ದೀಪಾವಳಿ ಬಳಿಕ ಸಂಪುಟ ವಿಸ್ತರಣೆ : ಯಾರು ಇನ್..? ಯಾರು ಔಟ್..?
ಬೆಂಗಳೂರು : ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರದಲ್ಲಿ ಕಮಲದ ಬಾವುಟ ಹಾರಿಸಿದ ಸಂಭ್ರಮದಲ್ಲಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇದೀಗ ಕ್ಯಾಬಿನೆಟ್ ವಿಸ್ತರಣೆಯತ್ತ ಗಮನ ಹರಿಸಿದ್ದಾರೆ.
ಈ ಬಾರಿ ಸಂಪುಟ ಪುನಾರಚನೆ ಹಾಗೂ ವಿಸ್ತರಣೆ ಏಕಕಾಲದಲ್ಲಿ ನಡೆಯಲಿದ್ದು, ಮೇಜರ್ ಸರ್ಜರಿ ನಡೆಯಲಿದೆ. ಇದೇ 18ರಂದು ಪುನಾರಚನೆ ಹಾಗೂ ವಿಸ್ತರಣೆಯಾಗಲಿದ್ದು, ಈ ಬಾರಿ ಹೊಸಬರಿಗೆ ಸ್ಥಾನ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಜೊತೆಗೆ ಕೆಲವು ಹಾಲಿ ಸಚಿವರಿಗೆ ಕೊಕ್ ನೀಡುವುದು ಬಹುತೇಕ ಖಚಿತವಾಗಿದೆ.
ಈ ವಾರಾಂತ್ಯದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಜೊತೆ ಮಾತುಕತೆ ನಡೆಸಿದ್ದಾರೆ.
ಉಪಚುನಾವಣೆ | ಕೇಸರಿ ಪಡೆ ಘರ್ಜನೆ.. ಕಮಕ್ ಕಿಮಕ್ ಎನ್ನದ ಕಾಂಗ್ರೆಸ್
ಸಂಪುಟ ಪುನಾರಚನೆ ಹಾಗೂ ವಿಸ್ತರಣೆಗೆ ವರಿಷ್ಠರು ಗ್ರೀನ್ ಸಿಗ್ನಲ್ ಕೊಟ್ಟರೇ ದೀಪಾವಳಿ ನಂತ್ರ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಯಾರಿಗೆ ಕೋಕ್..?
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು: ಅಭಿವೃದ್ಧಿ ಕಾರ್ಯಗಳಿಗೆ ಸಿಕ್ಕ ಜನಮನ್ನಣೆ-ಸಚಿವ ರಮೇಶ್ ಜಾರಕಿಹೊಳಿ
ಬಿಜೆಪಿ ಮೂಲಗಳ ಪ್ರಕಾರ ಸಚಿವರಾದ ಶಶಿಕಲಾ ಜೊಲ್ಲೆ, ಪ್ರಭು ಚವ್ಹಾಣ್, ಸಿ.ಸಿ.ಪಾಟೀಲ್, ಕೋಟಾ ಶ್ರೀನಿವಾಸಪೂಜಾರಿ ಸೇರಿದಂತೆ 3 ರಿಂದ 4 ಸಚಿವರು ತಮ್ಮ ಸ್ಥಾನ ಕಳೆದುಕೊಳ್ಳಲಿದ್ದಾರೆ.
ಯಾರು ಇನ್..?
ಸದ್ಯ ಖಾಲಿ ಉಳಿದಿರುವ ಸಚಿವ ಸ್ಥಾನಗಳನ್ನು ಸೇರಿಸಿ ಹುಕ್ಕೇರಿ ಶಾಸಕ ಉಮೇಶ್ ಕತ್ತಿ, ಎಂ.ಪಿ.ರೇಣುಕಾಚಾರ್ಯ, ಮಹಾದೇವಪುರ ಶಾಸಕ ಅರವಿಂದ ಲಿಂಬಾವಳಿ, ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ, ಸುಳ್ಯ ಶಾಸಕ ಅಂಗಾರ ಹಾಗೂ ಕುಂದಾಪುರ ಶಾಸಕ ಹಾಲಾಡಿ ಶ್ರೀ ನಿವಾಸ ಶೆಟ್ಟಿ ಮೇಲ್ಮನೆ ಸದಸ್ಯರಾದ ಎಂಟಿಬಿ.ನಾಗರಾಜ್, ಆರ್.ಶಂಕರ್ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel