ADVERTISEMENT
Saturday, August 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಚಿಕ್ಕಮಗಳೂರಿನಲ್ಲಿ 30 ತಿಂಗಳಲ್ಲಿ ಮೆಡಿಕಲ್ ಕಾಲೇಜು ಆಸ್ಪತ್ರೆ : ಡಾ.ಕೆ.ಸುಧಾಕರ್

Mahesh M Dhandu by Mahesh M Dhandu
November 7, 2020
in Newsbeat, Samagra karnataka, ರಾಜ್ಯ
Dr. K. Sudhakar
Share on FacebookShare on TwitterShare on WhatsappShare on Telegram

ಚಿಕ್ಕಮಗಳೂರಿನಲ್ಲಿ 30 ತಿಂಗಳಲ್ಲಿ ಮೆಡಿಕಲ್ ಕಾಲೇಜು ಆಸ್ಪತ್ರೆ : ಸಚಿವ ಡಾ.ಕೆ.ಸುಧಾಕರ್

 ಚಿಕ್ಕಮಗಳೂರು :  ಕಾಫಿನಾಡು ಚಿಕ್ಕಮಗಳೂರಿನಲ್ಲಿ 24 ರಿಂದ 30 ತಿಂಗಳಲ್ಲಿ ಸುಸಜ್ಜಿತ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Related posts

r-ashoka-protest-demanding-minister-b-nagendra-resignation-valmiki-corporation-scam

ಸಚಿವ ಬಿ.ನಾಗೇಂದ್ರ ರಾಜೀನಾಮೆಗಾಗಿ ಹೋರಾಟ ಮುಂದುವರಿಕೆ, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 21, 2026
nityananda-hegde-appointed-president-tuluva-mahasabha-international-singapore-unit

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಸಿಂಗಾಪುರ ಘಟಕದ ಅಧ್ಯಕ್ಷರಾಗಿ ಶ್ರೀ ನಿತ್ಯಾನಂದ ಹೆಗ್ಡೆ ನೇಮಕ

August 21, 2026

ಚಿಕ್ಕಮಗಳೂರಿನಲ್ಲಿ ಕಾಲೇಜಿನ ಕಟ್ಟಡ ನಿರ್ಮಾಣ ಯೋಜನೆ ಹಾಗೂ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

“ಕಟ್ಟಡದ ನಿರ್ಮಾಣದ ಭೂಮಿ ಪೂಜೆಗೆ ಡಿಸೆಂಬರ್ ನಲ್ಲಿ ದಿನ ಗೊತ್ತುಪಡಿಸಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಕಾರ್ಯಕ್ರಮಕ್ಕೆ ಬರಲಿದ್ದಾರೆ. ಕಟ್ಟಡ ವಿನ್ಯಾಸ ಉತ್ತಮವಾಗಿದ್ದು, ಕೆಲ ಬದಲಾವಣೆ ಸೂಚಿಸಲಾಗಿದೆ.

400 ಕ್ಕೂ ಹೆಚ್ಚು ಹಾಸಿಗೆ ಇರುವ ಈ ವೈದ್ಯಕೀಯ ಕಾಲೇಜಿನ ಜೊತೆಗೆ 200 ಹಾಸಿಗೆಯ ತಾಯಿ-ಶಿಶುವಿನ ಆಸ್ಪತ್ರೆ ನಿರ್ಮಾಣವಾಗಲಿದೆ” ಎಂದು ತಿಳಿಸಿದರು.

 Medical College

“ಮುಂದಿನ ಜೂನ್ ವೇಳೆಗೆ ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ವ್ಯಾಸಂಗ ಮಾಡಬಹುದು. ಅದಕ್ಕಾಗಿ ತಾತ್ಕಾಲಿಕ ಕಟ್ಟಡ ಗುರುತಿಸಿದ್ದು, ಹೊಸ ಕಟ್ಟಡ ನಿರ್ಮಾಣ ಬಳಿಕ ಸ್ಥಳಾಂತರಿಸಲಾಗುತ್ತದೆ.

ಜೊತೆಗೆ ಎನ್ಎಂಸಿ ನಿಯಮದಂತೆ, 3 ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಒಂದು ನಗರ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು. 69 ಬೋಧಕ ಸಿಬ್ಬಂದಿ ನೇಮಕಕ್ಕೆ ಈಗಾಗಲೇ ಪರವಾನಗಿ ನೀಡಿದ್ದು, 91 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪೈಕಿ ನಾಲ್ಕರಲ್ಲಿ ವೈದ್ಯ ಹುದ್ದೆ ಭರ್ತಿ ಮಾಡಲಾಗುವುದು” ಎಂದು ವಿವರಿಸಿದರು.

“ಚಿಕ್ಕಮಗಳೂರಿನಲ್ಲಿ ದಿನಕ್ಕೆ 1,900 ಕೋವಿಡ್ ಪರೀಕ್ಷೆ ನಿಗದಿಪಡಿಸಿದ್ದು, ಇದಕ್ಕೂ ಹೆಚ್ಚಿನ ಪರೀಕ್ಷೆ ನಡೆಯುತ್ತಿದೆ. ಇದರಿಂದಾಗಿ ಸೋಂಕು ನಿಯಂತ್ರಣಕ್ಕೆ ಬಂದಿದೆ.

sಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣ ಶೇ.1.08 ರಷ್ಟಿದೆ. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ, ಹೆಚ್ಚು ಜನರಿಗೆ ಚಿಕಿತ್ಸೆ ನೀಡಬೇಕೆಂದು ಸೂಚಿಸಲಾಗಿದೆ” ಎಂದರು.

Medical College

“ಪ್ರತಿ ತಿಂಗಳು ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆರೋಗ್ಯ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಸ್ಥಳೀಯ ಆರೋಗ್ಯಾಧಿಕಾರಿಗಳ ಮೇಲೆ ನಿಗಾ ಇರಿಸಿ, ಸೌಲಭ್ಯಗಳು ಜನರಿಗೆ ತಲುಪಲು ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ. ಜನೌಷಧಿ ಮಳಿಗೆಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆರಂಭಿಸಲು ತೀರ್ಮಾನಿಸಿದ್ದು, ಈ ಬಗ್ಗೆಯೂ ಚರ್ಚೆಯಾಗಿದೆ” ಎಂದು ವಿವರಿಸಿದರು.

2,500 ವೈದ್ಯರ ನೇಮಕ
*ರಾಜ್ಯದಲ್ಲಿ 2,500 ವೈದ್ಯರ ನೇರ ನೇಮಕ ಪ್ರಕ್ರಿಯೆ ಆರಂಭವಾಗಿದೆ. ನವೆಂಬರ್ ಅಂತ್ಯದ ವೇಳೆಗೆ ಪ್ರಕ್ರಿಯೆ ಮುಗಿಯಲಿದೆ. ವೈದ್ಯರ ಕೊರತೆ ಆಗಬಾರದು ಎಂಬ ದೃಢ ಸಂಕಲ್ಪ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

ಸಚಿವರು ಹೇಳಿದ ಇತರೆ ಅಂಶಗಳು

*ನವೆಂಬರ್ ಅಂತ್ಯದೊಳಗೆ ಹೋಮ್ ಸ್ಟೇಗಳ ಮಾಹಿತಿ ಪಡೆದು ಅಲ್ಲಿ ಇರುವವರ ಮೇಲೆ ನಿಗಾ ಇರಿಸಲಾಗುತ್ತದೆ. ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಗುವುದು.

*ಚಿಕ್ಕಮಗಳೂರು ತಾಲೂಕು ಆಸ್ಪತ್ರೆಗಳಲ್ಲಿ 50 ಹಾಸಿಗೆಗಳಿಗೆ ಆಕ್ಸಿಜನ್ ಅಳವಡಿಸಲಾಗಿದೆ.

*ಖಾಸಗಿ ಆಸ್ಪತ್ರೆಗಳು ಹೆಚ್ಚು ಶುಲ್ಕ ವಸೂಲಿ ಮಾಡಿದರೆ, ಪರವಾನಗಿ ರದ್ದು ಮಾಡುವ ಕಠಿಣ ಕ್ರಮ ಕೈಗೊಳ್ಳಲಾಗುವುದು.

*ಸರ್ಕಾರಕ್ಕೆ ಕಠಿಣ ಸವಾಲುಗಳಿವೆ. ಕೋವಿಡ್ ನಿಂದಾದ ಆರ್ಥಿಕ ಸಂಕಷ್ಟ, ಅತಿವೃಷ್ಟಿ ಮೊದಲಾದ ಸವಾಲುಗಳು ಬಂದಿವೆ. ಸರ್ಕಾರ ಎಂದರೆ ಅಕ್ಷಯಪಾತ್ರೆ ಅಲ್ಲ. ಇಂತಹ ಸಂದರ್ಭದಲ್ಲಿ ಅನಿವಾರ್ಯವಾಗಿ ವಿದ್ಯುತ್ ದರ ಏರಿಕೆ ಮಾಡಲಾಗಿದೆ.

*ಪರಿಸರ ಸ್ನೇಹಿ ಪಟಾಕಿ ಸಿಡಿಸಲು ಅವಕಾಶವಿದೆ. ಸರ್ಕಾರಕ್ಕೆ ಜನರ ಆರೋಗ್ಯ ಮುಖ್ಯವೇ ಹೊರತು ಯಾರದ್ದೇ ಲಾಭವಲ್ಲ.

*ಕೆಲ ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆಯನ್ನು ಪಿಪಿಪಿ ಮಾದರಿಯಲ್ಲಿ ಮಾಡಲಾಗಿದೆ. ಆದರೆ ನಿರ್ವಹಣೆ ಮಾಡುತ್ತಿದ್ದ ಕಂಪನಿ ಆರ್ಥಿಕ ಸಂಕಷ್ಟಕ್ಕೊಳಗಾಗಿದೆ. ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು.

Tags: bangaloreDr. K SudhakarMedical College
ShareTweetSendShare
Join us on:

Related Posts

r-ashoka-protest-demanding-minister-b-nagendra-resignation-valmiki-corporation-scam

ಸಚಿವ ಬಿ.ನಾಗೇಂದ್ರ ರಾಜೀನಾಮೆಗಾಗಿ ಹೋರಾಟ ಮುಂದುವರಿಕೆ, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 21, 2026
0

  ಬೆಂಗಳೂರು,  ಸಚಿವ ಬಿ.ನಾಗೇಂದ್ರ ರಾಜೀನಾಮೆಗಾಗಿ ಹೋರಾಟ ಮುಂದುವರಿಸಲಿದ್ದು, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸದನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ...

nityananda-hegde-appointed-president-tuluva-mahasabha-international-singapore-unit

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಸಿಂಗಾಪುರ ಘಟಕದ ಅಧ್ಯಕ್ಷರಾಗಿ ಶ್ರೀ ನಿತ್ಯಾನಂದ ಹೆಗ್ಡೆ ನೇಮಕ

by admin
August 21, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ತನ್ನ ಅಂತರರಾಷ್ಟ್ರೀಯ ಸಂಘಟನಾ ವಿಸ್ತರಣೆಯ ಅಂಗವಾಗಿ ಸಿಂಗಾಪುರ ಘಟಕದ ಅಧ್ಯಕ್ಷರಾಗಿ...

cm-dk-shivakumar-addresses-icai-chartered-accountants-conference-bengaluru

ಸರ್ಕಾರದ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನ ನೀಡಿ: ಸಿಎಂ ಡಿ ಕೆ ಶಿವಕುಮಾರ್

by admin
August 21, 2026
0

ಬೆಂಗಳೂರು,  “ಹಣಕಾಸಿನ ವಿಚಾರದಲ್ಲಿ ಸರ್ಕಾರಕ್ಕೆ ಸಲಹೆ ಹಾಗೂ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನವಿರಲಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ...

karnataka-apartment-ownership-and-management-bill-2026-krishna-byre-gowda-vidhana-soudha

ಲಕ್ಷಾಂತರ ಆಸ್ತಿ ಮಾಲೀಕರಿಗೆ ‘ಭೂ ಗ್ಯಾರಂಟಿ’: ‘ಬಿ-ಖಾತಾ’ ನಿವೇಶನಗಳಿಗೆ ಪಕ್ಕಾ ‘ಎ-ಖಾತಾ’: ಕೃಷ್ಣ ಬೈರೇಗೌಡ

by admin
August 21, 2026
0

• ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ-2026ಕ್ಕೆ ಸದನ ಅನುಮೋದನೆ • ಅನಧಿಕೃತ ಬಡಾವಣೆಗಳ ರಸ್ತೆಗಳನ್ನು 'ಸಾರ್ವಜನಿಕ ರಸ್ತೆ' ಎಂದು ಘೋಷಿಸಲು ಸೆಕ್ಷನ್ 284ಕ್ಕೆ ತಿದ್ದುಪಡಿ •...

karnataka-apartment-ownership-and-management-bill-2026-krishna-byre-gowda-vidhana-soudha

ಅಪಾರ್ಟ್ಮೆಂಟ್ ನಿವಾಸಿಗಳ ಹಿತರಕ್ಷಣೆಗಾಗಿ ಕಟ್ಟುನಿಟ್ಟಿನ ಹೊಸ ವಿಧೇಯಕ: ಕೃಷ್ಣ ಬೈರೇಗೌಡ

by admin
August 21, 2026
0

• ಒಂದು ಅಪಾರ್ಟ್ಮೆಂಟ್ ಗೆ ಒಂದೇ ಅಸೋಸಿಯೇಷನ್ • ಸಾಮಾನ್ಯ ಪ್ರದೇಶಗಳ ಮೇಲಿನ ಹಕ್ಕು • ವ್ಯಾಜ್ಯ ಇತ್ಯರ್ಥಕ್ಕೆ ಸಕ್ಷಮ ಪ್ರಾಧಿಕಾರಗಳ ಸ್ಥಾಪನೆ • ಕಟ್ಟಡ ಮರುನಿರ್ಮಾಣಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram