀಟರ್ಸನ್ ರೀಟ್ವೀಟ್ ಮಾಡಿದ್ದು, ಧನ್ಯವಾದಗಳು ಮೋದಿಜೀ, ನಿಮ್ಮ ನಾಯಕತ್ವ ಕೂಡ ಬಹಳ ಸ್ಫೋಟಕವಾಗಿದೆ ಎಂದು ಬರೆದು ಕೊಂಡಿದ್ದಾರೆ.

Related posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

September 6, 2026
ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ರಾಹುಲ್ ಗಾಂಧಿಯನ್ನು ಮುಂದಿನ ಪ್ರಧಾನಿ ಎಂದು ಒಪ್ಪದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ-ಸೆಪ್ಟೆಂಬರ್ 9ರ ಸಭೆಯಲ್ಲಿ ಮೈತ್ರಿಕೂಟದ ಭವಿಷ್ಯ ನಿರ್ಧಾರ: ವಿಜಯ್ ಸರ್ಕಾರದ ಬುಡ ಅಲ್ಲಾಡಿಸುತ್ತಿದೆಯೇ ಪ್ರಧಾನಿ ಪಟ್ಟದ ಆಸೆ!

September 6, 2026

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಕೊರೊನಾ ತಡೆಗಟ್ಟಲು ಹಲವಾರು ಕ್ರಮಗಳನ್ನು ಕೈಗೊಂಡಿದೆ. ‌ಈ ಸಂಬಂಧ ಜನರಲ್ಲಿ, ಪ್ರಧಾನಿ ಮೋದಿ ಅವರು ಮಾರ್ಚ್ 22 ರ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಯಾರೂ ಹೊರಗಡೆ ಬರದೇ ಜನರೇ ಜನರಿಗಾಗಿ ಜನತಾ ಕರ್ಫ್ಯೂ ಆಚರಿಸುವಂತೆ ಮನವಿ ಮಾಡಿದ್ದಾರೆ. ನಾವು ಆರೋಗ್ಯವಾಗಿದ್ದರೆ ದೇಶ ಆರೋಗ್ಯದಲ್ಲಿರುತ್ತದೆ ಎಂದು ಕೇಳಿ ಕೊಂಡಿದ್ದಾರೆ.
ಈ ವಿಚಾರವಾಗಿ ಯುವರಾಜ್ ಸಿಂಗ್ ಅವರು ಕೂಡ ಟ್ವೀಟ್ ಮಾಡಿದ್ದು, ನಾವೆಲ್ಲರೂ ಸೇರಿ ನರೇಂದ್ರ ಮೋದಿ ಅವರ ಮನವಿಯನ್ನು ಪಾಲಿಸೋಣ. ನಾವು ಈಗ ಇರುವ ಪರಿಸ್ಥಿತಿ ಮತ್ತು ಕೊರೊನಾ ವೈರಸ್ ವಿರುದ್ಧ ಹೋರಾಡೋಣ. ಆರೋಗ್ಯಕರ ಜಾಗೃತಿ ಮೂಡಿಸಲು ಮತ್ತು ನಮ್ಮ ದೇಶವನ್ನು ಬೆಂಬಲಿಸಲು ಪ್ರತಿಯೊಬ್ಬ ಭಾರತೀಯನೂ ನನ್ನೊಂದಿಗೆ ಸೇರಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದರು.

ಭಾರತದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಅವರು ಕೂಡ, ನರೇಂದ್ರ ಮೋದಿ ಅವರು ನಮ್ಮ ದೇಶ ಕೊರೊನಾ ವೈರಸ್ ವಿರುದ್ಧ ಹೋರಾಡಲು ಒಳ್ಳೆಯ ಸಂದೇಶ ಕೊಟ್ಟಿದ್ದಾರೆ. ಮುಂಬರುವ ಸವಾಲುಗಳಿಗೆ ನಮ್ಮನ್ನು ಸಿದ್ಧಪಡಿಸಲು ಮೋದಿ ಜನತಾ ಕರ್ಫ್ಯೂಗೆ ಕರೆಕೊಟ್ಟಿದ್ದಾರೆ. ಅಗತ್ಯವಿರುವ ವಸ್ತುಗಳನ್ನು ಖರೀದಿ ಮಾಡಲು ಭಯಪಡಬೇಡಿ. ನಮ್ಮ ಪ್ರೀತಿ ಪಾತ್ರರು ಮತ್ತು ನಮ್ಮ ದೇಶದ ಜನರ ಯೋಗಕ್ಷೇಮದ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳುವ ಸಮಯವಿದು ಎಂದು ಟ್ವೀಟ್ ಮಾಡಿದ್ದಾರೆ.
ಯುವರಾಜ್ ಸಿಂಗ್ ಮತ್ತು ಮೊಹಮ್ಮದ್ ಕೈಫ್ ರವರ ಟ್ವೀಟ್‍ಗೆ ರೀಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇಬ್ಬರು ಅತ್ಯುತ್ತಮ ಕ್ರಿಕೆಟಿಗರು ಇಲ್ಲಿದ್ದಾರೆ. ಅವರ ಜೊತೆಯಾಟವನ್ನು ನಾವು ಶಾಶ್ವತವಾಗಿ ನೆನಪಿಸಿಕೊಳ್ಳುತ್ತೇವೆ. ಈಗ ಅವರು ಹೇಳಿದಂತೆ ಇದು ಮತ್ತೊಂದು ಜೊತೆಯಾಟದ ಸಮಯ. ಈ ಬಾರಿ ಇಡೀ ಭಾರತವೇ ಒಂದು ಒಳ್ಳೆಯ ಜೊತೆಯಾಟವಾಗಿ ಕೊರೊನಾ ವೈರಸ್ ವಿರುದ್ಧದ ಹೋರಾಟ ಮಾಡಬೇಕು ಎಂದು ಹೇಳಿದ್ದಾರೆ.

ಶನಿವಾರ ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಕೂಡ ವಿಡಿಯೋ ಮುಖಾಂತರ ತಮ್ಮ ಅಭಿಮಾನಿಗಳು ಸಂದೇಶ ನೀಡಿದ್ದರು. ಈಗ ನಾವೆಲ್ಲ ಬಹಳ ಕಠಿಣ ಪರಿಸ್ಥಿತಿಯಲ್ಲಿ ಇದ್ದೇವೆ. ನಾವೆಲ್ಲ ಸೇರಿ ಕೊರೊನಾ ವೈರಸ್ ಅನ್ನು ತಡೆ ಹಿಡಿಯಬೇಕಿದೆ. ನಾವು ನಮ್ಮ ಸುರಕ್ಷತೆಗಾಗಿ ಮನೆಯಲ್ಲಿ ಇದ್ದೇವೆ. ಹಾಗೇ ನೀವು ಕೂಡ ನಿಮ್ಮ ಸುರಕ್ಷತೆಗೆ ಮನೆಯಲ್ಲೇ ಇರಿ. ನಾವೆಲ್ಲರೂ ಸೇರಿ ಕೊರೊನಾ ಹರಡುವಿಕೆಯನ್ನು ತಡೆಯೋಣ. ನಾವಾಗಿಯೇ ಐಸೋಲೇಷನ್‍ನಲ್ಲಿ ಇರೋಣ ಎಂದು ವಿರುಷ್ಕಾ ಜೋಡಿ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Tags: #IndiaFightsCoronakevin pietersenmohammad kaifNarendra modiyuvraj singh
ShareTweetSendShare
Join us on:

Related Posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

by Shwetha
September 6, 2026
0

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ರಾಹುಲ್ ಗಾಂಧಿಯನ್ನು ಮುಂದಿನ ಪ್ರಧಾನಿ ಎಂದು ಒಪ್ಪದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ-ಸೆಪ್ಟೆಂಬರ್ 9ರ ಸಭೆಯಲ್ಲಿ ಮೈತ್ರಿಕೂಟದ ಭವಿಷ್ಯ ನಿರ್ಧಾರ: ವಿಜಯ್ ಸರ್ಕಾರದ ಬುಡ ಅಲ್ಲಾಡಿಸುತ್ತಿದೆಯೇ ಪ್ರಧಾನಿ ಪಟ್ಟದ ಆಸೆ!

by Shwetha
September 6, 2026
0

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಕಾಂಗ್ರೆಸ್ ನಡುವೆ 2029ರ ಲೋಕಸಭಾ ಚುನಾವಣೆಯ...

ಇದು ಗ್ಯಾರಂಟಿ ಸರಕಾರವಲ್ಲ ಜಾಹೀರಾತು ಸರಕಾರ:ಬಡವರ ರೇಷನ್ ಕಾರ್ಡ್ ಗೆ ಕನ್ನ ಹಾಕಿದ ಕಾಂಗ್ರೆಸ್-DK ಸರಕಾರದ ಬುಡ ಅಲ್ಲಾಡಿಸಿದ ವಿಜಯೇಂದ್ರ!

ಇದು ಗ್ಯಾರಂಟಿ ಸರಕಾರವಲ್ಲ ಜಾಹೀರಾತು ಸರಕಾರ:ಬಡವರ ರೇಷನ್ ಕಾರ್ಡ್ ಗೆ ಕನ್ನ ಹಾಕಿದ ಕಾಂಗ್ರೆಸ್-DK ಸರಕಾರದ ಬುಡ ಅಲ್ಲಾಡಿಸಿದ ವಿಜಯೇಂದ್ರ!

by Shwetha
September 6, 2026
0

ರಾಜ್ಯದ ಕಾಂಗ್ರೆಸ್ ಸರಕಾರ ಕೇವಲ ಗ್ಯಾರಂಟಿಗಳ ಹೆಸರಿನಲ್ಲಿ ಜನರಿಗೆ ಮಂಕುಬೂದಿ ಎರಚುತ್ತಿದ್ದು, ಇದು ಗ್ಯಾರಂಟಿ ಸರಕಾರವಲ್ಲ ಬದಲಿಗೆ ಬರೀ ಜಾಹೀರಾತು ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ....

ನಾಯಿ ಸಾಕಲು ರಿಜಿಸ್ಟ್ರೇಶನ್ ಬೇಕು, ನೂರು ವರ್ಷದ ಆರೆಸ್ಸೆಸ್ ಗೆ ಬೇಡವೇ? ಸಚಿವ ಶಿವರಾಜ ತಂಗಡಗಿ ಪ್ರಶ್ನೆ

ಭ್ರಷ್ಟಾಚಾರದ ಪಿತಾಮಹರನ್ನು ಕಂಕುಳಲ್ಲಿಟ್ಟುಕೊಂಡು ನೀತಿ ಪಾಠ ಮಾಡಬೇಡಿ:ಪೋಕ್ಸೋ ಕೇಸ್ ಪರಾಕ್ರಮಿಯ ಪುತ್ರನಿಗೆ ನಮ್ಮ ಬಗ್ಗೆ ಮಾತನಾಡಲು ಯೋಗ್ಯತೆಯಿಲ್ಲ ಎಂದ ಸಚಿವ ತಂಗಡಗಿ

by Shwetha
September 6, 2026
0

ಕೊಪ್ಪಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಆರೋಪಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಅತ್ಯಂತ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ವಿಜಯೇಂದ್ರ ಅವರ...

bizd-cup-media-cricket-tournament-bengaluru-gkvk-ground-zameer-ahmed-khan

ಜಿಕೆವಿಕೆ ಮೈದಾನದಲ್ಲಿ ಬಿಝಡ್ ಕಪ್ ಮೀಡಿಯಾ ಕ್ರಿಕೆಟ್ ಹಬ್ಬ: ಜಮೀರ್ ಅಹ್ಮದ್ ಖಾನ್‌ರಿಂದ ಚಾಲನೆ

by admin
September 5, 2026
0

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ ಮೈದಾನದಲ್ಲಿ 9 ಡ್ರಿಮ್ಸ್‌ ಸಂಸ್ಥೆ ಆಯೋಜಿಸಿರು ಬಿಝಡ್‌ ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿಗೆ ವಸತಿ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರು ಚಾಲನೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram