ಬಿಜೆಪಿಗೆ ಬಿಗ್ ಶಾಕ್ : ಬಸನಗೌಡ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು : ಮಸ್ಕಿ ಉಪ ಚುನಾವಣೆ ಘೋಷಣೆಯಾಗುವುದಕ್ಕೂ ಮುನ್ನವೇ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಆರಂಭವಾಗಿದ್ದು, ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ 213 ಮತಗಳಿಂದ ಸೋತಿದ್ದ ಬಸವನಗೌಡ ಆರ್. ತುರವಿಹಾಳ ಅವರು ಕಾಂಗ್ರೆಸ್ ಸೇರಿದ್ದಾರೆ.
ಇತ್ತ ಬಿಜೆಪಿಯ ಅಘೋಷಿತ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದಾರೆ.
ಯಾರು ಏನೇ ಟೀಕೆ ಮಾಡಿದ್ರೂ ಜನ ನಮ್ಮ ಪರ : ಬಿಎಸ್ ವೈ
ಬಿಜೆಪಿ ಟಿಕೆಟ್ ಬಹುತೇಕ ಪ್ರತಾಪ್ ಗೌಡ ಅವರಿಗೆ ಖಾಯಂ ಆಗಿರುವುದರಿಂದ ಬಸನಗೌಡ ತುರವಿಹಾಳ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ.
ರಾಯಚೂರು ಜಿಲ್ಲೆಯ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ್ ಸೇರಿ ಹಲವು ಮುಖಂಡರ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಸೇರಿದ್ದಾರೆ.
ಕಳೆದ ಚುನಾವಣೆಯಲ್ಲಿ ಗೆದಿದ್ದ ಪ್ರತಾಪಗೌಡ ಪಾಟೀಲ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಮಸ್ಕಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬಸನಗೌಡ ತುರವಿಹಾಳ ಕಣಕ್ಕಿಳಿಯುವುದು ಬಹುತೇಕ ಖಚಿತವೆನ್ನಲಾಗಿದೆ.
ಸಿ.ಟಿ ರವಿ ರಾಜೀನಾಮೆ ಅಂಗೀಕಾರ; ವರಿಷ್ಠರ ಭೇಟಿಗೆ ದಿಲ್ಲಿಗೆ ದೌಡು..!
ಇನ್ನು ಬಸನಗೌಡ ತುರವಿಹಾಳ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಸ್ಕಿಯ ಕಾಂಗ್ರೆಸ್ ಮುಖಂಡರ ಜೊತೆ ಸಮಾಲೋಚನೆ ನಡೆಸಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel