poonam
ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದ ಕಾಂಟ್ರವರ್ಸಿ ಕ್ವೀನ್ ನಟಿ ಪೂನಂ ಪಾಂಡೆಯನ್ನ ಅರೆಸ್ಟ್ ಮಾಡಲಾಗಿದೆ. ಗೋವಾ ಪೊಲೀಸರು ಮಾಡೆಲ್ ಪೂನಂ ಪಾಂಡೆ ಅವರನ್ನು ಬಂಧಿಸಿದ್ದಾರೆ. ಗೋವಾದ ಅಗುವಾಡಾದಲ್ಲಿರುವ ರೆಸಾರ್ಟ್ನಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಗೋವಾದ ಕಾನಕೋಣದ ಚಾಪೋಲಿ ಡ್ಯಾಮ್ ಬಳಿ ಅಸಭ್ಯವಾಗಿ ವಿಡಿಯೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ನಟಿ ಪೂನಂ ಹಂಚಿಕೊಂಡಿದ್ದರು. ಈ ವಿಡಿಯೋಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ ರಾಜಕೀಯ ತಿರುವು ಪಡೆದಿತ್ತು. ನಿರ್ಭಂಧಿತ ಪ್ರದೇಶದಲ್ಲಿ ಈ ರೀತಿಯಾದ ಅಸಭ್ಯ ವಿಡಿಯೋ ಚಿತ್ರೀಕರಣ ನಡೆಸಿದ ಹಿನ್ನೆಲೆ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಟೀಕಾ ಪ್ರಹಾರ ನಡೆಸಿದ್ದವು.
ಈ ಸಂಬಂಧ ಗೋವಾ ಫಾರ್ವರ್ಡ್ ಪಾರ್ಟಿ ದೂರಿನ ಹಿನ್ನೆಲೆ ಎಫ್ಐಆರ್ ದಾಖಲಿಸಲಾಗಿತ್ತು. ಈ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಕೆನಕೋನಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ತುಕಾರಂ ಚವಾಣ್ ಅವರನ್ನು ಅಮಾನತುಗೊಳಿಸಲಾಗಿದೆ. ಈ ವೀಡಿಯೋ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಉತ್ತೇಜನ ನೀಡುವಂತಿದ್ದು, ಸಂಸ್ಕೃತಿಗೆ ಹೆಸರುವಾಸಿಯಾಗಿರುವ ಕಾನಕೋಣಕ್ಕೆ ಅಪಮಾನವಾಗಿದೆ. ಈ ವಿಡಿಯೋವನ್ನು ಸರ್ಕಾರಿ ಆಸ್ತಿಯಲ್ಲಿ ಹೇಗೆ ಚಿತ್ರೀಕರಿಸಲಾಗಿದೆ ಮತ್ತು ಯಾರ ಅನುಮತಿಯೊಂದಿಗೆ ಚಿತ್ರಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗೋವಾ ಫಾರ್ವರ್ಡ್ ಪಾರ್ಟಿ ದೂರಿದೆ.

ರಾಕಿಂಗ್ ಸ್ಟಾರ್ ಯಶ್ ಚಿತ್ರಕ್ಕೆ ಆ್ಯಕ್ಷನ್, ಕಟ್ ಹೇಳಲಿದ್ದಾರಾ ತಮಿಳು ನಿರ್ದೇಶಕ ?
poonam
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








