ಯತ್ನಾಳ್ ಹುಚ್ಚರಂತೆ ಮಾತನಾಡುತ್ತಿದ್ದಾರೆ : ರೇಣುಕಾಚಾರ್ಯ
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಾಸಕ ರೇಣುಕಾಚಾರ್ಯ ಕಿಡಿಕಾಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪನವರು ಕೇವಲ ವೀರಶೈವ ಸಮುದಾಯಕ್ಕೆ ಮಾತ್ರ ಸೇರಿದವರಲ್ಲ.
ಅವರು ಎಲ್ಲ ಸಮಾಜಕ್ಕೂ ಸೇರಿದ ನಾಯಕರು. ಕೆಲ ವೀರಶೈವ ಮುಖಂಡರು ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಇವರಿಗೆ ಅಧಿಕಾರ ನೀಡಿದವರು ಯಾರು ಎಂದು ಪ್ರಶ್ನಿಸಿದರು.
ಇದೇ ವೇಳೆ ಯತ್ನಾಳ್ ವಿರುದ್ಧ ಕಿಡಿಕಾರಿ, ಬಸನಗೌಡ ಪಾಟೀಲ್ ಯತ್ನಾಳ್ ಹುಚ್ಚರಂತೆ ಮಾತನಾಡುತ್ತಿದ್ದಾರೆ. ಸಚಿವ ಸ್ಥಾನ ಸಿಗದೆ ಹತಾಶರಾಗಿ ಈ ರೀತಿ ಹುಚ್ಚು ಹುಚ್ಚಾಗಿ ಹೇಳಿಕೆ ನೀಡುತ್ತಿದ್ದಾರೆ.
ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕರೆಲ್ಲರೂ ಒತ್ತಾಯ ಮಾಡುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ : ರಾಜ್ಯದಲ್ಲಿ ಇಬ್ಬರು ಸಿಎಂ ಇದ್ದಾರೆ : ಸಿದ್ದರಾಮಯ್ಯ
ಫಲಿತಾಂಶದ ಬಳಿಕ ಸಿಎಂ ಬದಲಾಗುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, ಯಡಿಯೂರಪ್ಪನವರು ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ.
ಈ ಅವಧಿಯನ್ನು ಅವರೇ ಪೂರ್ಣಗೊಳಿಸುತ್ತಾರೆ ಎಂದು ವರಿಷ್ಠರೇ ಹೇಳಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಭ್ರಮಾಲೋಕದಿಂದ ಹೊರಗೆ ಬರಬೇಕಿದೆ.
ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತೇನೆ ಎಂಬ ಭ್ರಮೆಯಲ್ಲಿ ತೇಲುತ್ತಿದ್ದಾರೆ. ಇದರಿಂದಾಗಿಯೇ ಯಡಿಯೂರಪ್ಪನವರು ಸಿದ್ದರಾಮಯ್ಯ ಟೀಕೆ ಮಾಡುತ್ತಿದ್ದಾರೆ ಎಂದು ಟಾಂಗ್ ನೀಡಿದರು.
ಕಾಂಗ್ರೆಸ್ ನಲ್ಲಿ ಪವರ್ ಸೆಂಟರ್ ಗಳು ಹೆಚ್ಚಾಗುತ್ತಿವೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ರೇಣುಕಾಚಾರ್ಯ, ಡಿಕೆಶಿವಕುಮಾರ್ ಪವರ್ ಸೆಂಟರ್, ಸಿದ್ದರಾಮಯ್ಯ ಪವರ್ ಸೆಂಟರ್ ಹೀಗೆ ಅನೇಕ ಪವರ್ ಸೆಂಟರ್ ಗಳಿವೆ.
ಹೀಗಾಗಿ ಸಿದ್ದರಾಮಯ್ಯನವರಿಗೆ ವಿಪಕ್ಷ ನಾಯಕ ಸ್ಥಾನ ಹೋಗಬಹುದು ಎಂಬ ಭಯ ಶುರುವಾಗಿದೆ. ಈ ಕಾರಣಕ್ಕಾಗಿ ಯಡಿಯೂರಪ್ಪ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಹರಿಹಾಯ್ದರು.
ಯಾರು ಏನೇ ಹೇಳಲಿ ಶಿರಾದಲ್ಲಿ ನಾವೇ ಗೆಲ್ತೀವಿ : ಹೆಚ್ ಡಿಕೆ
ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿ, ಈ ಬಾರಿ ಸಚಿವ ಸಂಪುಟದಲ್ಲಿ ನನಗೆ ಅವಕಾಶ ನೀಡುತ್ತಾರೆ ಎನ್ನುವ ಭರವಸೆ ಇದೆ.
ಹಾದಿ ಬೀದಿಯಲ್ಲಿ ನಾನು ಸಚಿವ ಸ್ಥಾನದ ಬಗ್ಗೆ ಮಾತನಾಡುವುದಿಲ್ಲ, ಕೇಳುವುದಿಲ್ಲ. ಆದರೆ ಈ ಬಗ್ಗೆ ಪಕ್ಷದ ಮುಖಂಡರ ಜತೆ ಚರ್ಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










