ಬೆಳಗಾವಿ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ(no leadership change) ಸಾಧ್ಯವಿಲ್ಲ. ಇತ್ತೀಚೆಗೆ ಸಿಎಂ ಯಡಿಯೂರಪ್ಪ ಅವರೇ ಸಿದ್ದರಾಮಯ್ಯ ಅವರಿಗೆ ಉತ್ತರ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದರು.
ಬೆಳಗಾವಿ ಡಿಸಿಸಿ ಬ್ಯಾಂಕ್‍ನ ಮೂರು ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸುವುದು ಶತಸಿದ್ದ. ಮಾಜಿ ಶಾಸಕ ಅರವಿಂದ ಪಾಟೀಲ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ವಿಷಯ ಹೈಕಮಾಂಡ್‍ಗೆ ಬಿಟ್ಟಿದ್ದು ಎಂದು ಸಚಿವರು ಹೇಳಿದರು.
ನಿನ್ನೆಯಷ್ಟೇ ಮಂಗಳೂರಿನಲ್ಲಿ ಮಾತನಾಡಿದ್ದ ಸಿಎಂ ಯಡಿಯೂರಪ್ಪ, ಉಪಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ನಾಯಕತ್ವ ಬದಲಾವಣೆ ಆಗಲಿದೆ ಎನ್ನುತ್ತಿರುವ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದರು. ಸಿದ್ದರಾಮಯ್ಯ ಅವರು ತಮ್ಮ ಪ್ರತಿಪಕ್ಷದ ಸ್ಥಾನ ಭದ್ರಮಾಡಿಕೊಳ್ಳಲಿ. ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ಅವರ ಸ್ಥಾನವೂ ಅಲ್ಲಾಡುತ್ತದೆ ಎಂದು ತಿರುಗೇಟು ನೀಡಿದ್ದರು.
ಉಪಚುನಾವಣೆ ನಂತರ ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ನನಗೆ ದೆಹಲಿಯಿಂದ ಸಿಕ್ಕಿರುವ ಮಾಹಿತಿ ಪ್ರಕಾರ ಉಪಚುನಾವಣೆ ನಂತರ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡುತ್ತಾರೆ. ಐ ಆಮ್ ವೆರಿ ಕಾನ್ಫಿಡೆಂಟ್ ಯಡಿಯೂರಪ್ಪ ಬದಲಾಗ್ತಾರೆ, ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು ಒಂದು ಕಾರಣ. ಇದರ ಜೊತೆಗೆ ಹಲವು ಕಾರಣಗಳೂ ಇವೆ ಎಂದು ಸಿದ್ದರಾಮಯ್ಯ ಟ್ವಿಟರ್‍ನಲ್ಲಿ ಬರೆದುಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel