ADVERTISEMENT
Friday, October 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪುರಸಭೆ ಮಹಿಳಾ ಸದಸ್ಯರನ್ನು ಎಳೆದಾಡಿದ್ರಾ ಬಿಜೆಪಿ ಎಂಎಲ್‍ಎ ಸಿದ್ದು ಸವದಿ..!

Kariyappa N by Kariyappa N
November 11, 2020
in Newsbeat, Politics, Samagra karnataka, ರಾಜ್ಯ
mla halle
Share on FacebookShare on TwitterShare on WhatsappShare on Telegram

ಬಾಗಲಕೋಟೆ: ಬಾಗಲಕೋಟೆ ಪುರಸಭೆಯ ಅಧ್ಯಕ್ಷ ಸ್ಥಾನ ಚುನಾವಣೆ ವೇಳೆ ತೆರೆದಾಳ ಬಿಜೆಪಿ ಶಾಸಕ ಸಿದ್ದು ಸವದಿ ಮಹಿಳಾ ಸದಸ್ಯೆಯೊಬ್ಬರನ್ನು ಎಳೆದಾಡಿ ಅಸಭ್ಯ ವರ್ತನೆ ತೋರಿದ ಆರೋಪ ಕೇಳಿ ಬಂದಿದೆ.
ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿತ್ತು. ಈ ವೇಳೆ ಅಧ್ಯಕ್ಷೆ ಸ್ಥಾನದ ಆಕಾಂಕ್ಷಿ ಸವಿತಾ ಹುರಕಡ್ಲಿ ಅವರನ್ನು ಶಾಸಕ ಸಿದ್ದು ಸವದಿ ಎಳೆದಾಡಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಬಿಜೆಪಿ ಸದಸ್ಯೆ ಸವಿತಾ ಹುರಕಡ್ಲಿ ಕಾಂಗ್ರೆಸ್ ಗೆ ಬೆಂಬಲಿಸಲು ಮುಂದಾದಾಗ ಶಾಸಕ ಸಿದ್ದು ಸವದಿ, ಅವರನ್ನು ತಳ್ಳಾಡಿ ಅಸಭ್ಯ ವರ್ತನೆ ತೋರಿದ್ದಾರೆಂದು ಹೇಳಲಾಗುತ್ತಿದೆ. ನೂಕಾಟದ ಮಧ್ಯೆ ಮಹಿಳಾ ಸದಸ್ಯೆ ಕೆಳಕ್ಕೆ ಬಿದ್ದಿದ್ದು, ಶಾಸಕರ ಈ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.

savadi siddu
ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದು ಸವದಿ, ಮಹಿಳೆಯರ ಬಗ್ಗೆ ಗೌರವವಿದೆ. ಮಹಿಳಾ ಸದಸ್ಯರನ್ನು ಎಳೆದಾಡಿ, ಅಸಭ್ಯ ವರ್ತನೆ ನಡೆಸಿಲ್ಲ. ಬಹುಮತವಿರುವ ಬಿಜೆಪಿ ಸದಸ್ಯರು ನಮ್ಮವರು, ವಿನಾಕಾರಣ ಅವರಿಗೆ ಆಮಿಷವೊಡ್ಡಿ ಕಿಡ್ನಾಪ್ ಮಾಡುವ ನೀಚ ರಾಜಕಾರಣವನ್ನು ಕಾಂಗ್ರೆಸ್ ನಡೆಸುತ್ತಿದೆ. ಹಕ್ಕು ಮಂಡನೆಗೆ ಅವಕಾಶ ನೀಡಿಲ್ಲವೆಂದು ಮಾಜಿ ಸಚಿವೆ ಉಮಾಶ್ರೀ ನೀಡಿರುವ ಹೇಳಿಕೆ ಶುದ್ಧ ಸುಳ್ಳು. ಅಂತಹ ಕೀಳುಮಟ್ಟದ ರಾಜಕೀಯ ನಡೆಸುವ ಸಂಸ್ಕøತಿ ಬಿಜೆಪಿಯಲ್ಲಿ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ಮಹಾಲಿಂಗಪುರ ಪುರಸಭೆಯಲ್ಲಿ ಬಹುಮತವಿದ್ದರೂ ಕಾಂಗ್ರೆಸ್ ವಾಮಮಾರ್ಗದಿಂದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಪಡೆಯಬೇಕೆಂಬ ಹುನ್ನಾರ ನಡೆಸಿರುವುದು ಜನತೆಗೆ ಅರಿವಾಗಿದೆ. ರಾತ್ರೋರಾತ್ರಿ ಸದಸ್ಯರನ್ನು ಕಿಡ್ನಾಪ್ ಮಾಡಿದ್ದಲ್ಲದೆ, ಉಮಾಶ್ರೀಯವರೇ ಮಹಿಳೆಯರ ಮೇಲೆ ಅಗೌರವ ತರುವ ರೀತಿಯಲ್ಲಿ ವರ್ತನೆ ನಡೆಸಿದ್ದಾರೆಂದು ಸವದಿ ಆರೋಪಿಸಿದ್ದಾರೆ.

Related posts

ಅಂದು ಗುರು ಇಂದು ವಿರೋಧಿ ಸುಧಾಕರ್ ಮತ್ತು ಪ್ರದೀಪ್ ಈಶ್ವರ್ ನಡುವೆ ಶುರುವಾಯ್ತು ರಾಜಕೀಯ ಕೆಸರೆರಚಾಟ

ಅಂದು ಗುರು ಇಂದು ವಿರೋಧಿ ಸುಧಾಕರ್ ಮತ್ತು ಪ್ರದೀಪ್ ಈಶ್ವರ್ ನಡುವೆ ಶುರುವಾಯ್ತು ರಾಜಕೀಯ ಕೆಸರೆರಚಾಟ

October 2, 2026
ಚಿನ್ನದ ಪದಕ ಗೆದ್ದರೂ ಅಭಿನಂದಿಸುವ ಸೌಜನ್ಯ ತೋರದ ಕರ್ನಾಟಕ ಸರ್ಕಾರ:ಅಪ್ಪಟ ಕನ್ನಡತಿ ಪೂವಮ್ಮಗೆ ರಾಜ್ಯದಲ್ಲಿ ಸಿಗದ ಮನ್ನಣೆ- ಚಿನ್ನ ಗೆದ್ದ ಸಾಧಕಿಯನ್ನು ಅಭಿನಂದಿಸದ ಸರ್ಕಾರದ ವಿರುದ್ಧ ಕ್ರೀಡಾ ಪ್ರೇಮಿಗಳ ಆಕ್ರೋಶ

ಚಿನ್ನದ ಪದಕ ಗೆದ್ದರೂ ಅಭಿನಂದಿಸುವ ಸೌಜನ್ಯ ತೋರದ ಕರ್ನಾಟಕ ಸರ್ಕಾರ:ಅಪ್ಪಟ ಕನ್ನಡತಿ ಪೂವಮ್ಮಗೆ ರಾಜ್ಯದಲ್ಲಿ ಸಿಗದ ಮನ್ನಣೆ- ಚಿನ್ನ ಗೆದ್ದ ಸಾಧಕಿಯನ್ನು ಅಭಿನಂದಿಸದ ಸರ್ಕಾರದ ವಿರುದ್ಧ ಕ್ರೀಡಾ ಪ್ರೇಮಿಗಳ ಆಕ್ರೋಶ

October 2, 2026

ಬಿಜೆಪಿ ನಾಯಕರಿಗೆ ನಿಯಂತ್ರಣವೇ ಇಲ್ಲದಂತಾಗಿದೆ: ಡಿ.ಕೆ ಶಿವಕುಮಾರ್
ರಾಜ್ಯದಲ್ಲಿ ಬಿಜೆಪಿ ನಾಯಕರಿಗೆ ಯಾರ ನಿಯಂತ್ರಣವೂ ಇಲ್ಲದಂತಾಗಿದ್ದು, ತಾವು ಏನು ಮಾಡಿದರೂ ನಡೆಯುತ್ತದೆ ಎಂಬ ಮನಸ್ಥಿತಿಗೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕಿಸಿದ್ದಾರೆ.


ತೇರದಾಳ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಪುರಸಭೆ ಕಾಂಗ್ರೆಸ್ ಸದಸ್ಯೆ ಸವಿತಾ ಹುರಕಡ್ಲಿ ಅವರ ಮೇಲೆ ಹಲ್ಲೆ ನಡೆಸಿರುವ ವಿಚಾರವಾಗಿ ಮಾತನಾಡಿರುವ ಡಿಕೆಶಿ, ‘ಇದು ಬಿಜೆಪಿಯ ಸಂಸ್ಕøತಿ. ಬಿಜೆಪಿ ನಾಯಕರು ಯಾರಿಗೆ ಏನು ಬೇಕಾದರೂ ಮಾಡಬಹುದು ಎಂಬ ಹವ್ಯಾಸ ಹಾಗೂ ಅಭ್ಯಾಸ ಬೆಳೆಯುತ್ತಿದೆ. ಬಿಜೆಪಿಯ ಯಾವುದೇ ಶಾಸಕರು, ನಾಯಕರಿಗೆ ನಿಯಂತ್ರಣವೇ ಇಲ್ಲದಂತಾಗಿದೆ. ಕಾಪೆರ್Çರೇಟರ್ ನಿಂದ ಕೌನ್ಸಲರ್ ವರೆಗೂ ಎಲ್ಲೆಡೆ ಇಂತಹ ಘಟನೆ ನಡೆಯುತ್ತಿದೆ. ಬೇರೆ ಸಮಯದಲ್ಲಿ ಪೆÇಲೀಸರು ಸುಮೋಟೋ ಪ್ರಕರಣ ದಾಖಲಿಸುತ್ತಾರೆ. ಈ ಘಟನೆ ಪೆÇಲೀಸರ ಸಮ್ಮುಖದಲ್ಲೇ ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆದರೂ ಯಾವುದೇ ಕ್ರಮ ಕೈಗೊಂಡಿಲ್ಲ.

ತಪ್ಪಿತಸ್ಥರ ವಿರುದ್ಧ ಕ್ರಮ 
ಮಹಾಲಿಂಗಪುರ ಪುರಸಭೆಯಲ್ಲಿ ನಡೆದ ಗಲಾಟೆ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಇಲ್ಲಿಯವರೆಗೂ ಯಾರೂ ದೂರು ನೀಡಿಲ್ಲ. ಮಹಾಲಿಂಗಪುರ ಪೆÇಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಪರಿಸ್ಥಿತಿ ಕೈ ಮೀರಿದಾಗ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ಬಾಗಲಕೋಟೆ ಎಸ್ಪಿ ಲೋಕೇಶ್ ಪ್ರತಿಕ್ರಿಯೆ ನೀಡಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: attack lady corporatorbagalkotebjp mlamahalingapurasiddu savadi
ShareTweetSendShare
Join us on:

Related Posts

ಅಂದು ಗುರು ಇಂದು ವಿರೋಧಿ ಸುಧಾಕರ್ ಮತ್ತು ಪ್ರದೀಪ್ ಈಶ್ವರ್ ನಡುವೆ ಶುರುವಾಯ್ತು ರಾಜಕೀಯ ಕೆಸರೆರಚಾಟ

ಅಂದು ಗುರು ಇಂದು ವಿರೋಧಿ ಸುಧಾಕರ್ ಮತ್ತು ಪ್ರದೀಪ್ ಈಶ್ವರ್ ನಡುವೆ ಶುರುವಾಯ್ತು ರಾಜಕೀಯ ಕೆಸರೆರಚಾಟ

by Shwetha
October 2, 2026
0

ಚಿಕ್ಕಬಳ್ಳಾಪುರ: ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ ಮಿತ್ರರೂ ಇಲ್ಲ ಎಂಬ ಮಾತಿಗೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಈಗ ಸಾಕ್ಷಿಯಾಗುತ್ತಿದೆ. ಚುನಾವಣೆ ಮುಗಿದ ಹೊಸತರಲ್ಲಿ ಅಣ್ಣ... ಗುರು... ಎಂದು...

ಚಿನ್ನದ ಪದಕ ಗೆದ್ದರೂ ಅಭಿನಂದಿಸುವ ಸೌಜನ್ಯ ತೋರದ ಕರ್ನಾಟಕ ಸರ್ಕಾರ:ಅಪ್ಪಟ ಕನ್ನಡತಿ ಪೂವಮ್ಮಗೆ ರಾಜ್ಯದಲ್ಲಿ ಸಿಗದ ಮನ್ನಣೆ- ಚಿನ್ನ ಗೆದ್ದ ಸಾಧಕಿಯನ್ನು ಅಭಿನಂದಿಸದ ಸರ್ಕಾರದ ವಿರುದ್ಧ ಕ್ರೀಡಾ ಪ್ರೇಮಿಗಳ ಆಕ್ರೋಶ

ಚಿನ್ನದ ಪದಕ ಗೆದ್ದರೂ ಅಭಿನಂದಿಸುವ ಸೌಜನ್ಯ ತೋರದ ಕರ್ನಾಟಕ ಸರ್ಕಾರ:ಅಪ್ಪಟ ಕನ್ನಡತಿ ಪೂವಮ್ಮಗೆ ರಾಜ್ಯದಲ್ಲಿ ಸಿಗದ ಮನ್ನಣೆ- ಚಿನ್ನ ಗೆದ್ದ ಸಾಧಕಿಯನ್ನು ಅಭಿನಂದಿಸದ ಸರ್ಕಾರದ ವಿರುದ್ಧ ಕ್ರೀಡಾ ಪ್ರೇಮಿಗಳ ಆಕ್ರೋಶ

by Shwetha
October 2, 2026
0

ಮಂಗಳೂರು: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ ಅಪ್ಪಟ ಕನ್ನಡತಿ ಎಂ ಆರ್ ಪೂವಮ್ಮ ಅವರ ಅಪ್ರತಿಮ ಸಾಧನೆಯನ್ನು ರಾಜ್ಯ...

ಸಬ್ಸಿಡಿ ಎಲ್‌ಪಿಜಿಗೆ ಇಂದಿನಿಂದ ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ?

ಸಬ್ಸಿಡಿ ಎಲ್‌ಪಿಜಿಗೆ ಇಂದಿನಿಂದ ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ?

by Shwetha
October 2, 2026
0

2026ರ ಅಕ್ಟೋಬರ್ 1ರಿಂದ ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್ ಪಡೆಯಲು ಬಯೋಮೆಟ್ರಿಕ್ ಆಧಾರ್ ದೃಢೀಕರಣ (BAA) ಕಡ್ಡಾಯವಾಗಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಇ-ಕೆವೈಸಿ ಪೂರ್ಣಗೊಳಿಸದ ಗ್ರಾಹಕರು ಸಿಲಿಂಡರ್...

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ಪ್ರಕಾಶ್ ರಾಜ್ ಮತ್ತು ಪ್ರದೀಪ್ ಈಶ್ವರ್ ಇಬ್ಬರೂ ಹುಚ್ಚರು: ಹುಚ್ಚರನ್ನ ಯಾರಾದ್ರೂ ಜೈಲಿಗೆ ಹಾಕ್ತಾರಾ ಎಂದು ಪ್ರಶ್ನಿಸಿದ ಪ್ರತಾಪ್ ಸಿಂಹ

by Shwetha
October 2, 2026
0

ಮೈಸೂರು: ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಇಂದು ತಮ್ಮ ವಿರೋಧಿಗಳ ವಿರುದ್ಧ ಚಾಟಿ ಬೀಸಿದ್ದು, ನಟ ಪ್ರಕಾಶ್ ರಾಜ್ ಮತ್ತು ಶಾಸಕ ಪ್ರದೀಪ್ ಈಶ್ವರ್...

ವಿಧಾನಸೌಧದ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’: ಕರವೇ ವಿರೋಧ

ವಿಧಾನಸೌಧದ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’: ಕರವೇ ವಿರೋಧ

by Shwetha
October 2, 2026
0

ವಿಧಾನಸೌಧದ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ ಆಯೋಜಿಸಲು ಮುಂದಾಗಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ವಿರೋಧ ವ್ಯಕ್ತಪಡಿಸಿದೆ.ಈ ಕುರಿತು ಸಾಮಾಜಿಕ ಜಾಲತಾಣ Xನಲ್ಲಿ ಪ್ರತಿಕ್ರಿಯಿಸಿರುವ ಕರವೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram