ಮಹಾದೇವ ಭೈರಗೊಂಡ ಮೇಲೆ ಗುಂಡಿನ ದಾಳಿ : ಐವರ ಬಂಧನ
ವಿಜಯಪುರ : ಭೀಮಾ ತೀರದ ಮಹಾದೇವ ಭೈರಗೊಂಡ ಸಾಹುಕಾರ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಯಾಸೀನ ದಂದರಗಿ (25), ಕರೆಪ್ಪ ಸೊನ್ನದ (25), ಸಿದ್ದು ಬೊಮ್ಮನಜೋಗಿ (34), ಸಂಜು ಮಾನಕರ (28), ರವಿ ಬಂಡಿ (20) ಬಂಧಿತ ಆರೋಪಿಗಳಾಗಿದ್ದಾರೆ. ಈವರೆಗೂ ಈ ಪ್ರಕರಣ ಸಂಬಂಧ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
ದೀಪಾವಳಿ ಹಬ್ಬದ ಪಟಾಕಿ ಖುಷಿ ಠುಸ್: ಇಂದು ಬ್ಯಾನ್ ಗೈಡ್‍ಲೈನ್ಸ್ ಪ್ರಕಟ ಸಾಧ್ಯತೆ..!
ಸದ್ಯ ಬಂಧಿತರಿಂದ ಪೊಲೀಸರು 2 ಪಿಸ್ತೂಲ್, 5 ಜೀವಂತ ಗುಂಡು, 4 ಮೊಬೈಲ್ ಫೋನ್, 1 ಅಟೋ ರಿಕ್ಷಾ, 1 ಮಚ್ಚು ವಶಕ್ಕೆ ಪಡೆದಿದ್ದಾರೆ.
ಈಗಾಗಲೇ ಬಂಧಿತರಾಗಿರುವ ಆರೋಪಿಗಳ ಮಾಹಿತಿ ಅನ್ವಯ ಈ ಐವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ ಅಗರವಾಲ್ ತಿಳಿಸಿದ್ದಾರೆ.
ನವೆಂಬರ್ 2 ರಂದು ಮಹಾದೇವ ಭೈರಗೊಂಡ ಸಾಹುಕಾರ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ಈ ವೇಳೆ ಮಹಾದೇವ ಸಹಚರ ಮೃತಪಟ್ಟಿದ್ದರು.
ತೀವ್ರವಾಗಿ ಗಾಯಗೊಂಡಿದ್ದ ಭೈರಗೊಂಡ ಅವರನ್ನು ಕೂಡಲೇ ಆಸ್ಪತ್ರೆ ದಾಖಲಿಸಲಾಗಿತ್ತು. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿದೆ. ಇತ್ತ ಪೊಲೀಸರು ಕೂಡ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.+
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









