ADVERTISEMENT
Tuesday, May 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶಾಲೆಗಳ ಪುನಾರಂಭ ಬಗ್ಗೆ ಸರ್ಕಾರದ ಪತ್ರಕ್ಕೆ ಸಿದ್ದು ಕೊಟ್ಟ ಉತ್ತರದಲ್ಲೇನಿದೆ ಗೊತ್ತಾ..?

Kariyappa N by Kariyappa N
November 6, 2020
in Newsbeat, Politics, Samagra karnataka, ರಾಜ್ಯ
letter
Share on FacebookShare on TwitterShare on WhatsappShare on Telegram

ಕೊರೊನಾ ನಿಯಂತ್ರಣಕ್ಕೆ ಬರುವವರೆಗೆ ಶಾಲೆ ಆರಂಭ ಬೇಡ
ಎಲ್ಲಾ ಮಕ್ಕಳಿಗೂ ಆನ್‍ಲೈನ್ ತರಗತಿ ಪ್ರಾರಂಭಿಸಿ
ಶೈಕ್ಷಣಿಕ ವರ್ಷದ ಎಲ್ಲಾ ವಿದ್ಯಾರ್ಥಿಗಳನ್ನು ಪಾಸು ಮಾಡಿ
ಕೊರೊನಾ ಸಾವುಗಳ ಸಂಖ್ಯೆಗಳನ್ನು ಮುಚ್ಚಿಡುತ್ತಿದೆ ಸರ್ಕಾರ

ಬೆಂಗಳೂರು: ಹೆಮ್ಮಾರಿ ಕೊರೊನಾ ಅಟ್ಟಹಾಸದ ನಡುವೆಯೂ ರಾಜ್ಯ ಸರ್ಕಾರ ಸಿದ್ಧತೆಗಳನ್ನು ನಡೆಸಿರುವ ಬೆನ್ನಲ್ಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸುದೀರ್ಘ ಪತ್ರ ಬರೆದಿದ್ದಾರೆ.

Related posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

May 26, 2026
ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

May 26, 2026


ಶಾಲೆಗಳನ್ನು ಆರಂಭಿಸುವ ವಿಚಾರವಾಗಿ ಅಭಿಪ್ರಾಯ ತಿಳಿಸುವಂತೆ ಶಾಸಕರು ಹಾಗೂ ಸಂಸದರಿಗೆ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದರು ಸಚಿವರ ಪತ್ರಕ್ಕೆ ಸಿದ್ದರಾಮಯ್ಯ ಪತ್ರ ಬರೆದು ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರ ಪತ್ರದ ಪೂರ್ತಿ ವಿವರ ಇಲ್ಲಿದೆ..
ಶಾಲೆಗಳನ್ನು ತೆರೆಯುವ ಕುರಿತಂತೆ ಅಭಿಪ್ರಾಯಗಳನ್ನು/ಸಲಹೆಗಳನ್ನು ಸಂಗ್ರಹಿಸುವ ಕುರಿತಾದ ನಿಮ್ಮ ಪತ್ರ ನನಗೆ 07-10-2020 ರಂದು ತಲುಪಿದೆ. ಸಮಾಜದ ಮತ್ತು ವಿರೋಧ ಪಕ್ಷದ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿರುವುದಕ್ಕಾಗಿ ತಮಗೆ ಧನ್ಯವಾದಗಳು.
ಕೊರೊನಾ ಪರಿಸ್ಥಿತಿಯ ವಿಚಾರಗಳನ್ನು ಗಮನದಲ್ಲಿ ಇಟ್ಟುಕೊಂಡು ರಾಜ್ಯದಲ್ಲಿ ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಶಾಲೆಗಳನ್ನು ಯಾವ ಕಾರಣಕ್ಕೂ ತೆರೆಯಬಾರದೆಂದು ಆಗ್ರಹಿಸುತ್ತೇನೆ. ನಗರ ಪ್ರದೇಶಗಳ ಖಾಸಗಿ ಶಾಲೆಗಳ ಮಕ್ಕಳಿಗೆ ಆನ್‍ಲೈನ್ ತರಗತಿಗಳು ನಡೆಯುತ್ತಿವೆ. ರಾಜ್ಯದ ಎಲ್ಲಾ ಮಕ್ಕಳಿಗೂ ಆನ್‍ಲೈನ್ ತರಗತಿಗಳನ್ನು ಪ್ರಾರಂಭಿಸುವುದು ಕೂಡ ಅಗತ್ಯ ಎಂದು ಭಾವಿಸುತ್ತೇನೆ.


ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಸವಲತ್ತುಗಳನ್ನು ಸರ್ಕಾರ ಕಲ್ಪಿಸಿಕೊಡಬೇಕೆಂದು ಒತ್ತಾಯಿಸುತ್ತೇನೆ. ಪ್ರಸ್ತುತ ಶೈಕ್ಷಣಿಕ ವರ್ಷದ ಎಲ್ಲಾ ವಿದ್ಯಾರ್ಥಿಗಳನ್ನು ಪಾಸು ಮಾಡಿ ಮುಂದಿನ ತರಗತಿಗಳಿಗೆ ಕಳುಹಿಸಬೇಕೆಂದು ಮತ್ತು ಕೊರೊನಾ ಪರಿಸ್ಥಿತಿ ಹತೋಟಿಗೆ ಬಂದ ನಂತರ ಮತ್ತೊಮ್ಮೆ ಎಲ್ಲರ ಅಭಿಪ್ರಾಯಗಳನ್ನು ಪಡೆದು ಶಾಲೆಗಳನ್ನು ಪ್ರಾರಂಭಿಸಬಹುದೆಂದು ತಮಗೆ ಸಲಹೆ ನೀಡಲು ಬಯಸುತ್ತೇನೆ.
ರಾಜ್ಯದಲ್ಲಿ ಕೊರೊನಾ ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ. ದೇಶದ ಉಳಿದೆಡೆಗಿಂತ ಕರ್ನಾಟಕದಲ್ಲಿ ಭೀಕರ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಟೆಸ್ಟ್ ಗಳ ಸಂಖ್ಯೆ ಹೆಚ್ಚಿಸಿದಂತೆಲ್ಲಾ ಪ್ರಕರಣಗಳ ಸಂಖ್ಯೆಯೂ ಹೆಚ್ಚು ಪತ್ತೆಯಾಗುತ್ತಿರುವುದು ಆತಂಕ ಹುಟ್ಟಿಸುತ್ತಿದೆ. ತಜ್ಞರ ಮಾತುಗಳ ಪ್ರಕಾರ ಈ ವರ್ಷ ಜೀವ ಉಳಿಸಿಕೊಳ್ಳಬೇಕೇ ಹೊರತು ಉಳಿದೆಲ್ಲವನ್ನು ನಗಣ್ಯವೆಂದು ಭಾವಿಸಬೇಕು.
ಹಿಂದೆ ವಿವಿಧ ತರಗತಿಗಳಿಗೆ ಪರೀಕ್ಷೆಗಳನ್ನು ನಡೆಸುವ ಸಂದರ್ಭದಲ್ಲಿ ಸ್ವತ: ನಾನೇ ಬೆಂಬಲಿಸಿದ್ದೆ. ಆದರೆ ಇಂದಿನ ಪರಿಸ್ಥಿತಿಯೆ ಬೇರೆಯಾಗಿದೆ.

ಅಂಕಿ ಅಂಶಗಳನ್ನು ತಿರುಚಿದ ಸರ್ಕಾರ..!
ಅಂಕಿ ಅಂಶಗಳನ್ನು ತಿರುಚುವ ಮೂಲಕ ಕೊರೋನಾ ನಿರ್ವಹಣೆಯಲ್ಲಿ ಸರ್ಕಾರ ತನ್ನ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ. ಸರ್ಕಾರದ ಬೆನ್ನನ್ನು ಜನರು ತಟ್ಟಬೇಕೇ ಹೊರತು ಸರ್ಕಾರವೇ ತಟ್ಟಿಕೊಂಡರೆ ಹಾಸ್ಯಾಸ್ಪದವಾಗುತ್ತದೆ.
ಸರ್ಕಾರದ ದಾಖಲೆಗಳ ಪ್ರಕಾರ 10 ವರ್ಷದೊಳಗಿನ 20,256 ಮಕ್ಕಳು ಮತ್ತು 11ರಿಂದ 20 ವರ್ಷದೊಳಗಿನ 47,061 ಮಕ್ಕಳು ಈಗಾಗಲೇ ಕೊರೊನಾ ಸೋಂಕಿತರಾಗಿದ್ದಾರೆ. ಈ ಎರಡೂ ಗುಂಪಿನಿಂದ 61 ಮಕ್ಕಳು ಮೃತಪಟ್ಟಿದ್ದಾರೆ.

ಕೊರೊನಾ ಸಾವುಗಳ ಸಂಖ್ಯೆ ಮುಚ್ಚಿಟ್ಟ ಸರ್ಕಾರ
ಸರ್ಕಾರ ಕೊರೊನಾ ಸಾವುಗಳ ಸಂಖ್ಯೆಯನ್ನು ದೊಡ್ಡ ಮಟ್ಟದಲ್ಲಿ ಮುಚ್ಚಿಡುತ್ತಿದೆ ಎಂಬ ಮಾಹಿತಿ ನನಗೆ ಇದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೆ 99 ಜನ ಮೃತ ಪಟ್ಟಿದ್ದಾರೆಂದು ಸರ್ಕಾರ ಹೇಳುತ್ತಿದೆ.
ನನಗಿರುವ ಅಧಿಕೃತ ಮಾಹಿತಿಯ ಪ್ರಕಾರ ದೊಡ್ಡಬಳ್ಳಾಪುರ ಒಂದರಲ್ಲೇ ಇಷ್ಟು ಜನರು ಮರಣ ಹೊಂದಿದ್ದಾರೆ. ಹೊಸಕೋಟೆಯಲ್ಲಿ ಸುಮಾರು 80 ಜನ, ನೆಲಮಂಗಲದಲ್ಲಿ 40 ಜನ, ದೇವನಹಳ್ಳಿಯಲ್ಲಿ 50 ಕ್ಕಿಂತ ಹೆಚ್ಚು ಜನ ಮೃತಪಟ್ಟಿದ್ದಾರೆ.
ಈ ಕುರಿತು ನಿಮಗೆ ನಂಬಿಕೆ ಇಲ್ಲದಿದ್ದರೆ ತಾಲ್ಲೂಕು ಆರೋಗ್ಯಾಧಿಕಾರಿಗಳನ್ನು ಕೇಳಿ ನೋಡಿ ಸತ್ಯ ಗೊತ್ತಾಗುತ್ತದೆ. ಆಸ್ಪತ್ರೆಗೆ ಹೋಗಲು ಭಯಭೀತರಾಗಿ ಕಾಯಿಲೆ ಪತ್ತೆಯಾಗದೇ ಮೃತಪಟ್ಟವರ ಸಂಖ್ಯೆ ಎಷ್ಟು ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ.
ಬೆಂಗಳೂರು ನಗರದ ಪರಿಸ್ಥಿತಿಯೂ ಇದಕ್ಕೆ ಹೊರತಲ್ಲ. ನಗರದಲ್ಲಿ 3,190 ಜನರು ಕೊರೊನಾದಿಂದ ಮೃತಪಟ್ಟಿದ್ದಾರೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಕಳೆದ ವರ್ಷದ ಜುಲೈನಲ್ಲಿ 5,778, ಆಗಸ್ಟ್ ನಲ್ಲಿ 5,481, ಸೆಪ್ಟೆಂಬರ್ ನಲ್ಲಿ 5,411 ಜನರು ಮೃತಪಟ್ಟಿದ್ದರು. ಈ ವರ್ಷದ ಜುಲೈನಲ್ಲಿ 6,477, ಆಗಸ್ಟ್ ನಲ್ಲಿ 9,340, ಸೆಪ್ಟೆಂಬರ್ ನಲ್ಲಿ 8,710 ಜನರು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮರಣ ಹೊಂದಿದ್ದಾರೆಂಬ ಸರ್ಕಾರದ ದಾಖಲೆಗಳನ್ನು ಆಧರಿಸಿ ಪತ್ರಿಕೆಯೊಂದು ವರದಿ ಮಾಡಿದೆ. ಈ ಕುರಿತಂತೆ ಎರಡೂ ವರ್ಷಗಳ ರಾಜ್ಯದ ಸಂಪೂರ್ಣ ಮಾಹಿತಿ ನೀಡುವಂತೆ ನಾನು ದಿನಾಂಕ: 30-09-2020 ರಂದು ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಇನ್ನೂ ಉತ್ತರ ಬಂದಿಲ್ಲ.

corona deaths
2019ರ ಜುಲೈನಿಂದ ಸೆಪ್ಟೆಂಬರ್ ವರೆಗೆ 16,670 ಜನರು ಬೆಂಗಳೂರಿನಲ್ಲಿ ಮರಣ ಹೊಂದಿದ್ದಾರೆ. ಈ ವರ್ಷದ ಇದೇ 3 ತಿಂಗಳ ಅವಧಿಯಲ್ಲಿ 24,527 ಜನರು ಮರಣ ಹೊಂದಿದ್ದಾರೆಂದು ಸರ್ಕಾರದ ದಾಖಲೆಗಳು ಹೇಳುತ್ತಿವೆ. ಅಂದರೆ 7,857 ಕ್ಕೂ ಹೆಚ್ಚು ಮರಣ ಸಂಭವಿಸಿದೆ ಎಂದಾಯಿತು.
ಗಮನಿಸಬೇಕಾದ ಅಂಶವೆಂದರೆ ನಗರದಿಂದ ಲಕ್ಷಾಂತರ ಜನ ಗ್ರಾಮೀಣ ಪ್ರದೇಶಗಳಿಗೆ ವಲಸೆ ಹೋಗಿದ್ದಾರೆ. ಜುಲೈ ತಿಂಗಳಿನಲ್ಲಿ ಲಾಕ್‍ಡೌನ್ ಕೂಡ ಹೇರಿಕೆ ಮಾಡಲಾಗಿತ್ತು. ಈ ಅವಧಿಯಲ್ಲಿ ಅಪಘಾತ ಸಂಬಂಧಿ ಸಾವುಗಳ ಸಂಖ್ಯೆ ತೀರ ಕಡಿಮೆಯಿತ್ತು. ಆದರೂ ಇಷ್ಟೊಂದು ಸಾವುಗಳು ಏಕೆ ಸಂಭವಿಸಿದವು? ಹೆಚ್ಚುವರಿಯಾದ ಈ ಸಾವುಗಳು ಕೊರೊನಾ ಸಂಬಂಧಿತ ಸಾವುಗಳು ಎನ್ನುವುದರಲ್ಲಿ ಅನುಮಾನವೇ ಇಲ್ಲ. ಅಂದರೆ ಸರ್ಕಾರ 3 ಜನ ಸತ್ತರೆ ಒಬ್ಬರು ಸತ್ತಿದ್ದಾರೆ ಎಂದು ಹೇಳುತ್ತಿದೆ ಎಂದಾಯಿತು.
ರಾಷ್ಟ್ರಮಟ್ಟದಲ್ಲಿ ಶಹಭಾಷ್‍ಗಿರಿ ಪಡೆಯಲು ಸರ್ಕಾರ ಇಂತಹ ಅಮಾನವೀಯ ಕೃತ್ಯಕ್ಕೆ ಇಳಿದಿರುವುದು ಕ್ಷಮಿಸಲಾಗದ ಕ್ರಿಮಿನಲ್ ಸಂಗತಿಯಾಗುತ್ತದೆ. ಈ ವಿಚಾರಗಳು ನಿಮ್ಮ ಗಮನಕ್ಕೆ ಮತ್ತು ಮಕ್ಕಳ ಆಯೋಗದ ಗಮನಕ್ಕೆ ಬಂದಿವೆಯೋ ಇಲ್ಲವೋ ನನಗೆ ಗೊತ್ತಿಲ್ಲ.
ಮಾಸ್ಕ್ ಹಾಕಿಕೊಳ್ಳುವಲ್ಲಿ, ಸ್ಯಾನಿಟೈಸರ್ ಬಳಸುವಲ್ಲಿ, ದೈಹಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಪ್ರಜ್ಞಾವಂತರೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಇವೆಲ್ಲವನ್ನೂ ಮಕ್ಕಳಿಂದ ನಿರೀಕ್ಷಿಸುವುದು ಅಸಾಧ್ಯದ ವಿಚಾರ.
ಇಷ್ಟು ದಿನ ಮನೆಯಲ್ಲಿದ್ದ ಮಕ್ಕಳು ಶಾಲೆಗೆ ಬಂದ ಕೂಡಲೇ ಎಲ್ಲಾ ನಿಯಮಗಳನ್ನು ಗಾಳಿಗೆ ತೂರುತ್ತವೆ. ಅಲ್ಲದೆ ದುಡಿಯುವ ಕುಟುಂಬಗಳಲ್ಲಿ ಮಕ್ಕಳ ಲಾಲನೆ ಪಾಲನೆ ಮಾಡುವುದು ಬಹುಪಾಲು ಸಂದರ್ಭಗಳಲ್ಲಿ ಅಜ್ಜ-ಅಜ್ಜಿಯರಾಗಿರುತ್ತಾರೆ ಅಥವಾ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಮನೆಗಳಲ್ಲಿ ಉಳಿದುಕೊಂಡವರಾಗಿರುತ್ತಾರೆ.

schools reopen
ಮಕ್ಕಳು ಶಾಲೆಗೆ ಹೋಗಿ ಕೊರೊನಾ ಅಂಟಿಸಿಕೊಂಡು ಬಂದರೆ ಮಕ್ಕಳು ಸಮಸ್ಯೆಗೆ ತುತ್ತಾಗುವುದರ ಜೊತೆಗೆ, ಈ ರೋಗದಿಂದ ಹೆಚ್ಚು ಬಾಧಿತರಾಗುತ್ತಿರುವ ಹಿರಿಯ ಜೀವಗಳು ಮತ್ತು ಇತರೆ ಆರೋಗ್ಯ ಸಂಬಂಧಿತ ಸಮಸ್ಯೆಗಳಿರುವವರಿಗೆ ತೀವ್ರ ರೀತಿಯಲ್ಲಿ ಸೋಂಕು ವ್ಯಾಪಿಸಿ ಸುನಾಮಿ ಸ್ವರೂಪದ ಸಾವು ನೋವುಗಳನ್ನು ಸಮಾಜ ಎದುರಿಸಬೇಕಾಗುತ್ತದೆ. ಈಗಾಗಲೇ ಅಮೆರಿಕಾ ಮತ್ತು ಯುರೋಪಿನ ಕೆಲವು ದೇಶಗಳು ಶಾಲೆಗಳನ್ನು ತೆರೆದು ಸಮಸ್ಯೆಗಳನ್ನು ಮೈಮೇಲೆ ಹಾಕಿಕೊಂಡಿರುವ ಉದಾಹರಣೆಗಳು ಕಣ್ಣ ಮುಂದೆ ಇವೆ.
ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಪಿಡುಗುಗಳು ಹೆಚ್ಚುತ್ತಿವೆ ಎಂಬ ನಿಮ್ಮ ಮಾತಿನಲ್ಲಿ ಅನುಮಾನಗಳಿಲ್ಲ. ಆದರೆ ಜಿಲ್ಲಾಡಳಿತಗಳು ನಿದ್ದೆಯಿಂದ ಎಚ್ಚೆತ್ತು ಕ್ರಿಯಾಶೀಲವಾದರೆ, ದುಡಿಯುವ ಕುಟುಂಬಗಳಿಗೆ ದುಡಿಯುವ ಅವಕಾಶಗಳನ್ನು ಸರ್ಕಾರವು ಹೆಚ್ಚಿಸಿ ಅವರ ಕೈತುಂಬಾ ಹಣ ಇರುವಂತೆ ನೋಡಿಕೊಂಡರೆ ಈ ಸಮಸ್ಯೆಗಳನ್ನು ನಿಯಂತ್ರಿಸಬಹುದಾಗಿದೆ. ಒಂದು ಸಮಸ್ಯೆಯನ್ನು ಎದುರಿಸಲು ಮಕ್ಕಳನ್ನು ಯಮನ ಬಾಯಿಗೆ ತಳ್ಳುವುದನ್ನು ಯಾವ ಸೂಕ್ಷ್ಮಮತಿಯಾದ ಮನುಷ್ಯನಿಂದಲೂ ಊಹಿಸಿಕೊಳ್ಳಲಾಗದು. ಸರ್ಕಾರದ ನಿರ್ಲಕ್ಷ್ಯದಿಂದ ಮತ್ತು ತಪ್ಪು ನಿರ್ಧಾರಗಳ ಕಾರಣದಿಂದಾಗಿ ಮೃತಪಟ್ಟ ಮಗುವಿನ ಸಾವು ಅದು ಕೇವಲ ಸಾವು ಆಗಿರುವುದಿಲ್ಲ, ಸಮಾಜ ನಡೆಸಿದ ಕಗ್ಗೊಲೆಯಾಗುತ್ತದೆ. ಮೃತಪಟ್ಟ ಮಗುವಿನ ಕುಟುಂಬದ ನೋವನ್ನು ಊಹಿಸಿಕೊಳ್ಳಲು ನನ್ನಿಂದ ಸಾಧ್ಯವಾಗುವುದಿಲ್ಲ. ಯಾವ ಕಾರಣಕ್ಕೂ ಹೀಗೆ ಆಗದಂತೆ ನೋಡಿಕೊಳ್ಳಬೇಕಾದ ಹೊಣೆಗಾರಿಕೆ ನಿಮ್ಮ ಮೇಲಿದೆ.
ವಂದನೆಗಳೊಂದಿಗೆ,
ತಮ್ಮ ವಿಶ್ವಾಸಿ,
ಸಿದ್ದರಾಮಯ್ಯ

ಇವರಿಗೆ
ಶ್ರೀ ಸುರೇಶ್ ಕುಮಾರ್
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Coronaletterschool reopensiddaramaihsuresh kumar
ShareTweetSendShare
Join us on:

Related Posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ...

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

by Shwetha
May 26, 2026
0

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿರುವ ಈ ಮಹತ್ವದ ಬೆಳವಣಿಗೆಯು ಆಂತರಿಕ ಶಿಸ್ತು ಉಲ್ಲಂಘಿಸುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಅತ್ಯಂತ ನಿರ್ಣಾಯಕ...

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

by Shwetha
May 26, 2026
0

ರಾಜ್ಯದ ತುರ್ತು ಆರೋಗ್ಯ ಸೇವೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇನ್ಮುಂದೆ 108 ಆಂಬುಲೆನ್ಸ್ ಸೇವೆ ನೇರವಾಗಿ ಕರ್ನಾಟಕ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದೆ. ಒಂದು ಕರೆ ನಮಗೆ, ತುರ್ತು ಸೇವೆ...

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

by Shwetha
May 26, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ದರೋಡೆ ನಡೆಯುತ್ತಿದೆ. ಅದು ಕತ್ತಿ ಹಿಡಿದು ಮಾಡುವ ದರೋಡೆಯಲ್ಲ, ಬದಲಿಗೆ ರಸ್ತೆಯಲ್ಲಿ ಮೊಳೆಗಳನ್ನು ಚೆಲ್ಲಿ ವಾಹನ ಸವಾರರ ಜೀವದ ಜೊತೆ ಚೆಲ್ಲಾಟವಾಡುವ...

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ದಳಪತಿ ವಿಜಯ್ ಈಗ ಪಕ್ಕದ ರಾಜ್ಯ ಕರ್ನಾಟಕದ ಮೇಲೂ ಕಣ್ಣಿಟ್ಟಿದ್ದಾರಾ? ಹೌದು, ಇಂಥದೊಂದು ಬಿಸಿ ಬಿಸಿ ಚರ್ಚೆ ಈಗ ರಾಜಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram