ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅರ್ನಬ್ ಬಂಧನ : ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ ಎಂದ ಬಿ.ಎಸ್.ಸಂತೋಷ್

Namratha Rao by Namratha Rao
November 4, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

( Arnab Goswami ) ಅರ್ನಬ್ ಬಂಧನ : ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ ಎಂದ ಬಿ.ಎಸ್.ಸಂತೋಷ್

ಬೆಂಗಳೂರು : ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ  ( Arnab Goswami ) ಅವರನ್ನು ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ. 2018 ರಲ್ಲಿ ಅವರ ಮತ್ತು ಇತರ ಇಬ್ಬರು ವಿರುದ್ಧ ದಾಖಲಾಗಿರುವ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಗೋಸ್ವಾಮಿ ನಿವಾಸದಿಂದ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Related posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

May 20, 2026
ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

May 20, 2026

ಇದನ್ನೂ ಓದಿ : ಪಿಂಚಣಿ ಹಣಕ್ಕಾಗಿ ಪತ್ನಿಯನ್ನು ಕೊಂದ 92ರ ವೃದ್ಧ!

ಅರ್ನಬ್ ಬಂಧನದ ಕುರಿತಾಗಿ ಟ್ವೀಟ್ ಮಾಡಿರುವ ಬಿ.ಎಲ್. ಸಂತೋಷ್, ಅರ್ನಬ್ ಗೋಸ್ವಾಮಿ ಅವರ ಬಂಧನ ವಾಕ್ ಸ್ವಾತಂತ್ರ್ಯದ ಮೇಲೆ ನಡೆದ ದಾಳಿ ಎಂದು ಕಿಡಿಕಾರಿದ್ದಾರೆ.

Arnab Goswami

ಮುಂಬೈ ಪೊಲೀಸರು ಉಗ್ರ ಅಜ್ಮಲ್ ಕಸಬ್ ಗೆ ಬಿರಿಯಾನಿ ತಿನ್ನಿಸಿದ್ದರು. ಆದರೆ, ಇದೀಗ ಅವರನ್ನು ಪ್ರಶ್ನಿಸಿದ ತಪ್ಪಿಗೆ ಮಾಧ್ಯಮಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ವಾಕ್ ಸ್ವಾತಂತ್ರ್ಯದ ಮೇಲೆ ನಂಬಿಕೆ ಇರುವ ಎಲ್ಲರೂ ದನಿ ಎತ್ತುವ ಸಮಯವಿದು ಎಂದು ಸಂತೋಷ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

 

Arnab Goswami

53 ವರ್ಷದ ಇಂಟೀರಿಯರ್ ಡಿಸೈನರ್ ಅವರ ಆತ್ಮಹತ್ಯೆಗೆ ಅರ್ನಬ್ ಗೋಸ್ವಾಮಿಯವರು ಪ್ರಚೋದನೆ ನೀಡಿರುವ ಆರೋಪದ ಮೇಲೆ ಮುಂಬೈ ಪೊಲೀಸರು ಅವರನ್ನು ಇಂದು ಬೆಳಗ್ಗೆ ಅವರ ನಿವಾಸದಲ್ಲಿ ಬಂಧಿಸಿದ್ದಾರೆ.

ಕೊಂಕಣ ರೈಲ್ವೆಯಲ್ಲಿ ಉದ್ಯೋಗಾವಕಾಶ – 58 ಟೆಕ್ನೀಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಅವರು ಮೇ 2018 ರಲ್ಲಿ ಅಲಿಬಾಗ್‌ನ ತಮ್ಮ ಬಂಗಲೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ರಿಪಬ್ಲಿಕ್ ಟಿವಿಯಿಂದ ಬಾಕಿ ಪಾವತಿಸದಿರುವುದು ತನ್ನ ತಂದೆ ಮತ್ತು ಅಜ್ಜಿಯನ್ನು ಆತ್ಮಹತ್ಯೆಗೆ ದೂಡಿದೆ ಎಂದು ನಾಯಕ್ ಅವರ ಪುತ್ರಿ ಅದ್ಯ್ನಾ ಆರೋಪಿಸಿದ್ದರು.‌

ರಿಪಬ್ಲಿಕ್ ಟಿವಿ ಈ ಆರೋಪಗಳನ್ನು ನಿರಾಕರಿಸಿತು ಮತ್ತು ಕೆಲವು ಪಟ್ಟಭದ್ರ ಹಿತಾಸಕ್ತಿ ಗುಂಪುಗಳು ಸುಳ್ಳು ಮತ್ತು ದುರುದ್ದೇಶಪೂರಿತ ಅಭಿಯಾನವನ್ನು ನಡೆಸುತ್ತಿವೆ. ನಾಯಕ್ ಅವರ ನಿಧನವನ್ನು ಒಳಗೊಂಡ ದುರಂತ ಘಟನೆಯನ್ನು ಬಳಸಿಕೊಳ್ಳುವ ಮೂಲಕ ಚಾನೆಲ್ ವಿರುದ್ಧ ಸುಳ್ಳು ಹೇಳಿಕೆಗಳು ಮತ್ತು ಪ್ರಚೋದನೆಗಳನ್ನು ನೀಡುತ್ತಿವೆ ಎಂದು ಹೇಳಿತ್ತು

Arnab Goswami

ಕಳೆದ ವಾರ, ಮುಂಬೈ ಪೊಲೀಸರು ಪೊಲೀಸ್ ಇಲಾಖೆಯ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡಿದ್ದಕ್ಕಾಗಿ ಕಾರ್ಯನಿರ್ವಾಹಕ ಸಂಪಾದಕ, ನಿರೂಪಕ, ಇಬ್ಬರು ವರದಿಗಾರರು ಮತ್ತು ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಇತರ ಸಂಪಾದಕೀಯ ಸಿಬ್ಬಂದಿ ಮೇಲೆ ಪ್ರಕರಣ ದಾಖಲಿಸಿದ್ದರು.

ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ವಿರುದ್ಧ ಪೊಲೀಸ್ ಸಿಬ್ಬಂದಿಯಲ್ಲಿ ಅಸಮಾಧಾನವನ್ನು ಉಂಟುಮಾಡುವ ಸುದ್ದಿಯನ್ನು ರಿಪಬ್ಲಿಕ್ ಚಾನೆಲ್ ಪ್ರಸಾರ ಮಾಡಿದೆ ಎಂದು ಪೊಲೀಸರು ತಿಳಿಸಿದ್ದರು. ಮುಂಬೈ ಪೊಲೀಸ್ ಸಿಬ್ಬಂದಿ ಪರಮ್ ಬಿರ್ ಸಿಂಗ್ ವಿರುದ್ಧ ದಂಗೆ ಏಳುತ್ತಿದ್ದಾರೆ ಮತ್ತು ಅವರ ಆದೇಶಗಳನ್ನು ಅವರು ಪಾಲಿಸುತ್ತಿಲ್ಲ ಎಂದು ಚಾನೆಲ್ ಪ್ರಸಾರ ಮಾಡಿತ್ತು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Arnab Goswamib l santhoshBJP
ShareTweetSendShare
Join us on:

Related Posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

by Shwetha
May 20, 2026
0

ಡಿಕೆ ಶಿವಕುಮಾರ್ ಅವರು ತುಮಕೂರನ್ನು 2ನೇ ಬೆಂಗಳೂರು ಆಗಿ ಅಭಿವೃದ್ಧಿಪಡಿಸುವ ಆಲೋಚನೆಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನಲ್ಲಿ ಆಯೋಜಿಸಿದ್ದ...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

by Shwetha
May 20, 2026
0

ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ನೇರ ಕಾರಣ ಎಂದು...

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

by Shwetha
May 20, 2026
0

ರಾಜ್ಯದ ಜನಸಾಮಾನ್ಯರಿಗೆ ಮತ್ತು ಬಡ ಕುಟುಂಬಗಳಿಗೆ ಕರ್ನಾಟಕ ಸರ್ಕಾರವು ಮಹತ್ವದ ಕೊಡುಗೆಯೊಂದನ್ನು ನೀಡಿದೆ. ಇನ್ನು ಮುಂದೆ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಕೇವಲ ಅಕ್ಕಿ, ಬೇಳೆ...

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

by Shwetha
May 20, 2026
0

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಗುಹಾಲಯದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಶ್ವ ವಿಖ್ಯಾತ ಬಾದಾಮಿ ಗುಹೆಗಳಲ್ಲಿ ಮುಸ್ಲಿಂ ಯುವತಿಯೊಬ್ಬಳು ಚಪ್ಪಲಿ...

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram