ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಗೆಲುವು ಸಾಧಿಸಿರುವುದು ರಾಜ್ಯ ಸರ್ಕಾರದ ಅಭಿವೃದ್ಧಿ ಪರ ಕಾರ್ಯಕ್ರಮಗಳಿಗೆ ಜನ ಬೆಂಬಲ ಇರುವುದನ್ನು ಸೂಚಿಸುತ್ತದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಉಪಚುನಾವಣೆಯ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರ ಆತ್ಮವಿಶ್ವಾಸದಂತೆ ಗೆಲುವು ನಮ್ಮದೇ ಎಂದು ಹೇಳಿದ್ದೆವು. ಅದರಂತೆ ಎರಡೂ ಕ್ಷೇತ್ರಗಳಲ್ಲಿ ವಿಜಯಿಯಾಗಿದ್ದೇವೆ. ಈ ಫಲಿತಾಂಶವು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಹಾಗೂ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದ ಜನಪರ ಆಡಳಿತಕ್ಕೆ ಸಿಕ್ಕ ಮನ್ನಣೆಯಾಗಿದೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಅಭಿವೃದ್ಧಿ ವಿಷಯವನ್ನಿಟ್ಟುಕೊಂಡು ನಾವು ಚುನಾವಣೆ ಎದುರಿಸಿದ್ದೆವು. ಮತದಾರರು ಅದನ್ನು ಒಪ್ಪಿ ಪಕ್ಷದ ಮೇಲೆ ವಿಶ್ವಾಸವಿಟ್ಟು ಮುನಿರತ್ನ ಮತ್ತು ಡಾ.ರಾಜೇಶ್ ಗೌಡರನ್ನು ಗೆಲ್ಲಿಸಿದ್ದಾರೆ ಎಂದು ಸಚಿವ ಜಾರಕಿಹೊಳಿ ಸಂತಸ ವ್ಯಕ್ತಪಡಿಸಿದ್ದಾರೆ.
ಎಂಎಲ್‍ಸಿ ಚುನಾವಣಾ ಫಲಿತಾಂಶದಲ್ಲೂ ಮೇಲುಗೈ
ವಿಧಾನ ಪರಿಷತ್‍ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಜನತೆಯ ಬೆಂಬಲ ಸದಾ ಇದ್ದೇ ಇರುತ್ತದೆ ಎಂಬುದನ್ನು ಸಾಬೀತು ಪಡಿಸಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.
ಪ್ರಬುದ್ಧ ಮತದಾರರೆನಿಸಿದ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳಾಗಿದ್ದ ಶಶಿಲ್ ನಮೋಶಿ, ಎಸ್ ವಿ ಸಂಕನೂರು ಮತ್ತು ಪುಟ್ಟಣ್ಣ ಅವರು ಗೆಲುವು ಸಾಧಿಸಿರುವುದು ನಮ್ಮ ಸರ್ಕಾರ ಅಭಿವೃದ್ಧಿಪರ ಎಂಬುದನ್ನು ಸಾಬೀತು ಪಡಿಸಿದೆ ಎಂದು ಸಚಿವ ಜಾರಕಿಹೊಳಿ ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel