ಬಿದ್ದು ಎದ್ದು ಗೆದ್ದು ಬರುವೆನು : ವಿನಯ್ ಕುಲಕರ್ಣಿ
ಧಾರವಾಡ : ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ತಮ್ಮನ್ನು ಬಂಧಿಸಿರುವುದು ರಾಜಕೀಯ ಪ್ರೇರಿತ ಎಂದಿರುವ ವಿನಯ್ ಕುಲಕರ್ಣಿ ಇದೀಗ ಫೇಸ್ ಬುಕ್ ನಲ್ಲಿ “ಬಿದ್ದು ಎದ್ದು ಗೆದ್ದು ಬರುವೆನು, ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು” ಎಂದು ಪೋಸ್ಟ್ ಮಾಡಿದ್ದಾರೆ.
ಈ ಕುರಿತು ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿದ್ದು, ಎದ್ದು, ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು, ಗೆದ್ದು ಬರುವೆನು. ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ.
ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೆ ಹೋಗುತ್ತದೆ. ಸತ್ಯಕ್ಕೆ ಸೋಲಿಲ್ಲ, ನನ್ನೆಲ್ಲಾ ಪ್ರೀತಿ ಪಾತ್ರರಿಗೆ ನನ್ನ ಮೇಲಿಟ್ಟಿರುವ ನಂಬಿಕೆಗೆ ನಾನು ಚಿರಋಣಿ, ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದೂ ಸುಳ್ಳಾಗುವುದಿಲ್ಲ. ಇಂತಿ ನಿಮ್ಮ ವಿನಯ ಕುಲಕರ್ಣಿ ಎಂದು ಬರೆದುಕೊಂಡಿದ್ದಾರೆ.
ಜೊತೆಗೆ ತಮ್ಮ ಪರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣಗಳ ಪೋಸ್ಟ್ ಫೋಟೋ ಹಾಕಿ ವಿನಯ್ ಕುಲಕರ್ಣಿ ಸಾಲುಗಳನ್ನು ಬರೆದಿದ್ದಾರೆ.
ಹಿನ್ನೆಲೆ
ಜಿಲ್ಲಾಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪೊಲೀಸರು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿದ್ದಾರೆ.
ದೆಹಲಿಗೆ ಟ್ರಬಲ್ ಶೂಟರ್ : ಸಿದ್ದು ಸೇನೆಗೆ ಮೂಗುದಾರ ಹಾಕೋ ಪ್ಲಾನಾ..?
ಗುರುವಾರ ಬೆಳಿಗ್ಗೆ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದಿದ್ದರು. ಸತತ 9 ಗಂಟೆಗಳ ಕಾಲ ನಡೆದ ವಿಚಾರಣೆ ಬಳಿಕ ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಯಿತು.
ವಿನಯ್ ಕುಲಕರ್ಣಿ ಅವರನ್ನು ಬಂಧಿಸುತ್ತಿದ್ದಂತೆ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಹಾಗೂ ಕೊರೊನಾ ಪರೀಕ್ಷೆ ನಡೆಸಲಾಯಿತು.
ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ವಿನಯ್ ಕುಲಕರ್ಣಿ ಅವರನ್ನು ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಹೇಡಿಗಳ ರಾಜಕೀಯ ಮಾಡುವುದು ಬಿಜೆಪಿಯ ಚಾಳಿ : ಕಾಂಗ್ರೆಸ್
ಈ ವೇಳೆ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಕಷ್ಟಡಿಗೆ ನೀಡುವಂತೆ ಸಿಬಿಐ ಪರ ವಕೀಲರು ಕೋರ್ಟ್ ಗೆ ಮನವಿ ಮಾಡಿದರು. ಎರಡೂ ಕಡೆಗಳ ವಾದ ಆಲಿಸಿದ ನ್ಯಾಯಾಧೀಶರು ವಿನಯ್ ಕುಲಕರ್ಣಿ ಅವರನ್ನು ಶುಕ್ರವಾರ ಸಂಜೆವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel