ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಮೃದ್ಧ ಕರ್ನಾಟಕ ಆರೋಗ್ಯ ಕರ್ನಾಟಕವೂ ಆಗಬೇಕಿದೆ : ಡಾ.ಕೆ.ಸುಧಾಕರ್

Mahesh M Dhandu by Mahesh M Dhandu
November 5, 2020
in Newsbeat, Samagra karnataka, ರಾಜ್ಯ
Minister Dr. K. Sudhakar People should wear masks without fail saaksha tv

Minister Dr. K. Sudhakar

Share on FacebookShare on TwitterShare on WhatsappShare on Telegram

ಸಮೃದ್ಧ ಕರ್ನಾಟಕ ಆರೋಗ್ಯ ಕರ್ನಾಟಕವೂ ಆಗಬೇಕಿದೆ : ಡಾ.ಕೆ.ಸುಧಾಕರ್

ನಮ್ಮ 3 ಲಕ್ಷ ಸಿಬ್ಬಂದಿಗೆ 6 ಕೋಟಿ ಕನ್ನಡಿಗರ ಆರೋಗ್ಯ ಕಾಪಾಡುವ ಹೊಣೆ ಇದೆ

Related posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

July 29, 2026
sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026

ಬೆಂಗಳೂರು : 3 ಲಕ್ಷ ಅಧಿಕಾರಿ, ಸಿಬ್ಬಂದಿ ಇರುವ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳು 6 ಕೋಟಿ ಕನ್ನಡಿಗರ ಆರೋಗ್ಯ ಕಾಪಾಡುವ ಹೊಣೆಯನ್ನು ಇನ್ನಷ್ಟು ಉತ್ತಮವಾಗಿ ನಿಭಾಯಿಸುವ ಮೂಲಕ, ಸಮೃದ್ಧ ಕರ್ನಾಟಕವನ್ನು ಆರೋಗ್ಯ ಕರ್ನಾಟಕವಾಗಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕಿವಿಮಾತು ಹೇಳಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಈಗ ಆರೋಗ್ಯ ಇಲಾಖೆಯೊಂದಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಜೊತೆಯಾಗಿದೆ.

Dr.K.Sudhakar

 

ಆರೋಗ್ಯ ಇಲಾಖೆಯಡಿ, 2.50 ಲಕ್ಷ ಸಿಬ್ಬಂದಿ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಡಿ 30-40 ಸಾವಿರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.

ಎರಡೂ ಇಲಾಖೆಗಳು ಸೇರಿ ಒಟ್ಟು 3 ಲಕ್ಷ ಸಿಬ್ಬಂದಿ ರಾಜ್ಯದ 6 ಕೋಟಿ ಜನರ ಆರೋಗ್ಯ ಕಾಪಾಡುವ ಕೆಲಸ ಮಾಡುತ್ತಿದ್ದಾರೆ“ ಎಂದರು.

“ಸರ್ಕಾರಿ ಆಸ್ಪತ್ರೆಯಲ್ಲಿ ಗುಣಮಟ್ಟ ಕಡಿಮೆ, ಖಾಸಗಿ ಆಸ್ಪತ್ರೆಯಲ್ಲಿ ಗುಣಮಟ್ಟ ಹೆಚ್ಚು ಎನ್ನುವ ತಪ್ಪು ಕಲ್ಪನೆ ಇದೆ. ನಾವು ವೈದ್ಯರಾಗಿ ಈ ತಪ್ಪು ಕಲ್ಪನೆಯನ್ನು ದೂರ ಮಾಡಬೇಕು.

ಇದನ್ನೂ ಓದಿ : ಹಿಂಗಾರು ಹಂಗಾಮಿಗೆ ಕೃಷಿ ಇಲಾಖೆ ಸಿದ್ಧ : ಬಿ.ಸಿ.ಪಾಟೀಲ್ ಪೂರ್ವಭಾವಿ ಸಭೆ  

ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ ರಾಜ್ಯ ಸರ್ಕಾರವು ಎಲ್ಲ ಬಗೆಯ ಮೂಲಸೌಕರ್ಯ ಹಾಗೂ ವೈದ್ಯರಿಗೆ ಸಿಗಬೇಕಾದ ಗೌರವವನ್ನು ನೀಡಲಿದೆ. ಇದಕ್ಕೆ ಪೂರಕವಾಗಿ ಕಾನೂನು ತಿದ್ದುಪಡಿ, ಹೊಸ ಕಾನೂನು ತರುವ ಉದ್ದೇಶವೂ ಇದೆ” ಎಂದು ವಿವರಿಸಿದರು.

ಒಂದು ದಿನದ ಆಚರಣೆಯಲ್ಲ

“ಕನ್ನಡ ರಾಜ್ಯೋತ್ಸವ ಆಚರಣೆ ಒಂದು ದಿನಕ್ಕೆ ಸೀಮಿತವಲ್ಲ. ಇಡೀ ವರ್ಷವೂ ಈ ನಾಡಹಬ್ಬವನ್ನು ಆಚರಿಸಬಹುದು. ಈಗ ಅನೇಕರು ಓದುವುದನ್ನು ಕಡಿಮೆ ಮಾಡಿದ್ದಾರೆ.

ಮಾಧ್ಯಮಗಳು, ಸ್ಮಾರ್ಟ್ ಫೋನ್ ಗಳನ್ನು ಬಳಸಿಕೊಂಡು ಹೆಚ್ಚು ಓದಬಹುದು. ಆದರೆ ವ್ಯಕ್ತಿತ್ವ ವಿಕಸನವಾಗಲು ಪುಸ್ತಕಗಳ ಓದು ಬಹಳ ಮುಖ್ಯ. ಈ ಅಭ್ಯಾಸವನ್ನು ಬಾಲ್ಯದಿಂದಲೇ ಆರಂಭಿಸಬೇಕು” ಎಂದು ಸಚಿವರು ಸಲಹೆ ನೀಡಿದರು.

Dr.K.Sudhakar

“ಸ್ವಾತಂತ್ರ್ಯಪೂರ್ವದಲ್ಲೇ ಕರ್ನಾಟಕ ರಾಜ್ಯ ರಚಿಸುವ ಹೋರಾಟ ಆರಂಭವಾಗಿತ್ತು. ಎಲ್ಲ ಪ್ರಾಂತ್ಯಗಳನ್ನು ಒಟ್ಟುಗೂಡಿಸಲು ಅನೇಕರು ಹೋರಾಟ ಮಾಡಿದ್ದರು.

ಆದಿಕವಿ ಪಂಪರಿಂದ ಆರಂಭವಾಗಿ ಈಗಿನ ಸಾಹಿತಿಗಳವರೆಗೆ, ಎಲ್ಲರ ಪ್ರಯತ್ನದಿಂದ ಭಾಷೆ ಸಮೃದ್ಧಿಯಾಗಿದೆ. ಕವಿ ಕುವೆಂಪು, ಇಡೀ ಜಗತ್ತಿಗೆ ಶಾಂತಿಯ ಪಾಠ ಮಾಡಿದರು.

ಭಾಲ್ಕಿ ವಸತಿ ಹಗರಣ: ಖಂಡ್ರೆ-ಖೂಬಾ ಬಹಿರಂಗ ಚರ್ಚೆಗೆ ಬಿತ್ತು ಬ್ರೇಕ್..!

ವಿಶ್ವಮಾನವರಾಗಬೇಕು ಎಂಬ ಸಂದೇಶವನ್ನು ಅವರು ನೀಡಿದರು. ಅಂತಹ ಸಾಹಿತಿಗಳ ಆಶಯದಂತೆ ಕರ್ನಾಟಕವನ್ನು ಸಮೃದ್ಧವಾಗಿಸಬೇಕು” ಎಂದರು.

ಸಮಾರಂಭದಲ್ಲಿ, ಆರೋಗ್ಯ ವಿಜ್ಞಾನಗಳ ಲೇಖಕರನ್ನು ಸನ್ಮಾನಿಸಲಾಯಿತು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ವಿವಿ ಕುಲಪತಿ ಡಾ.ಎಸ್.ಸಚ್ಚಿದಾನಂದ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bangaloreDr K Sudakarkannada rajyothasava
ShareTweetSendShare
Join us on:

Related Posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

by admin
July 29, 2026
0

ಪ್ರತಿಯೊಬ್ಬರ ನಿಜ ಜೀವನದ ಬದುಕಿನಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ...

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram