ಸವದಿಯ `ಮೂರು ಬಾಗಿಲು’ ಹೇಳಿಕೆಗೆ ಸತೀಶ್ ಜಾರಕಿಹೊಳಿ ಕಿಡಿ
ಬೆಳಗಾವಿ : ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಮನೆಯೊಂದು ಮೂರು ಬಾಗಿಲು ಆಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಅವನತಿಯ ಅಂಚಿನಲ್ಲಿದೆ ಎಂಬ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಎಲ್ಲಾ ಪಕ್ಷಗಳಲ್ಲೂ ಗುಂಪುಗಾರಿಕೆ ಇದ್ದೇ ಇರುತ್ತದೆ.
ಅದೇನು ಹೊಸದಲ್ಲ. ಬಿಜೆಪಿಯಲ್ಲೂ ಮೂರು ಗುಂಪುಗಳಿವೆ. ದೆಹಲಿಯಲ್ಲಿ ಒಂದು ಗುಂಪಿದ್ದರೇ ಕರ್ನಾಟಕದಲ್ಲಿ ಎರಡು ಗುಂಪುಗಳಿವೆ.
ಹನೂರು ಪಟ್ಟಣ ಪಂಚಾಯಿತಿ : ಅಧಿಕಾರಕ್ಕಾಗಿ ಕಾಂಗ್ರೆಸ್-ಬಿಜೆಪಿ ಮೈತ್ರಿ
ಪ್ರತಿ ಪಕ್ಷದಲ್ಲಿ ಪ್ರತಿಯೊಬ್ಬರೂ ತಮ್ಮ ನಾಯಕತ್ವದಲ್ಲಿಯೇ ಇರುತ್ತಾರೆ. ಆದರೆ ಪಕ್ಷ ಅಂತ ಬಂದಾಗ ಎಲ್ಲರೂ ಒಗ್ಗಟ್ಟಾಗಿಯೇ ಕೆಲಸ ಮಾಡುತ್ತಾರೆ.
ಈ ವಿಷಯವಾಗಿ ಮೊದಲೂ ಹೇಳಿದ್ದೇನೆ, ಈಗಲೂ ಹೇಳುತ್ತಿದ್ದೇನೆ ಎಂದು ಡಿಸಿಎಂ ಸವದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಇದೇ ವೇಳೆ ಶಿರಾ, ಆರ್.ಆರ್. ನಗರ ಉಪಚುನಾವಣೆಯ ಬಗ್ಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ರಾಜರಾಜೇಶ್ವರಿನಗರ ಹಾಗೂ ಶಿರಾ ಎರಡು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ.
ಕನ್ನಡದ ಕೆಲಸಕ್ಕಾಗಿ, ಏಳಿಗೆಗಾಗಿ ನಮ್ಮ ಸರ್ಕಾರ ಬದ್ಧ : ಬಿಎಸ್ ವೈ
ಶಿರಾ ಕ್ಷೇತ್ರದಲ್ಲಂತೂ ಗೆಲುವು ಖಚಿತ ಎಂದು ರಾರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಕಷ್ಟ ಎಂದು ಪರೋಕ್ಷವಾಗಿ ಒಪ್ಪಿಕೊಂಡರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel