ಬೆಂಗಳೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಅಟ್ಟಹಾಸದ ನಡುವೆಯೂ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ತುದಿಗಾಲ ಮೇಲೆ ನಿಂತಿದೆ ಎಂಬ ಊಹಾಪೋಹಗಳ ನಡುವೆಯೇ ಇಂದು ದಿನಾಂಕ ನಿಗಧಿಗೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಅಧಿಕಾರಿಗಳ ಸಭೆ ನಡೆಯಲಿದೆ. ಕಳೆದ ಮೂರು ದಿನಗಳ ಹಿಂದೆ ನಡೆದ ಸರಣಿ ಸಭೆಯ ಅಭಿಪ್ರಾಯ, ಸಲಹೆಗಳನ್ನು ಸಂಗ್ರಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದ್ದರು.
ಅನ್ಬುಕುಮಾರ್ ವರದಿಯ ಬಗ್ಗೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಸುದಿರ್ಘ ಚರ್ಚೆ ನಡೆಯಲಿದೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆಗೆ ಪರೋಕ್ಷ ಸಮ್ಮತಿ ಇದೆ. ಆದರೆ, ಯಾವ ತರಗತಿಗಳನ್ನು ಮೊದಲು ಆರಂಭಿಸಬೇಕು ಎನ್ನುವುದರ ಬಗ್ಗೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ.
ಕಳೆದ ಒಂದು ವಾರದಿಂದ 9ನೇ ತರಗತಿಯಿಂದ 10ನೇ ತರಗತಿ, ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ ಇಂದಿನ ಸಭೆಯಲ್ಲಿ 9ನೇ ತರಗತಿ ನಂತರದ ಕ್ಲಾಸ್‍ಗಳನ್ನು ಆರಂಭಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಿಗೆ ಕೊಡುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.
ಶಾಲೆ-ಕಾಲೇಜು ಆರಂಭಕ್ಕೆ ಮೊದಲು ಹಾಸ್ಟೆಲ್..!
ಕೊರೊನಾ ನಡುವೆ ಶಾಲೆ-ಕಾಲೇಜುಗಳನ್ನು ಆರಂಭಿಸುವ ಮೊದಲು ಹಾಸ್ಟೆಲ್‍ಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಒಪ್ಪಿಗೆ ಸೂಚಿಸಿವೆ.
ಹಾಸ್ಟೆಲ್‍ಗಳನ್ನು ಆರಂಭಿಸುವ ಮೊದಲು ವಾರ್ಡನ್, ಅಡುಗೆ ಭಟ್ಟರು ಹಾಗೂ ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಬೇಕು. ಕೊರೊನಾ ಟೆಸ್ಟ್ ಮಾಡಿದ ಬಳಿಕವೇ ಶಾಲೆಗಳನ್ನು ಆರಂಭಿಸಲು ಸೂಚನೆ ನೀಡಲಾಗಿದೆ.
ಹೀಗಾಗಿ ಹಾಸ್ಟೆಲ್ ವಾರ್ಡನ್, ಅಡುಗೆಯವರು, ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸ್ಯಾನಿಟೈಸ್ ಮಾಡಿಕೊಳ್ಳಬೇಕು. ಹಾಸ್ಟೆಲ್‍ಗೆ ಬರುವ ಹಾಗೂ ಹೋಗುವ ವಿದ್ಯಾರ್ಥಿಗಳ ಥರ್ಮಲ್ ಟೆಸ್ಟ್ ಮಾಡುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಶಾಲೆಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ..
ಶಾಲೆಗಳನ್ನು ಹಂತ ಹಂತವಾಗಿ ಆರಂಭಿಸಲು ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್ ನೀಡಿದರೆ ಕಟ್ಟುನಿಟ್ಟಾಗಿ ಕೊರೊನಾ ಗೈಡ್‍ಲೈನ್ಸ್ ಪಾಲಿಸಲು ಸೂಚನೆ ನೀಡುವ ಸಾಧ್ಯತೆ ಇದೆ.
ಶಾಲೆಗಳಲ್ಲಿ ಥರ್ಮಲ್ ಟೆಸ್ಟ್ ಕಡ್ಡಾಯ ಮಾಡುವುದು, ಕಡ್ಡಾಯ ಮಾಸ್ಕ್ ಧರಿಸುವುದು ಹಾಗೂ ಒಂದು ಬೆಂಚ್‍ಗೆ ಇಬ್ಬರು ವಿದ್ಯಾರ್ಥಿಗಳು ಕುಳಿತುಕೊಳ್ಳುವಂತೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಕಡ್ಡಾಯ ಮಾಡುವ ಸಾಧ್ಯತೆ ಇದೆ. ಹೀಗಾಗಿ ಇಂದಿನ ಸಭೆ ಭಾರಿ ನಿರೀಕ್ಷೆ ಹುಟ್ಟಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel