ದೇಶದಲ್ಲಿ 5 ಲಕ್ಷಕ್ಕಿಳಿದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ
ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾದಿಂದ ಗುಣಮುಖರಾಗುತ್ತಿರುವ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ಕಳೆದ 24 ಗಂಟೆಗಳಲ್ಲಿ 52,718 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಸಕ್ರಿಯ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 107 ದಿನಗಳ ಬಳಿಕ ಇದೇ ಮೊದಲ ಬಾರಿಗೆ 5 ಲಕ್ಷಕ್ಕಿಂತಲೂ ಕೆಳಗೆ ಇಳಿದಿದೆ.
ಕೇಂದ್ರ ಆರೋಗ್ಯ ಮತ್ತಿ ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 47,905 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 550 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 86,83,917ಕ್ಕೆ ಸಾವಿನ ಸಂಖ್ಯೆ 1,28,121ಕ್ಕೆ ಏರಿಕೆಯಾಗಿದೆ.
ಈ ನಡುವೆ 86,83,917 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 52,718 ಮಂದಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ ದೇಶದಲ್ಲಿ 4,89,294 ಸಕ್ರಿಯ ಪ್ರಕರಣಗಳಿವೆ.
ನಿನ್ನೆ ಒಂದೇ ದಿನ 11,93,358 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 12,19,62,509 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel