ಬೆಂಗಳೂರು 24- ಕರೋನಾ ಸೋಂಕು ಹರಡದಂತೆ ಕ್ರಮಕ್ಕೆ ಸಚಿವ ಡಾ. ನಾರಾಯಣಗೌಡ ಅವರಿಂದ ಸೂಚನೆ. ತೋಟಗಾರಿಕೆ, ಪೌರಾಡಳಿತ ಹಾಗೂ ರೇಷ್ಮೆ ಇಲಾಖೆ ವ್ಯಾಪ್ತಿಯ ನೌಕರರ ಸುರಕ್ಷತೆಗೆ ಕ್ರಮ ತೆಗೆದುಕೊಳ್ಳುವಂತೆ ಸಚಿವರು ಆದೇಶಿಸಿದ್ದಾರೆ. ಮೂರೂ ಇಲಾಖೆಯ ಕಾರ್ಯದರ್ಶಿಗಳಿಗೆ ಸಚಿವರು ಆದೇಶಿಸಿದ್ದಾರೆ. ಅದರಲ್ಲೂ ಪ್ರಮುಖವಾಗಿ ರೇಷ್ಮೆ ಬೆಳಗಾರರ ಸುರಕ್ಷತೆ ಬಗ್ಗೆ ಗಮನಹರಿಸಬೇಕು. ರೇಷ್ಮೆ ಗೂಡನ್ನ ಮಾರಾಟ ಮಾಡದೆ ಇಡಲು ಸಾಧ್ಯವಿಲ್ಲ. ರೈತರು ಮಾರುಕಟ್ಟೆಗೆ ಬಂದಾಗ ಜನಜಂಗುಳಿ ಆಗುತ್ತೆ. ಈ ಸಂದರ್ಭದಲ್ಲಿ ಕರೋನಾ ಸೋಂಕು ಹರಡುವ ಸಾಧ್ಯತೆ ಇರುತ್ತೆ. ಹೀಗಾಗಿ ರಾಜ್ಯದಲ್ಲಿರುವ ಎಲ್ಲ ರೇಷ್ಮೆ ಮಾರುಕಟ್ಟೆಯಲ್ಲಿ ಎಲ್ಲ ರೀತಿಯ ಸುರಕ್ಷತಾ ಕ್ರಮ ತೆಗೆದುಕೊಳ್ಳಬೇಕು. ರೈತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ತೋಟಗಾರಿಕೆ, ಪೌರಾಡಳಿತ ಹಾಗೂ ರೇಷ್ಮೆ ಸಚಿವ ಡಾ. ನಾರಾಯಣಗೌಡ ಸೂಚಿಸಿದ್ದಾರೆ.

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!
ಬೆಂಗಳೂರು: ರಾಜ್ಯದಲ್ಲಿ ಬದುಕಿರುವವರಿಗಷ್ಟೇ ಅಲ್ಲ, ಮೃತಪಟ್ಟವರಿಗೂ ಮಣ್ಣಾಗಲು ಜಾಗವಿಲ್ಲದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರೆ ಉದ್ದೇಶಗಳಿಗೆ ಹಂಚಿಕೆ ಮಾಡಿ, ಇದೀಗ ಸ್ಮಶಾನಕ್ಕೆ ಜಾಗವಿಲ್ಲದೆ...








